Revanth Reddy: ತೆಲಂಗಾಣದ 2ನೇ ಮುಖ್ಯಮಂತ್ರಿ ಆಗಿ ರೇವಂತ್ ರೆಡ್ಡಿ ಪ್ರಮಾಣ ವಚನ, ಡಿಸಿಎಂ ಯಾರು?
ಹೈದರಾಬಾದ್, ಡಿಸೆಂಬರ್ 07: ತೆಲಂಗಾಣದಲ್ಲಿ ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷದಿಂದ ಅವಿರೋಧವಾಗಿ ಆಯ್ಕೆಯಾದ ರೇವಂತ್ ರೆಡ್ಡಿ ಅವರು ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ತೆಲಂಗಾಣ ಪ್ರತ್ಯೇಕಗೊಂಡ ಬಳಿಕ ಎರಡನೇ ಸಿಎಂ ಆದ ಹೆಗ್ಗಳಿಕೆ ರೇವಂತ್ ರೆಡ್ಡಿ ಪಾತ್ರವಾಗಿದ್ದಾರೆ.
ಇಂದು ಗುರುವಾರ ತೆಲಂಗಾಣದಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ರೇವಂತ್ ರೆಡ್ಡಿ ಅವರು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರೊಂದಿಗೆ ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಉಪಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇವರೊಂದಿಗೆ ಒಟ್ಟು ಹತ್ತು ಮಂದಿ ನಾಯಕರು ರೇವಂತ್ ರೆಡ್ಡಿ ನೇತೃತ್ವದ ಸರ್ಕಾರದಲ್ಲಿ ಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದರು.

ದೇವರ ಹೆಸರಿನಲ್ಲಿ ಪ್ರಮಾಣ ವಚನ
ಕಾಂಗ್ರೆಸ್‌ನ ತೆಲಂಗಾಣದ ಅಧ್ಯಕ್ಷರಾಗಿದ್ದ ರೇವಂತ್ ರೆಡ್ಡಿ ಅವರು ಚೊಚ್ಚಲ ಬಾರಿಗೆ ತೆಲಂಗಾಣ ಮುಖ್ಯಮಂತ್ರಿಗಳಾಗಿ ದೇವರ ಹೆಸರಿನಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಅವರಿಗೆ ತೆಲಂಗಾಣ ರಾಜ್ಯಪಾಲರಾದ ತಮಿಳಿಸೈ ಸೌಂದರ್ಯರಾಜನ್ ಪ್ರಮಾಣ ವಚನ ಬೋಧಿಸಿದರು.
ತೆಲಂಗಾಣದಲ್ಲಿ ಅಧಿಕಾರ ಪಡೆದಿರುವ ಕಾಂಗ್ರೆಸ್ ನಿಂದ ಎರಡನೇ ಮುಖ್ಯಮಂತ್ರಿ ರಾಜ್ಯಕ್ಕೆ ಸಿಕ್ಕಂತಾಗಿದೆ. ತೆಲಂಗಾಣ ಪ್ರತ್ಯೇಕ ರಾಜ್ಯವಾಗಿ ಬೇರ್ಪಟ್ಟ ಬಳಿಕ ಬಿಆರ್‌ಎಸ್ ಎರಡು ಅವಧಿಗೆ ಅಧಿಕಾರಕ್ಕೆ ಬಂದಿದ್ದು, ಅಲ್ಲಿ ಕೆ.ಚಂದ್ರಶೇಖರ್ ರಾವ್ ಅವರೇ ಎರಡು ಬಾರಿ ಆಡಳಿತ ನೀಡಿದ್ದರು.
ಹತ್ತು ಮಂದಿ ನೂತನ ಸಚಿವರ ಮಾಹಿತಿ
2023ರ ಚುನಾವಣೆಯಲ್ಲಿ ಬಿಆರ್‌ಎಸ್ ಅನ್ನು ಹಿಂದಿಕ್ಕುವ ಮೂಲಕ ಕಾಂಗ್ರೆಸ್‌ನ ರೇವಂತ್ ರೆಡ್ಡಿ ಅವರು ರಾಜ್ಯ ಎರಡನೇ ಮುಖ್ಯಮಂತ್ರಿಯಾದರು. ಇವರೊಂದಿಗೆ ರೆಡ್ಡಿ ನೂತನ ಸಚಿವರಾಗಿ ಕೊಮಿಟಿರೆಡ್ಡಿ ವೆಂಕಟರೆಡ್ಡಿ, ದುದ್ದಿಲ್ಲ ಶ್ರೀಧರ್ ಬಾಬು, ಪೊಂಗುಲೇಟಿ ಶ್ರೀನಿವಾಸರೆಡ್ಡಿ, ಪೊನ್ನಂ ಪ್ರಭಾಕರ್, ನಾಲಮಾಡ ಉತ್ತಮ್ ಕುಮಾರ್ ರೆಡ್ಡಿ, ಸಿ.ದಾಮೋದರ್ ರಾಜಾನರಸಿಂಹ, ಕೊಂಡಾ ಸುರೇಖಾ, ಜೂಪಲ್ಲಿ ಕೃಷ್ಣಾರಾವ್ಅನುಸೂಯಾ ಸೀತಕ್ಕ, ತುಮ್ಮಲ ನಾಗೇಶ್ವರರಾವ್ ಅವರು ಪ್ರಮಾಣವಚನ ಸ್ವೀಕರಿಸಿದರು.
ಹೈದರಾಬಾದ್‌ನ ಎಲ್‌ಬಿ ಸ್ಟೇಡಿಯಂ ನಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಸಾವಿರಾರು ಕಾರ್ಯಕರ್ತರು, ಮುಖಂಡರ ಸಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ನಡೆಯಿತು. ಅನೇಕ ಅತಿಥಿಗಳು ಸಮಾರಂಭಕ್ಕೆ ಆಗಮಿಸಿದ್ದು, 500 ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.












Click it and Unblock the Notifications