ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಸಂಕಷ್ಟ: ವಿರೋಧ ಪಕ್ಷಕ್ಕೆ ಮನವಿ ಮಾಡಿದ ಜನ!
ಕಾಂಗ್ರೆಸ್ ಸರ್ಕಾರವು ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಗ್ಯಾರಂಟಿ ಯೋಜನೆಗಳಿಂದಾಗಿ ಈ ರಾಜ್ಯಗಳ ಅಭಿವೃದ್ಧಿ ವೇಗ ಕಡಿಮೆಯಾಗಿದೆ. ಅಲ್ಲದೇ ಈ ರಾಜ್ಯಗಳ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತಿದೆ. ಮುಖ್ಯವಾಗಿ ಈ ರಾಜ್ಯಗಳ ಸಾಲದ ಪ್ರಮಾಣವು ಹೆಚ್ಚಳವಾಗುತ್ತಿದೆ ಎನ್ನುವ ಗಂಭೀರವಾದ ಆರೋಪಗಳು ಕೇಳಿ ಬರುತ್ತಿವೆ. ಈ ರೀತಿ ಇರುವಾಗಲೇ ವಿರೋಧ ಪಕ್ಷಗಳು ಸರ್ಕಾರದ ಯಾವುದೇ ಲೋಪವಿದ್ದರೂ ಅದಕ್ಕೆ ಮೊದಲನೆಯದಾಗಿ ಗ್ಯಾರಂಟಿ ವಿಷಯವನ್ನು ಪ್ರಸ್ತಾಪಿಸುವುದು ಇದೆ.
ಇದೀಗ ಗ್ಯಾರಂಟಿ ಯೋಜನೆ ಜಾರಿಯಿಂದಾಗಿ ತೆಲಂಗಾಣದಲ್ಲಿ ಭಾರೀ ಸಂಕಷ್ಟ ಎದುರಾಗಿದ್ದು, ಕಾಂಗ್ರೆಸ್‌ಗೆ ವೋಟ್ ಮಾಡಿದವರೇ ಅಲ್ಲಿನ ಸರ್ಕಾರದ ವಿರುದ್ಧ ತಿರುಗಿ ಬಿದಿದ್ದಾರೆ ಎಂದು ಅಲ್ಲಿನ ವಿರೋಧ ಪಕ್ಷಗಳು ಆರೋಪ ಮಾಡುತ್ತಿವೆ. ಇದೀಗ ತೆಲಂಗಾಣದಲ್ಲಿ ಸರ್ಕಾರಿ ಬಸ್‌ಗಳ ಪ್ರಯಾಣ (ಟಿಕೆಟ್)ದರ ಏಕಾಏಕಿ ಹೆಚ್ಚಳವಾಗಿದ್ದು, ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಅಲ್ಲದೇ ಜನ ಕೆಟಿಆರ್ ಪಕ್ಷಕ್ಕೆ ಮನವಿ ಮಾಡುತ್ತಿದ್ದು, ತೆಲಂಗಾಣ ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ, ಸರ್ಕಾರದ ಮೇಲೆ ಒತ್ತಡ ಹಾಕಿ ಬೆಲೆ ಏರಿಕೆಯ ಸಮಸ್ಯೆಯಿಂದ ತಪ್ಪಿಸಿ ಎಂದು ಮನವಿ ಮಾಡುತ್ತಿದ್ದಾರೆ.

ದೇಶದಾದ್ಯಂತ ಕಳೆದ ಮೂರು ವರ್ಷಗಳಿಂದಲೂ ನಡೆಯುತ್ತಿರುವ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಗ್ಯಾರಂಟಿ ಯೋಜನೆಗಳನ್ನು ತನ್ನ ಪ್ರಣಾಳಿಕೆಯಲ್ಲಿ ಪ್ರಕಟಿಸುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಕರ್ನಾಟಕದಲ್ಲಿ ಸಮರ್ಪಕವಾಗಿ ಜಾರಿ ಮಾಡಲಾಗಿದೆ. ಆದರೆ, ಆರ್ಥಿಕ ಹೊರೆ ಹೆಚ್ಚಾಗುತ್ತಿದೆ ಎನ್ನುವ ಮಾತು ಕೇಳಿ ಬರುತ್ತಿದೆ.
ಗ್ಯಾರಂಟಿಯಿಂದ ತೆಲಂಗಾಣದಲ್ಲಿ ಸಂಕಷ್ಟ
ಗ್ಯಾರಂಟಿ ಯೋಜನೆಯಿಂದ ನೆರೆಯ ತೆಲಂಗಾಣದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದೆ ಎನ್ನುವ ಮಾತು ಕೇಳಿ ಬಂದಿದೆ. ಇದಕ್ಕೆ ಮುಖ್ಯ ಕಾರಣ ಈಚೆಗೆ ಅಲ್ಲಿ ಸರ್ಕಾರಿ ಬಸ್‌ಗಳ ಟಿಕೆಟ್ ಬೆಲೆ ಹೆಚ್ಚಳ ಮಾಡಿರುವುದು. ಬಸ್ ಸೇರಿದಂತೆ ವಿವಿಧ ಸರ್ಕಾರಿ ಸೇವೆಗಳ ಬೆಲೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಅಲ್ಲಿಯ ಜನ ವಿರೋಧ ಪಕ್ಷಕ್ಕೆ ಮನವಿ ಮಾಡಲು ಶುರು ಮಾಡಿದ್ದಾರೆ.
ತೆಲಂಗಾಣದ ಪ್ರಮುಖ ವಿರೋಧ ಪಕ್ಷವಾಗಿರುವ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಕಾರ್ಯಾಧ್ಯಕ್ಷ ಮತ್ತು ಶಾಸಕ ಕೆ.ಟಿ. ರಾಮರಾವ್ ಅವರಿಗೆ ಅಲ್ಲಿನ ಜನ ಇದೀಗ ಮನವಿ ಮಾಡುವುದಕ್ಕೆ ಪ್ರಾರಂಭಿಸಿದ್ದಾರೆ. ಸೈಯದ್ ಜುಬೇರ್ ಎನ್ನುವವರು, ಪ್ರಿಯ @KTRBRS ಬಿಆರ್‌ಎಸ್ ಕೆಟಿಆರ್ ಅವರೇ ಪತಂಚೇರು ನಿಂದ DLFಗೆ ಮೆಟ್ರೋ ಎಕ್ಸ್‌ಪ್ರೆಸ್ ಬಸ್ ದರ ₹30 ರಿಂದ ₹45 ಕ್ಕೆ ಏರಿಕೆಯಾಗಿದೆ. ಇದು ₹15 ರಷ್ಟು ಏರಿಕೆಯಾಗಿದೆ. ಈ ಬೆಲೆ ಏರಿಕೆಯು ದೈನಂದಿನ ಪ್ರಯಾಣಿಕರ ಮೇಲೆ ಹೊರೆಯಾಗುತ್ತಿದೆ. ದಯವಿಟ್ಟು ಈ ವಿಷಯವನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿ ಮತ್ತು ಸಾರ್ವಜನಿಕರಿಗೆ ಸಹಾಯ ಮಾಡಿ. 🙏 ಉತ್ತಮ ಅಭಿವೃದ್ಧಿಗಾಗಿ ನಾನು ಕಾಂಗ್ರೆಸ್‌ಗೆ ಮತ ಹಾಕಿದ್ದೇನೆ ಆದರೆ ಇದು ತುಂಬಾ ಹೆಚ್ಚಾಯ್ತು ಎಂದು ಕಾಂಗ್ರೆಸ್ ಮೇಲೆ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.
If you voted for congress as you stated, don’t you think your question should be answered by them?
— KTR (@KTRBRS) November 25, 2025
We of course will raise our voice against the steep hike https://t.co/3W7BNAmbw9
ಇದಕ್ಕೆ ಪ್ರತಿಕ್ರಿಯೆ ಕೊಟ್ಟಿರುವ ಕೆಟಿಆರ್ ಅವರು, ನೀವು ಹೇಳಿದಂತೆ ನೀವು ಕಾಂಗ್ರೆಸ್‌ಗೆ ಮತ ಹಾಕಿದ್ದರೆ, ನಿಮ್ಮ ಪ್ರಶ್ನೆಗೆ ಅವರೇ ಉತ್ತರಿಸಬೇಕು ಅಂತ ನಿಮಗೆ ಅನಿಸುವುದಿಲ್ಲವೇ. ನಾವು ಖಂಡಿತವಾಗಿಯೂ ಈ ಬೆಲೆ ಏರಿಕೆಯ ವಿರುದ್ಧ ಧ್ವನಿ ಎತ್ತಲಿದ್ದೇವೆ ಎಂದಿದ್ದಾರೆ.












Click it and Unblock the Notifications