Narendra Modi: ಟೀಕೆಗಳ ನಡುವೆ ನಾನು ಹಿಂದೂ-ಮುಸ್ಲಿಂ ರಾಜಕಾರಣ ಮಾಡುವುದಿಲ್ಲ ಎಂದ ಪ್ರಧಾನಿ ಮೋದಿ
ನವದೆಹಲಿ, ಮೇ. 14 : 2024 ರ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಮೂರನೇ ಬಾರಿ ಪ್ರಧಾನಿ ಹುದ್ದೆಯನ್ನು ಅಲಂಕರಿಸಲು ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಒಡಕು ಮೂಡಿಸುತ್ತಿದ್ದಾರೆ ಎಂಬ ಆರೋಪ ಪ್ರಧಾನಿ ನರೇಂದ್ರ ಮೋದಿ ಮೇಲಿದೆ. ಇದರ ಬೆನ್ನಲ್ಲೇ ಮೋದಿ ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದಾರೆ.
"ನಾನು ಹಿಂದೂ-ಮುಸ್ಲಿಂ ರಾಜಕೀಯ ಮಾಡುವ ದಿನ, ನಾನು ಸಾರ್ವಜನಿಕ ಜೀವನಕ್ಕೆ ಅನರ್ಹನಾಗುತ್ತೇನೆ. ಇದು ನನ್ನ ಸಂಕಲ್ಪ. ನಾನು ಯಾವತ್ತೂ ಹಿಂದೂ-ಮುಸ್ಲಿಂ ರಾಜಕಾರಣ ಮಾಡುವುದಿಲ್ಲ" ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇತ್ತೀಚೆಗೆ ಚುನಾವಣಾ ಪ್ರಚಾರಗಳಲ್ಲಿ ಹಲವು ಬಾರಿ ಪ್ರಧಾನಿ ಕಾಂಗ್ರೆಸ್ ಅನ್ನು ಟೀಕಿಸುವ ಭರದಲ್ಲಿ ಮುಸ್ಲಿಂ ಸಮುದಾಯವನ್ನು ಅವಮಾನಿಸಿದ್ದಾರೆ. ಇವುಗಳ ಬಗ್ಗೆ ಪ್ರಶ್ನೆ ಬಂದಾಗ ತಾವು ಅಂತಹ ರಾಜಕಾರಣ ಮಾಡಿಲ್ಲ ಎಂದಿದ್ದಾರೆ.

ಹಿಂದೂ ಮುಸ್ಲಿಂ ರಾಜಕಾರಣ ಮಾಡಲ್ಲ!
ವಾರಣಾಸಿ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಲೋಕಸಭೆಗೆ ಸ್ಪರ್ಧಿಸಲು ಬಯಸಿ ನಾಮಪತ್ರ ಸಲ್ಲಿಸಿದ ದಿನವೇ ವಾರಣಾಸಿಯಲ್ಲಿ ಸಂದರ್ಶನ ನೀಡಿದ್ದಾರೆ. ನ್ಯೂಸ್18 ಇಂಡಿಯಾ ಟಿವಿ (News18) ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮೋದಿ ತಾವು ಹಿಂದೂ ಮುಸ್ಲಿಂ ರಾಜಕಾರಣ ಮಾಡಿಲ್ಲ... ಮಾಡಲ್ಲ ಎಂದು ಹೇಳಿಕೆಗಳನ್ನು ನೀಡಿದ್ದಾರೆ. ಇವುಗಳನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
"ನನ್ನ ದೇಶದ ಜನರು ನನಗೆ ಮತ ಹಾಕುತ್ತಾರೆ ಎಂದು ನಾನು ನಂಬುತ್ತೇನೆ" ಎಂದು ಮೋದಿ ಸಂದರ್ಶನದಲ್ಲಿ ಹೇಳಿದ್ದಾರೆ. "ರಾಜಕೀಯದಲ್ಲಿ ನಾನು ಹಿಂದೂ-ಮುಸ್ಲಿಂ ಬಗ್ಗೆ ಮಾತನಾಡಲು ಪ್ರಾರಂಭಿಸುವ ದಿನ ನಾನು ಸಾರ್ವಜನಿಕ ಜೀವನವನ್ನು ನಡೆಸುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತೇನೆ. ನಾನು ಹಿಂದೂ-ಮುಸ್ಲಿಂ ರಾಜಕಾರಣ ಮಾಡುವುದಿಲ್ಲ. ಅದು ನನ್ನ ಸಂಕಲ್ಪ" ಎಂದು ಮೋದಿ ಹಿಂದಿಯಲ್ಲಿ ಮಾತನಾಡುತ್ತಾ ಹೇಳಿದ್ದಾರೆ.

ಈ ಹಿಂದೆ ಪ್ರಧಾನಿ ಮೋದಿ 'ನುಸುಳುಕೋರರು' ಮತ್ತು 'ಹೆಚ್ಚು ಮಕ್ಕಳಿರುವವರು' ಎಂದು ಹಲವು ಚುನಾವಣಾ ಪ್ರಚಾರಗಳಲ್ಲಿ ಟೀಕಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ತಾನು ಮುಸ್ಲಿಮರ ಬಗ್ಗೆ ಮಾತ್ರ ಮಾತನಾಡುವುದಿಲ್ಲ, ಆದರೆ ಪ್ರತಿ ಬಡ ಕುಟುಂಬದ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ.
"ನನಗೆ ಆಘಾತವಾಗಿದೆ. ಹೆಚ್ಚು ಮಕ್ಕಳಿರುವವರ ಬಗ್ಗೆ ಮಾತನಾಡುವಾಗ, ಅವರು ಮುಸ್ಲಿಮರು ಎಂದು ಯಾರು ಹೇಳಿದರು? ನೀವು ಮುಸ್ಲಿಮರಿಗೆ ಏಕೆ ಅನ್ಯಾಯ ಮಾಡುತ್ತಿದ್ದೀರಿ? ಬಡ ಕುಟುಂಬಗಳಲ್ಲಿಯೂ ಇದೇ ಪರಿಸ್ಥಿತಿ ಇದೆ. ನಾನು ಹೇಳಿದ್ದೇನೆಂದರೆ, ನೀವು ಎಷ್ಟು ಮಕ್ಕಳನ್ನು ಸಾಕಲು ಆಗುತ್ತದೆಯೋ ಅಷ್ಟು ಮಕ್ಕಳನ್ನು ಹೊಂದಬೇಕು ಎಂದು" ಎಂದು ಸ್ಪಷ್ಟನೆ ನೀಡಿದ್ದಾರೆ.
मैंने वोट बैंक के लिए कभी काम नहीं किया है, लेकिन जो गलत है उसे गलत कहकर रहूंगा! https://t.co/8mkxDBtoOW
— Narendra Modi (@narendramodi) May 14, 2024
ಏಪ್ರಿಲ್ 21 ರಂದು ರಾಜಸ್ಥಾನದ ಬನ್ಸ್ವಾರಾದಲ್ಲಿ ಪ್ರಧಾನಿ ಮೋದಿ ಮಾಡಿದ ಭಾಷಣಕ್ಕೆ ಭಾರಿ ಟೀಕೆ ವ್ಯಕ್ತವಾಗಿತ್ತು. ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಾ, "ಈ ಹಿಂದೆ ಅವರು ಅಧಿಕಾರದಲ್ಲಿದ್ದಾಗ, ರಾಷ್ಟ್ರದ ಸಂಪತ್ತಿನ ಮೊದಲ ಹಕ್ಕು ಮುಸ್ಲಿಮರಿಗೆ ಇದೆ ಎಂದು ಅವರು ಹೇಳಿದ್ದರು. ಅಂದರೆ, ಅವರು ಈ ಸಂಪತ್ತನ್ನು ಯಾರಿಗೆ ಹಂಚುತ್ತಾರೆ..? ಅವರು ಅದನ್ನು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ, ನುಸುಳುಕೋರರಿಗೆ ನೀಡುತ್ತಾರೆ. ನೀವು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ನುಸುಳುಕೋರರಿಗೆ ನೀಡಲು ಬಿಡುತ್ತೀರಾ? ಅವರು ನಮ್ಮ ಸಹೋದರಿಯರ ಮಂಗಳಸೂತ್ರವನ್ನು ಬಿಡುವುದಿಲ್ಲ" ಎಂದು ಆವೇಶಭರಿತ ಭಾಷಣ ಮಾಡಿದ್ದರು.
ಈ ಬಗ್ಗೆ ಕಾಂಗ್ರೆಸ್, ಸಿಪಿಐ ಮತ್ತು ಸಿಪಿಐ (ಎಂ-ಎಲ್) ಚುನಾವಣಾ ಆಯೋಗಕ್ಕೆ ದೂರುಗಳನ್ನು ನೀಡಿತ್ತು. ಪ್ರಧಾನಿ ಮೋದಿ ಮತ್ತು ಬಿಜೆಪಿ ತಮ್ಮ ಹಿಂದೂ ಮತದಾರರನ್ನು ಸೆಳೆಯಲು ಅಲ್ಪಸಂಖ್ಯಾತ ಮುಸ್ಲಿಮರನ್ನು ಗುರಿಯಾಗಿಸಿಕೊಂಡಿದೆ ಎಂದು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಆರೋಪಿಸಿದೆ. ಈ ಆರೋಪವನ್ನು ಮೋದಿ ಮತ್ತು ಬಿಜೆಪಿ ನಿರಾಕರಿಸಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications