ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂದಿನ 5 ದಿನಗಳಲ್ಲಿ ಚಳಿಯ ಪ್ರಮಾಣ ಅಧಿಕ

|
Google Oneindia Kannada News

ನವದೆಹಲಿ, ಜನವರಿ 19: ಗುರುವಾರ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಶೀತ ಅಲೆಗಳ ಪರಿಸ್ಥಿತಿ ಕಡಿಮೆಯಾಗಿದೆ. ಆದರೆ ಮುಂದಿನ ಐದು ದಿನಗಳಲ್ಲಿ ಮತ್ತೊಮ್ಮೆ ಚಳಿಯ ತೀವ್ರತೆ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ತಿಳಿಸಿದೆ.

ಹವಾಮಾನ ಇಲಾಖೆಯ ಪ್ರಕಾರ, ಗುರುವಾರ ದಕ್ಷಿಣ ಹರಿಯಾಣ, ಪೂರ್ವ ರಾಜಸ್ಥಾನ, ಉತ್ತರ ಮಧ್ಯಪ್ರದೇಶ ಮತ್ತು ಬಿಹಾರದ ಹಲವೆಡೆ ಶೀತ ಅಲೆಯ ಪರಿಸ್ಥಿತಿಗಳು ಹೆಚ್ಚಳವಾಗಿವೆ ಎಂದು ತಿಳಿದು ಬಂದಿದೆ. ಉತ್ತರ ಮಧ್ಯಪ್ರದೇಶದ ಕೆಲವು ಭಾಗಗಳು ಮತ್ತು ಹರಿಯಾಣ ಮತ್ತು ಪೂರ್ವ ಉತ್ತರ ಪ್ರದೇಶದ ಪ್ರತ್ಯೇಕ ಭಾಗಗಳಲ್ಲಿ ಕನಿಷ್ಠ ತಾಪಮಾನವು 2 ರಿಂದ 5 ಡಿಗ್ರಿ ಸೆಲ್ಸಿಯಸ್‌ನಷ್ಟು ಇದೆ ಎಂದು ಅದು ಹೇಳಿದೆ.

Bengaluru Cold Weather : ಒಂದು ವಾರ ದಟ್ಟ ಮಂಜು, ಚಳಿ ಇರಲಿದೆ: ಹವಾಮಾನ ಇಲಾಖೆ ಮುನ್ಸೂಚನೆBengaluru Cold Weather : ಒಂದು ವಾರ ದಟ್ಟ ಮಂಜು, ಚಳಿ ಇರಲಿದೆ: ಹವಾಮಾನ ಇಲಾಖೆ ಮುನ್ಸೂಚನೆ

The cold will be high in the next 5 days

ಮುಂದಿನ ಐದು ದಿನಗಳಲ್ಲಿ ಉತ್ತರ ಭಾರತದ ಕೆಲವೆಡೆ ಶೀತ ಅಲೆಗಳ ಪರಿಸ್ಥಿತಿ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ. ಜನವರಿ 20 ರ ರಾತ್ರಿಯಿಂದ ಜನವರಿ 26 ರವರೆಗೆ ಪಶ್ಚಿಮ ಹಿಮಾಲಯ ಪ್ರದೇಶ ಮತ್ತು ಜನವರಿ 23 ರಿಂದ ಜನವರಿ 25 ರವರೆಗೆ ವಾಯುವ್ಯ ಭಾರತದ ಬಯಲು ಪ್ರದೇಶಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಅದು ಮಾಹಿತಿ ನೀಡಿದೆ.

The cold will be high in the next 5 days

ಜನವರಿ 20ರಿಂದ 22ರವರೆಗೆ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಮೇಲೆ ಲಘುವಾಗಿ ಸಾಧಾರಣ ಮಳೆ ಮತ್ತು ಹಿಮಪಾತದ ಸಾಧ್ಯತೆಯಿದೆ. ಜನವರಿ 23 ಮತ್ತು ಜನವರಿ 26ರ ನಡುವೆ ಚಳಿಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. ಜನವರಿ 23 ರಿಂದ ಜನವರಿ 25 ಮತ್ತು 26 ರವರೆಗೆ ಪಂಜಾಬ್, ಹರಿಯಾಣ, ದೆಹಲಿ, ಉತ್ತರ ರಾಜಸ್ಥಾನ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

English summary
Cold wave conditions eased in some parts of North India on Thursday. But the intensity of the cold will increase again in the next five days, the Indian Meteorological Department said on Thursday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X