ತೆಲಂಗಾಣದಲ್ಲಿ ಬಿಜೆಪಿ-ಟಿಡಿಪಿ ಮೈತ್ರಿ: ಅಮಿತ್ ಶಾ ಭೇಟಿಯಾಗಲಿರುವ ಚಂದ್ರಬಾಬು ನಾಯ್ಡು
ನವದೆಹಲಿ, ಜೂನ್. 04: ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಭಾನುವಾರ ನವ ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ. ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆ ಕುರಿತಂತೆ ಮಾತುಕತೆ ನಡೆಯುವ ಸಾಧ್ಯತೆಯಿದೆ.
ತೆಲಂಗಾಣ ವಿಧಾನಸಭೆ ಚುನಾವಣೆ ಮತ್ತು ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಮತ್ತು ತೆಲುಗು ದೇಶಂ ಪಕ್ಷದ ಮೈತ್ರಿ ಕುರಿತು ಚರ್ಚಲಿದ್ದಾರೆ. ಈಊ ಸಭೆಯು ಸುಮಾರು ಅರ್ಧ ಗಂಟೆ ಕಾಲ ಸಭೆ ನಡೆಯಲಿದ್ದು, ಈ ವರ್ಷ ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಬಿಜೆಪಿ ಮತ್ತು ಟಿಡಿಪಿ ಮೈತ್ರಿ ಮಾಡಿಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.

ಟಿಡಿಪಿ 2014 ರಲ್ಲಿ ಎನ್‌ಡಿಎ ಭಾಗವಾಗಿತ್ತು ಆದರೆ 2019 ರ ಚುನಾವಣೆಯ ಮೊದಲು ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನದ ವಿಷಯದ ಮೇಲೆ ಮಾರ್ಚ್ 2018 ರಲ್ಲಿ ಆಡಳಿತ ಪಕ್ಷದ ಮೈತ್ರಿಕೂಟವನ್ನು ತ್ಯಜಿಸಿತು. ಆದರೆ, ಪೋರ್ಟ್ ಬ್ಲೇರ್‌ನಲ್ಲಿ ಇತ್ತೀಚೆಗೆ ನಡೆದ ಮುನ್ಸಿಪಲ್ ಚುನಾವಣೆಯ ನಂತರ ಎರಡೂ ಪಕ್ಷಗಳು ಮತ್ತೆ ಒಗ್ಗೂಡಿದವು.
ಟಿಡಿಪಿ ಸಂಸ್ಥಾಪಕ ಮತ್ತು ಆಂಧ್ರಪ್ರದೇಶದ ಏಳು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಎನ್‌ಟಿ ರಾಮರಾವ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ತಿಂಗಳು ತಮ್ಮ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್‌ನಲ್ಲಿ ಅವರ ಜನ್ಮ ವಾರ್ಷಿಕೋತ್ಸವದಂದು ನೆನಪಿಸಿಕೊಂಡಿದ್ದರು.

ಇನ್ನು, ಕರ್ನಾಟಕದ ವಿಧಾನಸಭಾ ಚುನಾವಣೆಯ ಫಲಿತಾಂಶವು ತೆಲಂಗಾಣದ ರಾಜಕೀಯ ಚಲನವಲನವನ್ನು ಬದಲಾಯಿಸಿದೆ. ಆಡಳಿತಾರೂಢ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್), ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ತೆಲುಗು ದೇಶಂ ಪಕ್ಷ ತಮ್ಮ ರಾಜಕೀಯ ತಂತ್ರಗಳನ್ನು ಬದಲಾಯಿಸಿದ್ದಾರೆ. ಈ ವರ್ಷದ ಕೊನೆಯಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಿಗದಿಯಾಗಿದೆ.












Click it and Unblock the Notifications