ಅನಂತನಾಗ್ ನಲ್ಲಿ ಉಗ್ರರ ದಾಳಿ : ಓರ್ವ ಪೇದೆ ಹುತಾತ್ಮ

Posted By:
Subscribe to Oneindia Kannada

ಅನಂತನಾಗ್, ಸೆಪ್ಟೆಂಬರ್ 09 : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ನಲ್ಲಿರುವ ಬಸ್ ನಿಲ್ದಾಣದಲ್ಲಿ ಶನಿವಾರ ಉಗ್ರರು ನಡೆಸಿದ ದಾಳಿಯಲ್ಲಿ ಓರ್ವ ಪೊಲೀಸ್ ಪೇದೆ ಹುತಾತ್ಮನಾಗಿದ್ದಾರೆ.

ಪೊಲೀಸ್ ಬೆಂಗಾವಲು ಪಡೆಯ ಮೇಲೆ ಭಯೋತ್ಪಾದಕರು ಹಠಾತ್ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.

ಭಾನುವಾರ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ಸಭೆ ನಡೆಯುತ್ತಿದ್ದು, ಆ ಸ್ಥಳದಿಂದ ಕೇವಲ 500 ಮೀಟರ್ ದೂರದಲ್ಲಿ ಈ ದಾಳಿ ನಡೆದಿದೆ.

Terrorist attack in Anantnag : 1 policeman martyred

ಉಗ್ರರು ಸುಮಾರು 20-25 ಸುತ್ತು ಗುಂಡು ಹಾರಿಸಿ ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಸಿಆರ್ ಪಿಎಫ್ ಯೋಧರು ಧಾವಿಸಿದ್ದು, ಇಡೀ ಪ್ರದೇಶವನ್ನು ಸುತ್ತುವರಿದಿದ್ದಾರೆ. ಉಗ್ರರಿಗಾಗಿ ಹುಡುಕಾಟ ನಡೆಯುತ್ತಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Police party attacked by terrorists at Anantnag bus stand in Jammu and Kashmir. 1 policeman martyred, 3 policemen injured. CRPF has reached the spot.
Please Wait while comments are loading...