ತೆಲಂಗಾಣದಲ್ಲಿ ಭೀಕರ ಅಪಘಾತ: ಬಸ್ಸಿನಲ್ಲಿದ್ದ 45 ಮಂದಿ ದುರ್ಮರಣ
ಕೊಂಡಗಟ್ಟು(ತೆಲಂಗಾಣ), ಸೆಪ್ಟೆಂಬರ್ 11: ತೆಲಂಗಾಣದ ಕೊಂಡಗಟ್ಟು ಎಂಬಲ್ಲಿ ಬಸ್ಸೊಂದು ಕಮರಿಗೆ ಉರುಳಿದ ಪರಿಣಾಮ 45 ಮಂದಿ ಮೃತರಾಗಿದ್ದು, 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
70 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತಿದ್ದ ಇಲ್ಲಿನ ಆರ್ ಟಿಸಿ ಬಸ್ ಜಗ್ತಿಯಾಲ್ ರಸ್ತೆಯ ಪಕ್ಕದ ಕಂದಕಕ್ಕೆ ಉರುಳಿದ ಪರಿಣಾಮ ಈ ಘಟನೆ ನಡೆದಿದೆ.

ಬಸ್ಸಿನಲ್ಲಿದ್ದ ಬಹುತೇಕ ಪ್ರಯಾಣಿಕರು ಮಹಿಳೆಯರೇ ಆಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್, ಘಟನೆ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.












Click it and Unblock the Notifications