ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಶ್ಮೀರದಲ್ಲಿ ಮೊದಲು ಹೂಡಿಕೆ ಮಾಡಲಿರುವ ಕನ್ನಡಿಗ ಯಾರು?

|
Google Oneindia Kannada News

ದುಬೈ, ಸೆಪ್ಟೆಂಬರ್ 19: ಜಮ್ಮು-ಕಾಶ್ಮೀರದಲ್ಲಿ ಬೇರೆ ರಾಜ್ಯದವರು ಆಸ್ತಿ ಖರೀದಿಸಲು ಇದ್ದ ನಿಷೇಧ ತೆರವುಳಿಸಿರುವ ಹಿನ್ನೆಲೆ ಕರ್ನಾಟಕ ಮೂಲದ ಉದ್ಯಮಿ ಬಿ.ಆರ್.ಶೆಟ್ಟಿ ಜಮ್ಮು ಕಾಶ್ಮೀರದಲ್ಲಿ ಬೃಹತ್ ಫಿಲ್ಮ್ ಸಿಟಿ ಆರಂಭಿಸಲು ಯೋಜನೆ ರೂಪಿಸಿದ್ದಾರೆ.

ಅರಬ್ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಬಿ.ಆರ್. ಶೆಟ್ಟಿ, ಜಮ್ಮು-ಕಾಶ್ಮೀರ ಅತ್ಯಂತ ರಮಣೀಯ ಸ್ಥಳವಾಗಿದ್ದು, ನಾನು ಅಲ್ಲಿಗೆ ಬಂದು ಚಿತ್ರಗಳನ್ನು ಚಿತ್ರೀಕರಿಸಬಹುದು.

ನನಗೆ ಈಗಾಗಲೇ ಜಮ್ಮು ಕಾಶ್ಮೀರ ಮತ್ತು ಲಡಾಕ್ ನಲ್ಲಿ ಸುಮಾರು 3 ಸಾವಿರ ಎಕರೆಯಷ್ಟು ಜಾಗ ನೀಡುವುದಾಗಿ ಆಫರ್‌ಗಳು ಬಂದಿವೆ. ಆಗಸ್ಟ್‌ನಲ್ಲಿ ನರೇಂದ್ರ ಅವರು ಯುಎಇಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಜಮ್ಮು ಕಾಶ್ಮೀರದಲ್ಲಿ 7 ಸಾವಿರ ಕೋಟಿ ರೂ ಹೂಡಿಕೆ ಮಾಡುವುದಾಗಿ ಬಿ.ಆರ್. ಶೆಟ್ಟಿ ಪ್ರಕಟಿಸಿದ್ದರು.

The First Kannadiga Who Want To Invest In Kashmir

ಸಂವಿಧಾನದ ವಿಧಿ 35 ಎ ವಿಧಿ ಕಾಶ್ಮೀರದ ಜನರಿಗೆ ವಿಶೇಷ ಸೌಲಭ್ಯ ಕಲ್ಪಿಸಿತ್ತು. ಕಾಶ್ಮೀರದ ನಿವಾಸಿಗಳನ್ನು ಹೊರತುಪಡಿಸಿ ಅನ್ಯ ರಾಜ್ಯದವರು ಆಸ್ತಿ ಖರೀದಿಸಲು ಅವಕಾಶ ಇರಲಿಲ್ಲ. ಆದರೆ, ಕೇಂದ್ರ ಸರ್ಕಾರ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ವಿಧಿ ರದ್ದುಗೊಳಿಸಿರುವುದರಿಂದ ಅನುಕೂಲವಾಗಿದೆ.

English summary
Business man Who Is From Karnataka leaves in Dubai called BR Shetty who want to invest money in Kahmir for the first time.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X