ಬಿಜೆಪಿ ಅಧ್ಯಕ್ಷರಾಗಿ ಜೆಪಿ ನಡ್ಡಾ ಅವಧಿ ವಿಸ್ತರಣೆ

ನವದೆಹಲಿ, ಜನವರಿ 17: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಜೆಪಿ ನಡ್ಡಾ ಅವರ ಅಧಿಕಾರಾವಧಿಯನ್ನು ಮಂಗಳವಾರ ವಿಸ್ತರಿಸಲಾಗಿದೆ. ಈ ಮೂಲಕ 2024ರ ಲೋಕಸಭೆ ಚುನಾವಣೆಗೆ ಜೆಪಿ ನಡ್ಡಾ ಬಿಜೆಪಿ ಮುಖ್ಯಸ್ಥರಾಗಿ ಉಳಿಯಲಿದ್ದಾರೆ.

ನವದೆಹಲಿಯಲ್ಲಿ ಎರಡು ದಿನಗಳಿಂದ ಬಿಜೆಪಿ ಕಾರ್ಯಕಾರಿಣಿ ಸಭೆಯುತ್ತಿದ್ದಿ ಇಲ್ಲಿ ನಡ್ಡಾ ಅವಧಿ ವಿಸ್ತರಣೆಯ ತೀರ್ಮಾನ ತೆಗೆದುಕೊಳ್ಳಲಾಗಿದೆ. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಜೆಪಿ ನಡ್ಡಾ ಅವರ ಅಧಿಕಾರಾವಧಿಯನ್ನು ಜೂನ್ 2024 ರವರೆಗೆ ವಿಸ್ತರಿಸಲಾಗಿದೆ ಎಂದು ಬಿಜೆಪಿ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.

ಜೆಪಿ ನಡ್ಡಾ ಅವರ ನಾಯಕತ್ವದಲ್ಲಿ ನಾವು ಬಿಹಾರದಲ್ಲಿ ಅತಿ ಹೆಚ್ಚು ಬೆಳವಣಿಗೆ ಹೊಂದಿದ್ದೇವೆ. ಎನ್‌ಡಿಎ ಮಹಾರಾಷ್ಟ್ರದಲ್ಲಿ ಬಹುಮತ ಗಳಿಸಿತು. ಉತ್ತರ ಪ್ರದೇಶದಲ್ಲಿ ಗೆದ್ದಿತು ಮತ್ತು ಪಶ್ಚಿಮ ಬಂಗಾಳದಲ್ಲಿ ನಮ್ಮ ಸಂಖ್ಯೆ ಹೆಚ್ಚಾಯಿತು. ನಾವು ಗುಜರಾತ್‌ನಲ್ಲೂ ಭರ್ಜರಿ ಗೆಲುವು ದಾಖಲಿಸಿದ್ದೇವೆ ಎಂದು ಅಮಿತ್ ಶಾ ಹೇಳಿದರು.

Tenure of JP Nadda as BJP national president extended till June 2024

ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಯ ಕುರಿತು ಮಾತನಾಡಿದ ಅಮಿತ್ ಶಾ, ಮೋದಿ ಜಿ ನಾಯಕತ್ವದಲ್ಲಿ ಮತ್ತು ನಡ್ಡಾ ಜಿ ಜೊತೆಯಲ್ಲಿ ನಾವು 2024ರ ಚುನಾವಣೆಯಲ್ಲಿ 2019ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ನನಗೆ ಖಾತ್ರಿಯಿದೆ" ಎಂದು ಹೇಳಿದರು. ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಎರಡನೇ ಮತ್ತು ಮುಕ್ತಾಯದ ದಿನದಂದು ಈ ಘೋಷಣೆ ಹೊರಬಿದ್ದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಬಿಜೆಪಿ ಮುಖ್ಯಮಂತ್ರಿಗಳು ಸೇರಿದಂತೆ ಇತರ ಪ್ರಮುಖ ನಾಯಕರು ಸರ್ವ ಮಹತ್ವದ ಸಭೆಯಲ್ಲಿ ಭಾಗವಹಿಸಿದ್ದರು.

Tenure of JP Nadda as BJP national president extended till June 2024

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ಮುಂಬರುವ ನಿರ್ಣಾಯಕ ರಾಜ್ಯ ಚುನಾವಣೆಯ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಅಧಿಕಾರ ಹಿಡಿಯುವ ಹಂಬಲ ಹೊಂದಿದ್ದಾರೆ. ಜೆಪಿ ನಡ್ಡಾ 2019ರಲ್ಲಿ ಅಂದಿನ ಪಕ್ಷದ ಮುಖ್ಯಸ್ಥ ಅಮಿತ್ ಶಾ ಕೇಂದ್ರ ಸಚಿವರಾದಾಗ ಬಿಜೆಪಿ ಕಾರ್ಯಾಧ್ಯಕ್ಷರಾಗಿ ಪ್ರಾರಂಭಿಸಿದರು. ನಡ್ಡಾ ಅವರು 2020 ರಲ್ಲಿ ಪೂರ್ಣ ಸಮಯದ ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+