Telangana: ತೆಲಂಗಾಣ ಜನತೆಗೆ ಮಲ್ಲಿಕಾರ್ಜುನ ಖರ್ಗೆ ಧನ್ಯವಾದ: ರೇವಂತ್ ರೆಡ್ಡಿ ಹೇಳಿದ್ದೇನು?

ತೆಲಂಗಾಣದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವಿನತ್ತ ಮುನ್ನಡೆದಿದೆ. 69ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವಿನತ್ತ ಮುನ್ನಡೆದಿದೆ. ಈಗಾಗಲೇ ಸರ್ಕಾರ ರಚಿಸುವ ಉತ್ಸಾಹದಲ್ಲಿರುವ ಕಾಂಗ್ರೆಸ್ ಸಂಭ್ರಮಾಚರಣೆ ಮಾಡುತ್ತಿದೆ.

4 ರಾಜ್ಯಗಳ ಮತ ಎಣಿಕೆಯಲ್ಲಿ ಕಾಂಗ್ರೆಸ್ ಮೂರು ರಾಜ್ಯಗಳಲ್ಲಿ ಸೋಲನುಭವಿಸಿದ್ದು, ತೆಲಂಗಾಣದಲ್ಲಿ ಮಾತ್ರ ಗೆಲುವಿನ ನಗೆ ಬೀರಿದೆ. ತೆಲಂಗಾಣದಲ್ಲಿ ಕರ್ನಾಟಕ ರಾಜಕೀಯ ಪ್ರಭಾವ ಹೆಚ್ಚಾಗಿತ್ತು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಚಿವರು ಪ್ರಚಾರ ಮಾಡಿದ್ದರು.

Telangana Election: AICC President Mallikarjun Kharge Expresses Gratitude to Telangana Voters

ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು ಖಚಿತವಾದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದು ತೆಲಂಗಾಣ ಮತದಾರರಿಗೆ ಧನ್ಯವಾದ ತಿಳಿಸಿದ್ದಾರೆ. "ತೆಲಂಗಾಣ ಜನತೆಯಿಂದ ನಾವು ಪಡೆದ ಜನಾದೇಶಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ." ಎಂದು ಹೇಳಿದ್ದಾರೆ.

"ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ನಮಗೆ ಮತ ನೀಡಿದ ಎಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಈ ಮೂರು ರಾಜ್ಯಗಳಲ್ಲಿ ನಮ್ಮ ಸಾಧನೆ ನಿರಾಶಾದಾಯಕವಾಗಿರುವುದರಲ್ಲಿ ಸಂದೇಹವಿಲ್ಲ, ಆದರೆ ಸಂಕಲ್ಪದೊಂದಿಗೆ, ಈ ಮೂರು ರಾಜ್ಯಗಳಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಮತ್ತು ಪುನರುಜ್ಜೀವನಗೊಳಿಸುವ ನಮ್ಮ ಬಲವಾದ ಸಂಕಲ್ಪದೊಂದಿಗೆ ಕೆಲಸ ಮಾಡುತ್ತೇವೆ" ಎಂದು ಹೇಳಿದ್ದಾರೆ.

ಈ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವು ಉತ್ಸಾಹಭರಿತ ಪ್ರಚಾರವನ್ನು ನಡೆಸಿತು. ನಮ್ಮ ಲಕ್ಷಾಂತರ ಕಾರ್ಯಕರ್ತರ ಶ್ರಮವನ್ನು ನಾನು ಗುರುತಿಸುತ್ತೇನೆ ಮತ್ತು ಪ್ರಶಂಸಿಸುತ್ತೇನೆ. ನಾವು ತಾತ್ಕಾಲಿಕ ಹಿನ್ನಡೆಗಳನ್ನು ನಿವಾರಿಸುತ್ತೇವೆ ಮತ್ತು ಭಾರತ ಪಕ್ಷಗಳೊಂದಿಗೆ ಮುಂಬರುವ ಲೋಕಸಭೆ ಚುನಾವಣೆಗೆ ನಾವು ಸಿದ್ದವಾಗುತ್ತೇವೆ ಎಂದು ಹೇಳಿದ್ದಾರೆ.

ರೇವಂತ್ ರೆಡ್ಡಿ ಧನ್ಯವಾದ

ಗೆಲುವಿನ ಬಳಿಕ ಮಾತನಾಡಿದ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಕೊಡಂಗಲ್ ಜನತೆಗೆ ಧನ್ಯವಾದ ತಿಳಿಸಿದ್ದಾರೆ. "ಆತ್ಮಗೌರವದ ಬಾವುಟವನ್ನು ಆಕಾಶದ ಎತ್ತರಕ್ಕೆ ಹಾರಿಸಿದಿ ಕೊಡಂಗಲ್ ಜನತೆಗೆ ಶಿರಬಾಗಿ ನಮಿಸುತ್ತೇನೆ. ಕೊನೆ ಉಸಿರು ಇರುವವರೆಗೂ ಕೋಡಂಗಲ್ ಉಸಿರಾಗಿ ಇರುತ್ತೇನೆ. ಕಷ್ಟಕಾಲದಲ್ಲಿ ಕಾಂಗ್ರೆಸ್ ಬಾವುಟವನ್ನು ಹೆಗಲ ಮೇಲೆ ಹೊತ್ತ ಪ್ರತಿ ಕಾರ್ಯಕರ್ತರನ್ನು ಹೃದಯಲ್ಲಿಟ್ಟುಕೊಂಡು ನೋಡಿಕೊಳ್ಳುತ್ತೇನೆ. ಈ ನೆಲದಲ್ಲಿ ಪ್ರತಿಯೊಬ್ಬರ ಬದುಕನ್ನು ಹಸನಾಗಿಸುವ ಜವಾಬ್ದಾರಿ ತೆಗೆದುಕೊಳ್ಳುತ್ತೇನೆ. ದೇಶಕ್ಕೆ ಕೊಂಡಗಲ್‌ ಅನ್ನು ಮಾದರಿಯಾಗಿ ಅಭಿವೃದ್ಧಿ ಮಾಡುತ್ತೇನೆ." ಎಂದು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿಗಳನ್ನು ತೆಲಂಗಾಣದ ಜನ ಒಪ್ಪಿಕೊಂಡು ಮತ ನೀಡುವ ಮೂಲಕ ಗೆಲ್ಲಿಸಿದ್ದಾರೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+