Telangana polls 2023: ತೆರೆಯಲೇ ಇಲ್ಲ ಕಾಂಗ್ರೆಸ್ ಬಾಗಿಲು- ರೊಚ್ಚಿಗೆದ್ದ ವೈಎಸ್ ಶರ್ಮಿಳಾರಿಂದ ಏಕಾಂಗಿ ಹೋರಾಟದ ನಿರ್ಧಾರ
ಹೈದರಾಬಾದ್, ಅಕ್ಟೋಬರ್ 12: ವೈಎಸ್‌ಆರ್ ತೆಲಂಗಾಣ ಪಕ್ಷದ (ವೈಎಸ್‌ಆರ್‌ಟಿಪಿ) ನಾಯಕಿ ವೈಎಸ್ ಶರ್ಮಿಳಾ ಅವರಿಗೆ ಕಾಂಗ್ರೆಸ್ 'ಕೈ' ಕೊಟ್ಟಿದೆ. ತೆಲಂಗಾಣ ವಿಧಾನಸಭೆಗೆ ಕೆಲ ತಿಂಗಳು ಬಾಕಿ ಇರುವಾಗ ಶರ್ಮಿಳಾ ಅವರು ಕಾಂಗ್ರೆಸ್ ಸೇರಲು ಯತ್ನಿಸಿದ್ದರು. ತಮ್ಮ ಪಕ್ಷವನ್ನು ಕಾಂಗ್ರೆಸ್‌ನೊಳಗೆ ವಿಲೀನಗೊಳಿಸುವದಾಗಿ ತಿಳಿಸಿದ್ದಾರೆ. ಆದರೆ, ಅವರ ಕನಸು ನನಸಾಗಲೇ ಇಲ್ಲ.
ಈಗ ಎಲ್ಲ ಊಹಾಪೋಹಗಳಿಗೆ ವೈಎಸ್ ಶರ್ಮಿಳಾ ತೆರೆ ಎಳೆದಿದ್ದಾರೆ. ನವೆಂಬರ್ 30 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಗುರುವಾರ ಘೋಷಿಸಿದ್ದಾರೆ.
ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿಯಾಗಿರುವ ಶರ್ಮಿಳಾ ಅವರು, ತಮ್ಮ ತಾಯಿ ವೈಎಸ್ ವಿಜಯಮ್ಮ ಮತ್ತು ಪತಿ ಅನಿಲ್ ಕುಮಾರ್ ಕೂಡ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ನಡೆಸಿದ್ದೇನೆ. ಆದರೆ, ಕಾಂಗ್ರೆಸ್ ಹೈಕಮಾಂಡ್‌ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಶರ್ಮಿಳಾ ತಿಳಿಸಿದ್ದಾರೆ.
ಪಲೇರ್ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಶರ್ಮಿಳಾ ಹೇಳಿದ್ದಾರೆ. 'ನಾನು ಪಲೇರ್ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ. ನಮ್ಮ ಪಕ್ಷವು ಎಲ್ಲಾ 119 ಸ್ಥಾನಗಳಲ್ಲಿ ಚುನಾವಣೆಗೆ ಸ್ಪರ್ಧಿಸಲಿದೆ. ನನ್ನ ತಾಯಿ ವಿಜಯಮ್ಮ ಮತ್ತು ಪತಿ ಅನಿಲ್ ಕೂಡ ಚುನಾವಣೆಯಲ್ಲಿ ಸ್ಪರ್ಧಿಸಬಹುದು' ಎಂದು ಅವರು ಹೇಳಿದ್ದಾರೆ.
ನನಗೆ ಎರಡು ಸ್ಥಾನಗಳಿಂದ ಚುನಾವಣೆಗೆ ಸ್ಪರ್ಧಿಸಲು ಒತ್ತಾಯಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕೆಸಿಆರ್ ವಿರೋಧಿ ಮತಗಳು ವಿಭಜನೆಯಾಗುವುದು ಬೇಡ ಎಂಬುದ ನಮ್ಮ ಆಶಯವಾಗಿದೆ. ಈ ಕುರಿತು ಕಾಂಗ್ರೆಸ್‌ನೊಂದಿಗೆ ಮಾತನಾಡಿದ್ದೇವೆ. ನಾವು ನಾಲ್ಕು ತಿಂಗಳಿನಿಂದ ಕಾಯುತ್ತಿದ್ದೇವೆ. ಆದರೆ, ಕಾಂಗ್ರೆಸ್‌ನಿಂದ ಯಾವುದೇ ಸೂಚನೆ ನಮಗೆ ಬಂದಿಲ್ಲವೆಂದು ಅವರು ಹೇಳಿದ್ದಾರೆ.
ಶರ್ಮಿಳಾ ಅವರು ಜುಲೈ 8, 2021 ರಂದು ತಮ್ಮ ತಂದೆ ಮತ್ತು ಮಾಜಿ ಮುಖ್ಯಮಂತ್ರಿ ದಿವಂಗತ ವೈ ಎಸ್ ರಾಜಶೇಖರ್ ರೆಡ್ಡಿ (ವೈಎಸ್ಆರ್) ಅವರ ಜನ್ಮದಿನದಂದು ಹೊಸ ಪಕ್ಷವನ್ನು ಸ್ಥಾಪಿಸಿದರು.
ಇಡೀ ರಾಜ್ಯಾದ್ಯಂತ ಬೆಂಬಲವನ್ನು ಹೊಂದಿರುವುದಾಗಿ ಪಕ್ಷವು ಪ್ರತಿಪಾದಿಸುತ್ತಿದೆ. ಆದರೆ, ಕಳೆದ ಚುನಾವಣೆಯ ಸಮಯದಲ್ಲಿ ಪಕ್ಷವು ಒಂದೇ ಒಂದು ಸ್ಥಾನವನ್ನೂ ಗೆದ್ದಿಲ್ಲ. ಪಕ್ಷವು ಯಾವುದೇ ಶಾಸಕರನ್ನು ಹೊಂದಿಲ್ಲ.

ತೆಲಂಗಾಣ ವಿಧಾನಸಭೆ ಚುನಾವಣೆ
119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ನವೆಂಬರ್ 30 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ. ತೆಲಂಗಾಣವು 3 ಕೋಟಿಗೂ ಅಧಿಕ ಮತದಾರರನ್ನು ಹೊಂದಿದೆ. ಇತ್ತೀಚೆಗೆ 17 ಲಕ್ಷ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ ಆಯೋಗ ಅಭಿಪ್ರಾಯಪಟ್ಟಿದೆ.
ಆಡಳಿತರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್), ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ನಡುವೆ ಸ್ಪರ್ಧೆಯನ್ನು ಏರ್ಪಡುವ ನಿರೀಕ್ಷೆ ಇದೆ. 2018 ರ ಚುನಾವಣೆಯಲ್ಲಿ, ಬಿಆರ್‌ಎಸ್ 88 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಾಂಗ್ರೆಸ್ 19 ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ಎಐಎಂಐಎಂ 7 ಕ್ಷೇತ್ರಗಳಲ್ಲಿ ಜಯಸಾಧಿಸಿದೆ. ತೆಲುಗು ದೇಶಂ ಪಕ್ಷ 2 ಸ್ಥಾನ, ಬಿಜೆಪಿ 1 ಸ್ಥಾನದಲ್ಲಿ ಗೆದ್ದಿದೆ.
ಟಿಆರ್‌ಎಸ್ ಶೇ 46.87ರಷ್ಟು ಮತಗಳನ್ನು ಪಡೆದುಕೊಂಡಿದೆ. ಕಾಂಗ್ರೆಸ್ ಶೇ 28.43ರಷ್ಟು ಮತಗಳನ್ನು ಗಳಿಸಿದರೆ, ಎಐಎಂಐಎಂ ಶೇ 2.71 ರಷ್ಟು ಮತಗಳನ್ನು ಗಳಿಸಿದೆ. ಟಿಡಿಪಿ ಶೇ 3.51 ಮತಗಳನ್ನು ಪಡೆದರೆ, ಬಿಜೆಪಿ ಶೇ 6.98ರಷ್ಟು ಮತಗಳನ್ನು ಪಡೆದಿದೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications