ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಕ್ಷಣಾ ಸಚಿವಾಲಯದಲ್ಲಿ ಅಗ್ನಿವೀರರಿಗೆ ಶೇ.10ರಷ್ಟು ಮೀಸಲಾತಿ

|
Google Oneindia Kannada News

ನವದೆಹಲಿ, ಜೂ.18: ಕೇಂದ್ರ ಸರ್ಕಾರದ ಅಗ್ನಿಪಥ್‌ ಯೋಜನೆ ವಿರೋಧಿಸಿ ವಿವಿಧ ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನಾ ಜ್ವಾಲಾಗ್ನಿಯನ್ನು ಶಮನ ಮಾಡಲು ಮುಂದಾಗಿರುವ ಸರ್ಕಾರ ಅಗ್ನಿವೀರರಾಗಿ ಸೇನೆಗೆ ನೇಮಕಗೊಳ್ಳುವವರನ್ನು ರಕ್ಷಣಾ ಸಚಿವಾಲಯ ಹುದ್ದೆಗಳಲ್ಲಿ ಶೇಕಡಾ 10ರಷ್ಟು ಮೀಸಲಿಡಲಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಈ ಕುರಿತು ಘೋಷಣೆ ಮಾಡಿದ್ದಾರೆ. ಭಾರತೀಯ ಕೋಸ್ಟ್ ಗಾರ್ಡ್ ಮತ್ತು ರಕ್ಷಣಾ ನಾಗರಿಕ ಹುದ್ದೆಗಳು ಮತ್ತು ಎಲ್ಲಾ 16 ರಕ್ಷಣಾ ಸಾರ್ವಜನಿಕ ವಲಯದ ಉದ್ಯಮಗಳಲ್ಲಿ 10% ಮೀಸಲಾತಿಯನ್ನು ಜಾರಿಗೊಳಿಸಲಾಗುವುದು. ಈ ಮೀಸಲಾತಿಯು ಮಾಜಿ ಸೈನಿಕರಿಗೆ ಅಸ್ತಿತ್ವದಲ್ಲಿರುವ ಮೀಸಲಾತಿಗೆ ಹೆಚ್ಚುವರಿಯಾಗಿರುತ್ತದೆ ಎಂದು ರಕ್ಷಣಾ ಸಚಿವಾಲಯದ ಅಧಿಕೃತ ಅಕೌಂಟ್‌ನಿಂದ ಟ್ವೀಟ್ ಮಾಡಿದೆ.

ಯುಪಿ ಅಗ್ನಿಪಥ್ ಪ್ರತಿಭಟನೆ: 300 ಬಂಧನ- 2 ತಿಂಗಳ ಕಾಲ 144 ಸೆಕ್ಷನ್ ಜಾರಿ ಯುಪಿ ಅಗ್ನಿಪಥ್ ಪ್ರತಿಭಟನೆ: 300 ಬಂಧನ- 2 ತಿಂಗಳ ಕಾಲ 144 ಸೆಕ್ಷನ್ ಜಾರಿ

ಹೊಸ ಸೇನಾ ನೇಮಕಾತಿ ಯೋಜನೆ ಅಗ್ನಿಪಥ್' ವಿರುದ್ಧ ಪ್ರತಿಭಟನೆಗಳು ಮುಂದುವರೆದಿರುವ ಕಾರಣ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಮಂಗಳವಾರ ಕೇಂದ್ರವು ಹೊಸ ನೇಮಕಾತಿ ಯೋಜನೆಯನ್ನು ಘೋಷಿಸಿತು. ಯೋಜನೆಯು ನಾಲ್ಕು ವರ್ಷಗಳ ಕೊನೆಯಲ್ಲಿ ಉದ್ಯೋಗ ಭದ್ರತೆಯ ಬಗ್ಗೆ ಸ್ಪಷ್ಟತೆ ಇಲ್ಲದೆ ಇದ್ದರಿಂದ ಮಿಲಿಟರಿ ಆಕಾಂಕ್ಷಿಗಳಿಂದ ಹಲವಾರು ರಾಜ್ಯಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದವು. ಶನಿವಾರ ಮುಂಜಾನೆ ಗೃಹ ವ್ಯವಹಾರಗಳ ಸಚಿವಾಲಯ (MHA) ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPF) ಮತ್ತು ಅಸ್ಸಾಂ ರೈಫಲ್ಸ್ ನೇಮಕಾತಿಯಲ್ಲಿ ಅಗ್ನಿವೀರ್‌ಗಳಿಗೆ 10 ಪ್ರತಿಶತ ಮೀಸಲಾತಿಯನ್ನು ಘೋಷಿಸಿತು.

Ten Per Cent reservation for agniveers at the Ministry of Defense

ಸಿಎಪಿಎಫ್‌ಗಳು ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ಅಗ್ನಿವೀರ್‌ಗಳ ನೇಮಕಾತಿಗಾಗಿ ತನ್ನ 17.5- 21 ವಯೋಮಿತಿಯ ಅರ್ಹತಾ ಮಾನದಂಡಗಳಲ್ಲಿ ಮೂರು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲು ನಿರ್ಧರಿಸಿದೆ. ಅಗ್ನಿವೀರ್‌ಗಳ ಮೊದಲ ಬ್ಯಾಚ್ ನಿಗದಿತ ಗರಿಷ್ಠ ವಯಸ್ಸಿನ ಮಿತಿಯನ್ನು ಮೀರಿ ಐದು ವರ್ಷಗಳ ಸಡಿಲಿಕೆಯನ್ನು ಪಡೆಯುತ್ತದೆ.

Ten Per Cent reservation for agniveers at the Ministry of Defense

ಅಗ್ನಿಪಥ್ ಯೋಜನೆ ಕೌಶಲ್ಯ ಅಭಿವೃದ್ಧಿಗೆ ಪೂರಕ: ಧರ್ಮೇಂದ್ರ ಪ್ರಧಾನ್ ಅಗ್ನಿಪಥ್ ಯೋಜನೆ ಕೌಶಲ್ಯ ಅಭಿವೃದ್ಧಿಗೆ ಪೂರಕ: ಧರ್ಮೇಂದ್ರ ಪ್ರಧಾನ್

ಅಗ್ನಿಪಥ್ ಯೋಜನೆಯಡಿ ಸಶಸ್ತ್ರ ಪಡೆಗಳಲ್ಲಿ ನಾಲ್ಕು ವರ್ಷಗಳ ಅವಧಿಗೆ ನೇಮಕಾತಿಯನ್ನು ಪ್ರಸ್ತಾಪಿಸಲಾಗಿದೆ ಮತ್ತು ನಂತರ ಯಾವುದೇ ಪಿಂಚಣಿ ಪ್ರಯೋಜನಗಳಿಲ್ಲದೆ ಕನಿಷ್ಠ 75 ಪ್ರತಿಶತ ಸಿಬ್ಬಂದಿಗೆ ಕಡ್ಡಾಯ ನಿವೃತ್ತಿ ನೀಡಲಾಗುತ್ತದೆ ಎಂದು ಯೋಜನೆ ಹೇಳಿದೆ. ಶೇಕಡ 25ರಷ್ಟು ಸಿಬ್ಬಂದಿಯನ್ನು ಮಾತ್ರ ಕಾಯಂ ಆಯೋಗದ ಅಡಿಯಲ್ಲಿ ಇನ್ನೂ 15 ವರ್ಷಗಳವರೆಗೆ ಮುಂದುವರಿಸಲು ಅನುಮತಿಸಲಾಗುತ್ತದೆ. ಹೀಗಾಗಿ ಪ್ರತಿಭಟನೆಗಳು ಭುಗಿಲೆದ್ದಿವೆ.

English summary
Defense Minister Rajnath Singh announced on Saturday that the Defense Ministry would allocate 10 per cent of its posts to agniveers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X