ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ; ಬಸ್ ಕಂದಕಕ್ಕೆ ಬಿದ್ದು 10 ಮಂದಿ ಸಾವು
ದೆಹಲಿಯಲ್ಲಿ ಹೊಸ ಸರ್ಕಾರ ಪ್ರಮಾಣ ವಚನ ಸ್ವೀಕರಿಸುತ್ತಿರುವಾಗಲೆ, ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದಾಗಿ ವರದಿಯಾಗಿದೆ. ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ನಂತರ ಬಸ್ಸು ಕಂದಕಕ್ಕೆ ಉರುಳಿದ್ದು ಕನಿಷ್ಠ 10 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಯೋತ್ಪಾದಕರು ದಾಳಿ ಮಾಡಿದ ಬಸ್ಸು ಕಮರಿಗೆ ಬಿದ್ದಾಗ ಕನಿಷ್ಠ 10 ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಯಾತ್ರಾರ್ಥಿಗಳು ಶಿವಖೋಡಿಯ ಗುಹಾ ದೇವಾಲಯಕ್ಕೆ ತೆರಳುತ್ತಿದ್ದರು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಕೆಳಗೆ ಬಿದ್ದ ರಭಸಕ್ಕೆ ಬಸ್‌ಗೆ ತೀವ್ರ ಹಾನಿಯಾಗಿದ್ದು, ಅಪಘಾತದ ಸ್ಥಳದಲ್ಲಿ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಕುಡಲೇ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಲಾಗಿದ್ದು, ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಿದ್ದಾರೆ.
ಪೊಲೀಸ್, ಸೇನೆ ಮತ್ತು ಅರೆಸೇನಾ ಪಡೆಗಳು ಸ್ಥಳಕ್ಕೆ ಧಾವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಭಯೋತ್ಪಾಕ ದಾಳಿ
ಗುಂಡಿನ ದಾಳಿಯಿಂದಾಗಿ ಚಾಲಕ ಬಸ್‌ನ ಬ್ಯಾಲೆನ್ಸ್ ಕಳೆದುಕೊಂಡು ಕಮರಿಗೆ ಬಿದ್ದಿದ್ದಾನೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ರಿಯಾಸಿ ಮೋಹಿತಾ ಶರ್ಮಾ ಹೇಳಿದ್ದಾರೆ. ಪ್ರಯಾಣಿಕರು ಸ್ಥಳೀಯರಲ್ಲ ಮತ್ತು ಅವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದಿದ್ದಾರೆ.
"ಶಿವ್ ಖೋರಿಯಿಂದ ಕತ್ರಾಕ್ಕೆ ಹೋಗುತ್ತಿದ್ದ ಪ್ರಯಾಣಿಕರ ಬಸ್ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ. ಗುಂಡಿನ ದಾಳಿಯಿಂದಾಗಿ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ಕಂದಕಕ್ಕೆ ಬಿದ್ದಿದೆ. ಘಟನೆಯಲ್ಲಿ 33 ಜನರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ," ಎಂದು ಸುದ್ದಿಗಾರರಿಗೆ ತಿಳಿಸಿದರು.












Click it and Unblock the Notifications