ತೆಲಂಗಾಣ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಅಗ್ನಿ ಪರೀಕ್ಷೆ

ಹೈದರಾಬಾದ್, ಸೆಪ್ಟೆಂಬರ್ 26: ತೆಲಂಗಾಣ ಚುನಾವಣೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯಲ್ಲಿ ಎಚ್ಚರಿಕೆಯ ನಡೆ ಇಡಲು ತೀರ್ಮಾನಿಸಿದೆ.

ಇತ್ತೀಚೆಗಷ್ಟೇ ತೆಲಂಗಾಣ ರಾಷ್ಟ್ರೀಯ ಸಮಿತಿ ಅಧಿಕಾರದಲ್ಲಿದ್ದ ತೆಲಂಗಾಣ ವಿಧಾನಸಭೆ ವಿಸರ್ಜನೆಯಾಗಿದ್ದು, ರಾಜ್ಯದಲ್ಲಿ ಡಿಸೆಂಬರ್ ತಿಂಗಳೊಳಗೆ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ.

2014 ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲನುಭವಿಸಿದ ಕ್ಷೇತ್ರಗಳ ಬಗ್ಗೆ ವಿಶೇಷ ಗಮನ ಹರಿಸಲು ಪಕ್ಷ ಯೋಚಿಸಿದೆ.

Telangana: Very Tough test ahead for Congress ticket aspirants

ಒಟ್ಟಿನಲ್ಲಿ ತೆಲಂಗಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಅಗ್ನಿ ಪರೀಕ್ಷೆಯೇ ಕಾದಿದೆ ಎನ್ನಲಾಗುತ್ತಿದೆ. ಅಭ್ಯರ್ಥಿಗಳನ್ನು ಅಳೆದು, ತೂಗಿ ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ.

ಕೇಂದ್ರದಲ್ಲಿ ಯುಪಿಎ ಸರ್ಕಾರವಿದ್ದಾಗ ತೆಲಂಗಾಣವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಿದರೂ ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆಯ ಸಮಯದಲ್ಲಿ ಯಾವುದೇ ಲಾಭವಾಗದೆ ಇದ್ದಿದ್ದು, ಸ್ವತಃ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಅಚ್ಚರಿ ಮೂಡಿಸಿದೆ. ಆದ್ದರಿದ ಈ ಬಾರಿ ತಪ್ಪು ಹೆಜ್ಜೆ ಇಡಬಾರದು ಎಂದು ಅವರು ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+