Telangana Congress chief detained: ತೆಲಂಗಾಣದಲ್ಲಿ ರಾಜಕೀಯ ಕಂಪನ- ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಬಂಧನ, ಕಾರಣ ತಿಳಿಯ

ಹೈದರಾಬಾದ್‌, ಅಕ್ಟೋಬರ್‌ 17: ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ತೆಲಂಗಾಣ ಕಾಂಗ್ರೆಸ್‌ನ ರಾಜ್ಯ ಘಟಕದ ಅಧ್ಯಕ್ಷ ರೇವಂತ್‌ ರೆಡ್ಡಿ ಅವರನ್ನು ಬಂಧಿಸಲಾಗಿದೆ. ರೆಡ್ಡಿ ಅವರನ್ನು ಬಂಧಿಸಿರುವ ತೆಲಂಗಾಣ ಪೊಲೀಸರು ಹೈದರಾಬಾದ್‌ನ ಗನ್ ಪಾರ್ಕ್‌ನಲ್ಲಿ ಇರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಹಣ ಮತ್ತು ಮದ್ಯವನ್ನು ಬಳಸುವುದಿಲ್ಲ ಎಂದು ಪ್ರಮಾಣ ಮಾಡುವಂತೆ ರೆಡ್ಡಿ ಅವರು ಚಂದ್ರಶೇಖರ್ ರಾವ್ ಅವರನ್ನು ಒತ್ತಾಯಿಸುತ್ತಿದ್ದರು. ಈ ಕುರಿತು ಆಣೆ ಪ್ರಮಾಣ ಮಾಡಲೇ ಬೇಕೆಂದು ಹೈದರಾಬಾದ್‌ನಲ್ಲಿ ಪ್ರತಿಭಟನೆಗೆ ಮುಂದಾಗಿದ್ದರು.

Telangana Congress chief Revanth Reddy detained: what is the reason?

ತೆಲಂಗಾಣ ಚುನಾವಣೆಯಲ್ಲಿ ಮತದಾರರಿಗೆ ಹಣ ಹಂಚಲು ಕಾಂಗ್ರೆಸ್‌ ಮುಂದಾಗಿದೆ. ಈ ಹಣವು ಕರ್ನಾಟಕದಿಂದ ಬರಲಿದೆ ಎಂದು ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಆರೋಪಿಸಿದೆ.

ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ರೇವಂತ್‌ ರೆಡ್ಡಿ ಪ್ರತಿಭಟನೆ ನಡೆಸಿದ್ದಾರೆ. ತಮಗೆ ಕರ್ನಾಟಕದಿಂದ ಹಣ ಬರುತ್ತಿಲ್ಲವೆಂದು ಪ್ರಮಾಣ ಮಾಡಿದ್ದಾರೆ.

ರೇವಂತ್‌ ರೆಡ್ಡಿ ಅವರು ತಮ್ಮ ಬೆಂಬಲಿಗರೊಂದಿಗೆ ವಿಧಾನಸೌಧದ ಗನ್ ಪಾರ್ಕ್‌ನಲ್ಲಿರುವ ತೆಲಂಗಾಣ ಹುತಾತ್ಮರ ಸ್ಮಾರಕಕ್ಕೆ ಆಗಮಿಸಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ.

Telangana Congress chief Revanth Reddy detained: what is the reason?

ಇದಕ್ಕೆ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಮುಖಂಡರನ್ನು ಅಲ್ಲಿ ಸೇರದಂತೆ ತಡೆದಿದ್ದಾರೆ. ಇದು ಪೊಲೀಸರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಈ ಹಿನ್ನೆಲೆಯಲ್ಲಿ ರೇವಂತ್‌ ರೆಡ್ಡಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರೇವಂತ್ ರೆಡ್ಡಿ ಅವರನ್ನು ಪೊಲೀಸ್ ವಾಹನಕ್ಕೆ ಸ್ಥಳಾಂತರಿಸಲಾಯಿತು. ನಂತರ ಪಕ್ಷದ ಪ್ರಧಾನ ಕಚೇರಿಯಾದ ಗಾಂಧಿ ಭವನಕ್ಕೆ ಬಿಡಲಾಯಿತು ಎಂದು ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

ಮಾಜಿ ಸಂಸದ ಅಂಜನ್ ಕುಮಾರ್ ಯಾದವ್ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಪೊಲೀಸರ ಕ್ರಮವನ್ನು ವಿರೋಧಿಸಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ಪೋಲೀಸರು ಅವರನ್ನು ಬಂಧಿಸಿ ವಾಹನಗಳಲ್ಲಿ ಹತ್ತಿಕೊಂಡರು. ಈ ಬೆಳವಣಿಗಗಳು ತೆಲಂಗಾಣ ರಾಜಕಾರಣದಲ್ಲಿ ತೀವ್ರ ಪ್ರತಿಭಟನೆಗೆ ಕಾರಣವಾಗಿದೆ.

ತೆಲಂಗಾಣ ವಿಧಾನಸಭೆ ಚುನಾವಣೆಯು ನವೆಂಬರ್ 30, 2023 ರಂದು ನಡೆಯಲಿದೆ. ಡಿಸೆಂಬರ್ 3, 2023 ರಂದು ಮತಗಳ ಎಣಿಕೆ ನಡೆಯಲಿದೆ.

ಈ ಬಾರಿಯ ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಆರ್‌ಎಸ್ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಬಹುತೇಕ ಸಮೀಕ್ಷೆಗಳ ಪ್ರಕಾರ, ಕಾಂಗ್ರೆಸ್‌ ಗೆಲುವು ಸಾಧಿಸುವ ಸಾಧ್ಯತೆ ಇದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+