ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರಪತಿ ದ್ರೌಪದಿ ಮುರ್ಮು ಕಾಲಿಗೆ ನಮಸ್ಕರಿಸಲು ಹೋದ ಇಂಜಿನಿಯರ್ ಅಮಾನತು

|
Google Oneindia Kannada News

ಜೈಪುರ, ಜನವರಿ 14: ಜನವರಿ 4ರಂದು ನಡೆದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭದ್ರತಾ ಪ್ರೋಟೋಕಾಲ್ ಅನ್ನು ಉಲ್ಲಂಘಿಸಿ ಅವರ ಪಾದಗಳಿಗೆ ನಮಸ್ಕರಿಸಲು ಪ್ರಯತ್ನಿಸಿದ್ದಕ್ಕಾಗಿ ರಾಜಸ್ಥಾನ ಸರ್ಕಾರಿ ಇಂಜಿನಿಯರ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ.

ಮಕರ ಸಂಕ್ರಾಂತಿ ವಿಶೇಷ ಪುಟ

ಗೃಹ ಸಚಿವಾಲಯದ ಸೂಚನೆಯ ಮೇರೆಗೆ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ವಿಭಾಗ ಇಂಜಿನಿಯರ್ ಅನ್ನು ಅಮಾನತುಗೊಳಿಸಿದೆ. ಪಿಎಚ್‌ಇಡಿಯಲ್ಲಿ ಜೂನಿಯರ್ ಇಂಜಿನಿಯರ್ ಆಗಿರುವ ಅಂಬಾ ಸಿಯೋಲ್ ಅವರು ಜನವರಿ 4 ರಂದು ರೋಹೆತ್‌ನಲ್ಲಿ ನಡೆದ ಸ್ಕೌಟ್ ಗೈಡ್ ಜಾಂಬೋರಿಯ ಉದ್ಘಾಟನಾ ಕಾರ್ಯಕ್ರಮದ ಸಂದರ್ಭದಲ್ಲಿ ರಾಷ್ಟ್ರಪತಿಗಳ ಪಾದಗಳನ್ನು ಸ್ಪರ್ಶಿಸುವ ಪ್ರಯತ್ನವನ್ನು ಮಾಡುವ ಮೂಲಕ ಶಿಷ್ಟಾಚಾರವನ್ನು ಉಲ್ಲಂಘಿಸಿದ್ದರು.

ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಗೆ ಭಾಜನರಾದ ಕಾಫಿನಾಡಿನ ಶುಶ್ರೂಷಕಿಯರುರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಗೆ ಭಾಜನರಾದ ಕಾಫಿನಾಡಿನ ಶುಶ್ರೂಷಕಿಯರು

ಆದ್ದರಿಂದ ರಾಜಸ್ಥಾನದ ನಾಗರಿಕ ಸೇವಾ ನಿಯಮದ ಅಡಿಯಲ್ಲಿ ಅಧಿಕಾರವನ್ನು ಬಳಸಿಕೊಂಡಿದ್ದಾರೆ. ಹಾಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಪಿಎಚ್‌ಇಡಿ ಮುಖ್ಯ ಇಂಜಿನಿಯರ್ (ಆಡಳಿತ) ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.

The engineer who went to bow at the feet of President Draupadi Murmu was suspended

ನೀರಿನ ವ್ಯವಸ್ಥೆಯನ್ನು ನೋಡಿಕೊಳ್ಳಲು ಸಿಯೋಲ್ ಸ್ಥಳದಲ್ಲಿಯೇ ಇದ್ದರು. ಆದರೆ ಅಧ್ಯಕ್ಷರ ಭದ್ರತಾ ವ್ಯವಸ್ಥೆಯನ್ನು ಉಲ್ಲಂಘಿಸಿ ಅವರು ರಾಷ್ಟ್ರಪತಿಯವರನ್ನು ಸ್ವಾಗತಿಸಲು ಅಲ್ಲಿದ್ದ ಅಧಿಕಾರಿಗಳ ಭದ್ರತಾ ವ್ಯವಸ್ಥೆಯನ್ನು ಮೀರಿ ಹೋಗಿದ್ದರು. ಹಠಾತ್ತಾಗಿ ಎಂಜಿನಿಯರ್‌ ಮುಂದೆ ಹೆಜ್ಜೆ ಹಾಕಿದರು. ಮತ್ತು ರಾಷ್ಟ್ರಪತಿಯವರ ಪಾದಗಳನ್ನು ಸ್ಪರ್ಶಿಸಲು ಪ್ರಯತ್ನಿಸಿದರು. ಕೊನೆಗೆ ರಾಷ್ಟ್ರಪತಿಗಳ ಭದ್ರತಾ ಸಿಬ್ಬಂದಿಯಿಂದ ತಡೆಯಲಾಯಿತು.

ಬಳಿಕ ರಾಜಸ್ಥಾನದ ಸ್ಥಳೀಯ ಪೊಲೀಸರು ಔಪಚಾರಿಕ ವಿಚಾರಣೆಯ ನಂತರ ಅವರನ್ನು ಬಿಟ್ಟುಕೊಟ್ಟರು. ಕೇಂದ್ರ ಗೃಹ ಸಚಿವಾಲಯವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭದ್ರತೆಯಲ್ಲಿ ಗಂಭೀರ ಲೋಪವಾಗಿದೆ ಎಂದು ಪರಿಗಣಿಸಿ ರಾಜಸ್ಥಾನ ಪೊಲೀಸರಿಂದ ವರದಿ ಕೇಳಿತ್ತು.

English summary
A Rajasthan government engineer has been suspended for violating the security protocol of President Draupadi Murmu at an event on January 4 and attempting to bow at her feet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X