Government Employees: ಗ್ಯಾರಂಟಿ ಸಂಕಷ್ಟ: ಸರ್ಕಾರಿ ನೌಕರರಿಗೆ ವೇತನವೇ ಕಷ್ಟ, ತುಟ್ಟಿಭತ್ಯೆ ಕೇಳಬೇಡಿ ಎಂದ ಸರ್ಕಾರ!
ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸಂಕಷ್ಟಕ್ಕೆ ಎದುರಾಗುತ್ತಿದೆ. ಸಮಸ್ಯೆ ಆಗುತ್ತಿದೆ ಎನ್ನುವ ಆರೋಪಗಳ ನಡುವೆಯೇ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ಕೊಡಲಾಗಿದೆ. ಗ್ಯಾರಂಟಿ ಯೋಜನೆಗಳು ದೇಶದಲ್ಲಿ ಜಾರಿಯಾದಾಗಿನಿಂದಲೂ ಆರ್ಥಿಕ ಸಮಸ್ಯೆ ಹೆಚ್ಚಳವಾಗುತ್ತಿದೆ. ಜನರ ಮೇಲೆ ಸಾಲದ ಹೊರೆ ಹೆಚ್ಚಳವಾಗುತ್ತಿದೆ ಎನ್ನುವ ಆರೋಪಗಳು ಇವೆ. ಈ ನಡುವೆ ಸರ್ಕಾರಿ ನೌಕರರಿಗೆ ಸಂಬಳ ಕೊಡುತ್ತಿರುವುದು ಹೆಚ್ಚು. ಭತ್ಯೆ ನಿರೀಕ್ಷೆ ಮಾಡಬೇಡಿ ಎಂದು ತೆಲಂಗಾಣ ಸರ್ಕಾರ ಹೇಳಿದೆ.
ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಕರ್ನಾಟಕ ಮಾದರಿ ಗ್ಯಾರಂಟಿ ಯೋಜನೆಗಳನ್ನು ದೇಶದ ವಿವಿಧ ರಾಜ್ಯಗಳ ಚುನಾವಣೆ ಪ್ರಚಾರದಲ್ಲಿ / ಪ್ರಣಾಳಿಕೆಯಲ್ಲಿ ಪ್ರಕಟಿಸಲಾಗಿತ್ತು. ಕರ್ನಾಟಕ ಹಾಗೂ ತೆಲಂಗಾಣ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಆದರೆ, ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವುದಕ್ಕೆ ಪರದಾಡುತ್ತಿದೆ ಎನ್ನುವ ಆರೋಪದ ನಡುವೆಯೇ ಸರ್ಕಾರಿ ನೌಕರರಿಗೆ ಬಿಗ್‌ಶಾಕ ಕೊಡಲಾಗಿದೆ. ಅದೇನು ಎನ್ನುವುದನ್ನು ನೋಡೋಣ.

ಕರ್ನಾಟಕ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿದ್ದರೆ. ನೆರೆಯ ತೆಲಂಗಾಣ ಕಾಂಗ್ರೆಸ್ ಸರ್ಕಾರವು 6 ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿದೆ. ಆದರೆ, ಸರ್ಕಾರದ ಬಳಿ ದುಡ್ಡಿಲ್ಲ ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ ಎಂದು ಖುದ್ದು ತೆಲಂಗಾಣದ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರು ಹೇಳಿದ್ದಾರೆ. ಅಲ್ಲದೆ ಸರ್ಕಾರಿ ನೌಕರರಿಗೆ ಸಂಕಷ್ಟ ಎದುರಾಗುವ ವಿಷಯವನ್ನು ತಿಳಿಸಿದ್ದಾರೆ. ನೆರೆಯ ತೆಲಂಗಾಣ ಕಾಂಗ್ರೆಸ್ ಸರ್ಕಾರದ ನಿರ್ಧಾರವು ಕರ್ನಾಟಕದ ಸರ್ಕಾರಿ ನೌಕರರಲ್ಲೂ ಆತಂಕವನ್ನು ಮೂಡಿಸಿದೆ. ಇದಕ್ಕೆ ಮುಖ್ಯ ಕಾರಣ ಕರ್ನಾಟಕದಲ್ಲೂ ಕಾಂಗ್ರೆಸ್ ಪಕ್ಷವೇ ಅಧಿಕಾರದಲ್ಲಿ ಇದ್ದು.
ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಈ ಪಂಚ ಗ್ಯಾರಂಟಿ ಯೋಜನೆಗಳಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದೆ ಎನ್ನುವ ಆರೋಪ ಇದೆ. ಮುಂದುವರಿದು ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಪ್ರತಿ ತಿಂಗಳು ಸಹ ಸರಿಯಾಗಿ ಜಾರಿಯಾಗುತ್ತಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ತೆಲಂಗಾಣದಲ್ಲಿನ ಸರ್ಕಾರಿ ನೌಕರರ ಪರಿಸ್ಥಿತಿಯೇ ನಮಗೂ ಎದುರಾಗಲಿದೆಯೇ ಎನ್ನುವ ಆತಂಕ ಕರ್ನಾಟಕದ ಸರ್ಕಾರಿ ನೌಕರರಲ್ಲಿ ಎದುರಾಗಿದೆ.
ತೆಲಂಗಾಣ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಬಿಗ್‌ಶಾಕ್
ತೆಲಂಗಾಣ ಸರ್ಕಾರವು ಅಲ್ಲಿನ ಸರ್ಕಾರಿ ನೌಕರರಿಗೆ ನೇರವಾಗಿ ಬಿಗ್‌ಶಾಕ್ ಕೊಟ್ಟಿದೆ. ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟು ತಲೆದೋರಿದೆ. ಸರ್ಕಾರಿ ನೌಕರರಿಗೆ ತಿಂಗಳ ಮೊದಲ ದಿನವೇ ಸಂಬಳ ಕೊಡುವುದು ಕಷ್ಟವಾಗುತ್ತಿದೆ ಎಂದು ನೇರವಾಗಿಯೇ ತೆಲಂಗಾಣದ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರು ಹೇಳಿದ್ದಾರೆ.
ಸರ್ಕಾರಿ ನೌಕರರಿಗೆ ನಿಮಗೆ ಸಂಬಳ ಕೊಡುವುದಕ್ಕಾಗಿಯೇ ನಾವು ಪ್ರತಿ ತಿಂಗಳೂ ಆರ್‌ಬಿಐನಿಂದ ಬರೋಬ್ಬರಿ 4,000 ಕೋಟಿ ಸಾಲ ತೆಗೆದುಕೊಳ್ಳುತ್ತಿದ್ದೇವೆ. ಬೇಕಾದರೆ ಲೆಕ್ಕಪತ್ರವನ್ನು ತೋರಿಸುತ್ತೇನೆ. ನಿಮ್ಮದೇ ಸರ್ಕಾರ ಅಧಿಕಾರದಲ್ಲಿ ಇದೆ. ನಿಮಗೆ ತುಟ್ಟಿಭತ್ಯೆ ಬೇಕೇ ಇಲ್ಲ ಸಂಬಳ ಬೇಕೇ ಎಂದು ನೀವೇ ನಿರ್ಧರಿಸಿ. ನಮ್ಮ ಪರಿಸ್ಥಿತಿಯನ್ನೂ ಸ್ವಲ್ಪ ಅರ್ಥ ಮಾಡಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.












Click it and Unblock the Notifications