Thalapathy Vijay: ತಮಿಳುನಾಡು ವಿಧಾನಸಭೆ ಚುನಾವಣೆ: ನಟ ದಳಪತಿ ವಿಜಯ್ ಟಿವಿಕೆ, ಡಿಎಂಕೆ, ಎಐಎಡಿಎಂಕೆ ನಡುವೆ ನೇರ ಪೈಪೋಟಿ
Tamil Nadu Assembly Election 2026: ದ್ರಾವಿಡ ರಾಜಕಾರಣದ ಭದ್ರಕೋಟೆ ತಮಿಳುನಾಡಿನಲ್ಲಿ ಈ ಬಾರಿ ಚುನಾವಣಾ ಕಣ ಹಿಂದೆಂದಿಗಿಂತಲೂ ಕುತೂಹಲ ಕೆರಳಿಸಿದೆ. ಅತಿರಥ ಮಹಾರಥರ ನಡುವೆ ಈ ಬಾರಿ ಸಿನಿಮಾ ರಂಗದ ಸೂಪರ್‌ಸ್ಟಾರ್ ದಳಪತಿ ವಿಜಯ್ ಅವರ ರಾಜಕೀಯ ಪ್ರವೇಶ ಹೊಸ ಸಂಚಲನ ಮೂಡಿಸಿದೆ. ಹಾಗಾದ್ರೆ ಇವರಿಗೆ ಯಾವೆಲ್ಲ ಪಕ್ಷಗಳಿಂದ ತೀವ್ರ ಪೈಪೋಟಿ ಇದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ತಮಿಳುನಾಡಿನ 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ಇಂದು (ಏಪ್ರಿಲ್ 23) ಬೆಳಗ್ಗೆಯಿಂದ ಆರಂಭವಾಗಿದೆ. 5.73 ಕೋಟಿಗೂ ಅಧಿಕ ಮತದಾರರಿದ್ದು, ಇವರು 4,023 ಮಂದಿ ಅಭ್ಯರ್ಥಿಳ ಭವಿಷ್ಯ ನಿರ್ಧರಿಸಲಿದ್ದಾರೆ. ಇಲ್ಲಿ ಡಿಎಂಕೆ-ಕಾಂಗ್ರೆಸ್ ಕೂಟ, ಅಣ್ಣಾಡಿಎಂಕೆ-ಬಿಜೆಪಿ ಕೂಟ ಹಾಗೂ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ನಡುವೆ ನೇರ ಪೈಪೋಟಿ ಏರ್ಪಟ್ಟಿದೆ.

ದಶಕಗಳಿಂದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳ ನಡುವೆ ಹಂಚಿಹೋಗಿದ್ದ ತಮಿಳುನಾಡಿನ ರಾಜಕೀಯ ಇತಿಹಾಸಕ್ಕೆ ವಿಜಯ್ ಹೊಸ ತಿರುವು ನೀಡಲು ಸಜ್ಜಾಗಿದ್ದಾರೆ. ತಮ್ಮ ಪಕ್ಷ ಟಿವಿಕೆ ಮೂಲಕ ಸ್ವತಂತ್ರವಾಗಿ ಕಣಕ್ಕಿಳಿದಿರುವ ಅವರು, ಯುವ ಸಮೂಹ ಮತ್ತು ಮೊದಲ ಬಾರಿಯ ಮತದಾರರ ಮೇಲೆ ಹೆಚ್ಚಿನ ಪ್ರಭಾವ ಬೀರಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.
ಸಿನಿಮಾ ಗ್ಲಾಮರ್ ಮತ್ತು ದೊಡ್ಡ ಅಭಿಮಾನಿ ಬಳಗವನ್ನೇ ಹೊಂದಿರುವ ವಿಜಯ್ ಅವರ ಎಂಟ್ರಿ, ಸಾಂಪ್ರದಾಯಿಕ ಪಕ್ಷಗಳಾದ ಡಿಎಂಕೆ ಮತ್ತು ಅಣ್ಣಾಡಿಎಂಕೆಯ ವೋಟ್ ಬ್ಯಾಂಕ್‌ಗೆ ಕನ್ನ ಹಾಕಲಿದೆಯೇ ಎಂಬುದು ಈಗ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಈ ತ್ರಿಕೋನ ಕದನದಲ್ಲಿ ಗೆಲುವಿನ ಮಾಲೆ ಯಾರ ಕೊರಳಿಗೆ ಬೀಳಲಿದೆ ಎನ್ನುವುದನ್ನು ಕಾದುನೋಡಬೇಕಿದೆ.












Click it and Unblock the Notifications