Terrible Accident: ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: 20 ಸಾವು, 24 ಜನರಿಗೆ ಗಂಭೀರ ಗಾಯ
Accident News: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಲಿವೆ. ಇದೀಗ ಇಂದು (ನವೆಂಬರ್ 3) ಬಸ್ ಹಾಗೂ ಟ್ರಕ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ 20 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ತೆಲಂಗಾಣದ ಜಿಲ್ಲೆಯ ಚೆವೆಲ್ಲಾ ಬಳಿಯ ಮಿರ್ಜಗುಡದಲ್ಲಿ ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಆರ್‌ಟಿಸಿ ಬಸ್ಗೆ ಟ್ರಕ್ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್‌ನಲ್ಲಿ 20 ಮಂದಿ ಸಾವನ್ನಪ್ಪಿದ್ದು, 24 ಜನ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಜಲ್ಲಿಕಲ್ಲು ತುಂಬಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಟ್ರಕ್ ಅನ್ನು ಭಾರೀ ವೇಗದಲ್ಲಿ ಚಾಲನೆ ಮಾಡಿರುವುದೇ ಈ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. ಅಪಘಾತ ನಡೆದ ಸ್ಥಳದ ಬಳಿ ಅಪಾಯಕಾರಿ ತಿರುವು ಇದ್ದು, ಇದೇ ಪ್ರದೇಶದಲ್ಲಿ ಅತಿ ವೇಗದಲ್ಲಿ ಬಂದ ಲಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ.
ಈ ವೇಳೆ ಲಾರಿ ಬಸ್‌ಗೆ ಡಿಕ್ಕಿ ಹೊಡೆದಿರುವುದಲ್ಲದೆ, ಅದರಲ್ಲಿ ಜಲ್ಲಿಕಲ್ಲು ಬಸ್ ಒಳಗಡೆ ಇದ್ದ ಪ್ರಯಾಣಿಕೆ ಮೇಲೆ ಸುರಿದಿವೆ. ಇದು ಹೆಚ್ಚಿನ ಜೀವಹಾನಿಗೆ ಕಾರಣವಾಗಿದೆ. 10ಕ್ಕೂ ಹೆಚ್ಚು ಮಂದಿ ಜಲ್ಲಿಕಲ್ಲುಗಳ ಅಡಿಯಲ್ಲಿ ಸಿಲುಕಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಭೀಕರ ಅಪಘಾತದಲ್ಲಿ ಬಸ್ ಪ್ರಯಾಣಿಕರು, ಬಸ್ ಮತ್ತು ಟಿಪ್ಪರ್ ಚಾಲಕರು ಸಾವನ್ನಪ್ಪಿದ್ದಾರೆ.
ಒಂದು ವರ್ಷದ ಮಗು ಸೇರಿದಂತೆ 11 ಮಹಿಳೆಯರು ಮತ್ತು 9 ಪುರುಷರು ಸಾವನ್ನಪ್ಪಿದ್ದಾರೆ. ಅಲ್ಲದೆ, 24 ಜನರು ಗಾಯಗೊಂಡಿದ್ದು, 5 ಜನರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಹೆಚ್ಚಳ ಆಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಅಪಘಾತದ ಬಳಿಕ ಚೆವೆಲ್ಲಾ-ವಿಕಾರಾಬಾದ್ ಮಾರ್ಗದಲ್ಲಿ ಸಂಚಾರ ದಟ್ಟಣೆ ಸಂಭವಿಸಿ ಇತರ ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ.
ಇನ್ನೂ ಘಟನೆಯಲ್ಲಿ ಗಾಯಗೊಂಡವರನ್ನು ಚೆವೆಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಇದೀಗ ಘಟನಾ ಸ್ಥಳದಲ್ಲಿ ಸಿಲುಕಿದ್ದ ಬಸ್ ಹಾಗೂ ಟ್ರಕ್ ಅನ್ನು ಜೆಸಿಬಿ ಮೂಲಕ ಎತ್ತುವ ಕಾರ್ಯಾಚರಣೆ ಮುಂದುವರೆದಿದೆ. ಘಟನೆ ವೇಳೆ ಬಸ್‌ನಲ್ಲಿ ಸುಮಾರು 70 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
VIDEO | Rangareddy: Several injured after a tipper collided with a Tandur RTC bus near Mirjaguda on the Hyderabad-Bijapur highway.
— Press Trust of India (@PTI_News) November 3, 2025
(Full video available on PTI Videos - https://t.co/n147TvrpG7) pic.twitter.com/ZwgBJcTDtn
ಸಿಎಂ ರೇವಂತ್ ರೆಡ್ಡಿ ಅವರು ತಕ್ಷಣವೇ ಅಪಘಾತದ ಸ್ಥಳಕ್ಕೆ ಹೋಗಲು ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಅಗತ್ಯ ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ. ಬಸ್ ಅಪಘಾತದಲ್ಲಿ ಗಾಯಗೊಂಡ ಎಲ್ಲರನ್ನು ತಕ್ಷಣ ಹೈದರಾಬಾದ್‌ಗೆ ಸ್ಥಳಾಂತರಿಸಲು ಮತ್ತು ಅವರಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡುವಂತೆ ಸಿಎಸ್ ಮತ್ತು ಡಿಜಿಪಿಗೆ ಆದೇಶಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಮತ್ತು ಅದಕ್ಕಾಗಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗೂ ಸೂಚಿಸಿದ್ದಾರೆ.
ಇದೀಗ ಮೃತರ ಸಂಖ್ಯೆ 24ಕ್ಕೆ ಏರಿಕೆ ಆಗಿದ್ದು, ಘಟನೆಗೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲು ಪೋಸ್ಟ್ ಮಾಡಿರುವ ಅವೆರು, ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿ ತೀವ್ರ ದುಃಖ ತಂದಿದೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತರು ಮತ್ತು ಅವರ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
ಇದೇ ವೇಳೆ ಮೃತರ ಕುಟಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50,000 ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಇದೀಗ ಸದ್ಯ ಜೆಲ್ಲಿಯಡಿಯಲ್ಲಿ ಸಿಲುಕಿರುವವರ ರಕ್ಷಣೆ ಕಾರ್ಯಾಚರಣೆ ಮುಂದುವರೆದಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications