ಕರ್ನಾಟಕ ಸೇರಿ 10 ರಾಜ್ಯಗಳಲ್ಲಿ ದೈನಂದಿನ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ

ನವದೆಹಲಿ, ಏಪ್ರಿಲ್ 9: ಕರ್ನಾಟಕ ಸೇರಿ ಒಟ್ಟು 10 ರಾಜ್ಯಗಳಲ್ಲಿ ದೈನಂದಿನ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ.

ದೇಶದಲ್ಲಿ ಕೊರೊನಾ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಇಂದು ಒಟ್ಟು 1,31,968 ಹೊಸ ಪ್ರಕರಣಗಳು ದಾಖಲಾಗಿವೆ. ಇದು ಇದುವರೆಗೆ ದೇಶದಲ್ಲಿ ದಾಖಲಾದ ಅತಿ ಹೆಚ್ಚು ದೈನಂದಿನ ಪ್ರಕರಣಗಳಾಗಿವೆ.

ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 9,79,608ಕ್ಕೆ ಏರಿಕೆಯಾಗಿದ್ದು, ದೇಶದಲ್ಲಿನ ಒಟ್ಟಾರೇ ಸೋಂಕಿತರ ಸಂಖ್ಯೆ ಶೇ. 7.50ರಷ್ಟಿದೆ. ದೇಶದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಮಹಾರಾಷ್ಟ್ರ, ಛತ್ತೀಸ್‌ಗಢ, ಕರ್ನಾಟಕ, ಉತ್ತರ ಪ್ರದೇಶ ಮತ್ತು ಕೇರಳದಿಂದ ಒಟ್ಟಾರೇ ಶೇ. 73. 24 ರಷ್ಟು ಪ್ರಕರಣಗಳು ವರದಿಯಾಗಿದ್ದರೆ, ಮಹಾರಾಷ್ಟ್ರವೊಂದರಲ್ಲಿಯೇ ಶೇ.53. 84 ರಷ್ಟು ಪ್ರಕರಣಗಳು ವರದಿಯಾಗಿವೆ ಎಂದು ಸಚಿವಾಲಯ ತಿಳಿಸಿದೆ.

Ten States Show Steep Rise In COVID-19 Daily Cases

ಮಹಾರಾಷ್ಟ್ರ, ಛತ್ತೀಸ್ ಗಢ, ಕರ್ನಾಟಕ, ಉತ್ತರ ಪ್ರದೇಶ, ದೆಹಲಿ, ಮಧ್ಯಪ್ರದೇಶ, ತಮಿಳುನಾಡು, ಗುಜರಾತ್, ಕೇರಳ ಮತ್ತು ಪಂಜಾಬ್ ಸೇರಿ ಹತ್ತು ರಾಜ್ಯಗಳಲ್ಲಿ ಕೋವಿಡ್-19 ದೈನಂದಿನ ಪ್ರಕರಣಗಳು ಏರಿಕೆಯಾಗುತ್ತಿದ್ದು, ಈ ರಾಜ್ಯಗಳಲ್ಲಿಯೇ ಶೇ.83. 29 ರಷ್ಟು ಹೊಸ ಪ್ರಕರಣಗಳು ವರದಿಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಇಂದು 56,286 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಛತ್ತೀಸ್‌ಗಢದಲ್ಲಿ 10,310, ಕರ್ನಾಟಕದಲ್ಲಿ 6, 976 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+