Get Updates
Get notified of breaking news, exclusive insights, and must-see stories!

ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಚುನಾವಣಾ ಸಮೀಕ್ಷೆಗಳು ಹೇಳುತ್ತಿರುವುದೇನು? ಅಂಕಿಅಂಶ, ವಿವರ ತಿಳಿಯಿರಿ

ನವದೆಹಲಿ, ನವೆಂಬರ್‌ 11: ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢ ವಿಧಾನಸಭೆಗೆ ಇದೇ ತಿಂಗಳು ಚುನಾವಣೆಗಳು ನಡೆಯಲಿವೆ. ನಾಲ್ಕು ರಾಜ್ಯಗಳ ಸಮೀಕ್ಷೆಗಳು ಹೊರಬಿದ್ದಿದ್ದು ಯಾವ ಪಕ್ಷಗಳು ಜಯ ಸಾಧಿಸಲಿವೆ? ಯಾವ ಪಕ್ಷಗಳಿಗೆ ಸೋಲಾಗಲಿದೆ ಎಂಬುದನ್ನು ಎಬಿಪಿ-ಸಿ ವೋಟರ್ಸ್‌ ಸರ್ವೇ ಬಹಿರಂಗಪಡಿಸಿದೆ.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಹವಾ

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಪರ ಅಲೆ ಇದೆ ಎಂದು ಸಮೀಕ್ಷೆ ಹೇಳಿದೆ. ಕಾಂಗ್ರೆಸ್ ಪಕ್ಷವು ಶೇ 44.3ರಷ್ಟು ಮತಗಳನ್ನು ಪಡೆಯುವ ಮೂಲಕ 118 ರಿಂದ 130 ಸಿಟುಗಳನ್ನು ಗೆಲ್ಲುವ ಸಾಧ್ಯತೆಯಿದೆ. ಮತ್ತೊಂದೆಡೆ, 230 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿಯು ಶೇ 42.1 ಮತಗಳನ್ನು ಗಳಿಸುವ ಮೂಲಕ 99 ರಿಂದ 111 ಸ್ಥಾನಗಳನ್ನು ಗೆಲ್ಲಬಹುದು ಎಂದು ಸಮೀಕ್ಷೆ ಹೇಳಿದೆ.

Telangana, Madhya Pradesh, Rajasthan, Chhattisgarh election opinion polls: Know the stats, details

ಎಬಿಪಿ-ಸಿವೋಟರ್ ಸಮೀಕ್ಷೆಯಲ್ಲಿ ಮಾಜಿ ಸಿಎಂ ಮತ್ತು ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರು ಅತ್ಯಂತ ಆದ್ಯತೆಯ ಸಿಎಂ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. ಪ್ರತಿಕ್ರಿಯಿಸಿದವರಲ್ಲಿ ಶೇ 42.4 ರಷ್ಟು ಜನರು ಅವರ ಪರ ಒಲವು ತೋರಿದ್ದಾರೆ. ಶಿವರಾಜ್ ಸಿಂಗ್ ಚೌಹಾಣ್ ಅವರ ಪರ ಶೇ 38 ರಷ್ಟು ಜನರು ಒಲವು ತೋರಿದ್ದಾರೆ.

ರಾಜಸ್ಥಾನದಲ್ಲಿ ಬಿಜೆಪಿಗೆ ಮಣೆ

ರಾಜಸ್ಥಾನದಲ್ಲಿ ಈ ಬಾರಿ ಬಿಜೆಪಿ ಅಧಿಕಾರ ಹಿಡಿಯಬಹುದು ಎಂದು ಸಮೀಕ್ಷೆ ಊಹಿಸಿದೆ. ಬಿಜೆಪಿಯು ಶೇ 44.8 ರಷ್ಟು ಮತಗಳನ್ನು ಪಡೆಯುವುದರೊಂದಿಗೆ 114 ರಿಂದ 124 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. 200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಯಲ್ಲಿ ಕಾಂಗ್ರೆಸ್ ಶೇ 41.7 ರಷ್ಟು ಮತಗಳೊಂದಿಗೆ 67 ರಿಂದ 77 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ.

Telangana, Madhya Pradesh, Rajasthan, Chhattisgarh election opinion polls: Know the stats, details

ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿಯಾಗಿ ಹೆಚ್ಚು ಆದ್ಯತೆಯ ಅಭ್ಯರ್ಥಿಯಾಗಿ ಉಳಿದಿದ್ದಾರೆ. ಪ್ರತಿಕ್ರಿಯಿಸಿದವರಲ್ಲಿ ಶೇ 40.7ರಷ್ಟು ಜನರು ಅವರನ್ನು ಬೆಂಬಲಿಸಿದ್ದಾರೆ. ಮಾಜಿ ಸಿಎಂ ಮತ್ತು ಬಿಜೆಪಿ ನಾಯಕಿ ವಸುಂಧರಾ ರಾಜೇ ಅವರಿಗೆ ಶೇ 24.7 ರಷ್ಟು ಜನರಿಗೆ ಬೆಂಬಲ ನೀಡಿದ್ದಾರೆ. ಅವರು ಎರಡನೇ ಅತ್ಯಂತ ಆದ್ಯತೆಯ ಅಭ್ಯರ್ಥಿಯಾಗಿದ್ದಾರೆ. ಕಾಂಗ್ರೆಸ್‌ ನಾಯಕ ಸಚಿನ್ ಪೈಲಟ್ ಅವರು ಮೂರನೇ ಸ್ಥಾನವನ್ನು ಪಡೆದರು, ಪ್ರತಿಕ್ರಿಯಿಸಿದವರಲ್ಲಿ ಕೇವಲ ಶೇ 10.5 ರಷ್ಟು ಜನರು ಪೈಲಟ್‌ ಅವರನ್ನು ಬೆಂಬಲಿಸಿದ್ದಾರೆ.

ಛತ್ತೀಸ್‌ಗಢದಲ್ಲಿ ಮತ್ತೆ ಕಾಂಗ್ರೆಸ್‌

ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ಗೆ ಶೇ.44.8ರಷ್ಟು ಮತ ಸಿಗಲಿವೆ ಎಂದು ಸಮೀಕ್ಷೆ ಬಹಿರಂಗಪಡಿಸಿದೆ. ಪಕ್ಷವು 45ರಿಂದ 51 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ. ಬಿಜೆಪಿಯು ಶೇ 42.7 ರಷ್ಟು ಮತಗಳನ್ನು ಪಡೆಯುವ ಮೂಲಕ 90 ಸದಸ್ಯ ಬಲದ ಛತ್ತೀಸ್‌ಗಢ ವಿಧಾನಸಭೆಯಲ್ಲಿ 36 ರಿಂದ 42 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ.

Telangana, Madhya Pradesh, Rajasthan, Chhattisgarh election opinion polls: Know the stats, details

ಭೂಪೇಶ್ ಬಘೇಲ್ ಅವರು ಸಿಎಂಗೆ ಸ್ಥಾನದ ಅಚ್ಚುಮೆಚ್ಚಿನ ಅಭ್ಯರ್ಥಿಯಾಗಿದ್ದಾರೆ. ಶೇ 45.8 ರಷ್ಟು ಜನರು ಅವರ ಒಲವು ಹೊಂದಿದ್ದಾರೆ. ಕೇವಲ ಶೇ 20.7 ರಷ್ಟು ಮತದಾರರು ಮಾಜಿ ಸಿಎಂ ಮತ್ತು ಬಿಜೆಪಿ ನಾಯಕ ರಮಣ್ ಸಿಂಗ್ ಪರ ಬೆಂಬಲ ಸೂಚಿಸಿದ್ದಾರೆ.

ತೆಲಂಗಾಣದಲ್ಲೂ ಕಾಂಗ್ರೆಸ್‌ಗೆ ಮಣೆ

ತೆಲಂಗಾಣದಲ್ಲಿ ಕಾಂಗ್ರೆಸ್‌ ಪಕ್ಷವು ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎಂದು ಸಮೀಕ್ಷೆ ಹೇಳಿದೆ. ಕಾಂಗ್ರೆಸ್‌ ಪಕ್ಷವು 43 ರಿಂದ 55 ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಿದೆ. ಬಿಜೆಪಿ 5 ರಿಂದ 11 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಆಡಳಿತಾರೂಢ ಬಿಆರ್‌ಎಸ್ 49 ರಿಂದ 61 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ. ಎಐಎಂಐಎಂ ಪಕ್ಷವು 4 ರಿಂದ 10 ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಿದೆ ಎಂದು ಸಮೀಕ್ಷೆ ಹೇಳಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+