ತೆಲಂಗಾಣದಲ್ಲಿ ಭೀಕರ ಅಪಘಾತ: ಮೋರಿಗೆ ಡಿಕ್ಕಿ ಹೊಡೆದು ಕಾಲುವೆಗೆ ಬಿದ್ದ ಕಾರು, 6 ಮಂದಿ ಸಾವು
ತೆಲಂಗಾಣದಲ್ಲಿ
ಕಾರು ಪಲ್ಟಿ ಹೊಡೆದು ಕಾಲುವೆಗೆ ಬಿದ್ದ ಭೀಕರ ದುರಂತ ಸಂಭವಿಸಿದೆ. ಘಟನೆಯಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದಾರೆ. ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯ ಮುನಿಗಡಪದಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಕಾರು ಮೋರಿಗೆ ಡಿಕ್ಕಿ ಹೊಡೆದು ನಿರ್ಮಾಣ ಹಂತದ ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿದ್ದಾರೆ. id="toptextpromo"> id='are-slot-1' class='oiad oi-axt oiadv'> id='top-searched-articles'>ಕುಟುಂಬ
ಸಮೇತರಾಗಿ ದೇವಸ್ಥಾನಕ್ಕೆ ತೆರಳಿ ವೇಮುಲವಾಡದಿಂದ ಬೀಬಿನಗರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕಾಲುವೆಯಲ್ಲಿ ಹೆಚ್ಚು ನೀರಿಲ್ಲದಿದ್ದರೂ ಸಂತ್ರಸ್ತರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಕಾರನ್ನು ಕಾಲುವೆಯಿಂದ ಮಣ್ಣು ತೆಗೆಯುವ ಯಂತ್ರದ ಸಹಾಯದಿಂದ ಹೊರತೆಗೆದಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಹೆಚ್ಚಿನ ತನಿಖೆಗಳು ನಡೆಸುತ್ತಿದ್ದಾರೆ. id='are-slot-2' class='oiad oi-axt oiadv'>












Click it and Unblock the Notifications