The Kashmir Files: ಪ್ರಧಾನಿ ಹೀಗೆ ಹೇಳಿದ ನಂತರ 8 ರಾಜ್ಯಗಳಲ್ಲಿ ತೆರಿಗೆ ವಿನಾಯಿತಿ

ನವದೆಹಲಿ, ಮಾರ್ಚ್ 15: ಜಮ್ಮು ಮತ್ತು ಕಾಶ್ಮೀರದ ಕುರಿತಾಗಿ ಹಲವು ವರ್ಷಗಳಿಂದ ಮುಚ್ಚಿಡಲಾಗಿದ್ದ ವಿಷಯಗಳನ್ನು "ದಿ ಕಾಶ್ಮೀರ್ ಫೈಲ್ಸ್" ಚಿತ್ರವು ತೆರೆದಿಟ್ಟಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಮಂಗಳವಾರ ಭಾರತೀಯ ಜನತಾ ಪಕ್ಷದ ಸಂಸದೀಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, "ದಿ ಕಾಶ್ಮೀರ್ ಫೈಲ್ಸ್" ಹಿಂದಿ ಚಿತ್ರದ ಬಗ್ಗೆ ಪ್ರಶಂಸೆಯ ಸುರಿಮಳೆಗೈದಿದ್ದಾರೆ. ಎಲ್ಲ ಸಂಸದರು ಈ ಚಿತ್ರವನ್ನೊಮ್ಮೆ ನೋಡುವಂತೆ ಪ್ರಧಾನಿ ಸಲಹೆ ನೀಡಿದ್ದಾರೆ. ಇಂಥ ಚಿತ್ರಗಳು ಹೆಚ್ಚು ಹೆಚ್ಚಾಗಿ ನಿರ್ಮಿಸಬೇಕಿದೆ ಎಂದು ಹೇಳಿದ್ದಾರೆ.

ವಿವೇಕ್ ಅಗ್ನಿಹೋತ್ರಿ ನಿರ್ದೇಶಿಸಿದ ಈ ಚಲನಚಿತ್ರದ ಕಳೆದ ಮಾರ್ಚ್ 11ರಂದು ಬಿಡುಗಡೆಯಾಗಿತ್ತು. 1990ರ ದಶಕದ ವೇಳೆಯಲ್ಲಿ ಕಾಶ್ಮೀರಿ ಪಂಡಿತರನ್ನು ಹೇಗೆ ಕೊಲ್ಲಲಾಯಿತು, ಎಷ್ಟರ ಮಟ್ಟಿಗೆ ಕಿರುಕುಳ ನೀಡಲಾಯಿತು ಎಂಬುದರ ಬಗ್ಗೆ ಚಿತ್ರಿಸಲಾಗಿದೆ. ಅದಲ್ಲದೇ ರಾತ್ರೋರಾತ್ರಿ ಕಾಶ್ಮೀರಿ ಪಂಡಿತರನ್ನು ಮನೆಯಿಂದ ಓಡಿಸುವುದಕ್ಕೆ ನಡೆಸಿದ ದೌರ್ಜನ್ಯದ ಕುರಿತು ಎತ್ತಿ ತೋರಿಸಲಾಗಿದೆ. ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್, ಪಲ್ಲವಿ ಜೋಶಿ, ಮಿಥುನ್ ಚಕ್ರವರ್ತಿ ಹಾಗೂ ಪ್ರಕಾಶ್ ಬೆಳವಾಡಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

The Kashmir Files Movie Showed The Truth Which Was Suppressed For Years, says PM Modi

ದೇಶದಲ್ಲಿ ಸಖತ್ ಸುದ್ದಿ ಮಾಡಿದ ಚಿತ್ರ:

ಕಾಶ್ಮೀರಿ ಪಂಡಿತರ ಮೇಲೆ ನಡೆಸಿದ ಕ್ರೌರ್ಯ ಮತ್ತು ಅನುಭವಿಸಿದ ಯಾತನೆ ಕುರಿತು ಚಿತ್ರಿಸಲಾಗಿರುವ ದಿ ಕಾಶ್ಮೀರಿ ಫೈಲ್ಸ್ ಸಿನಿಮಾ ದೇಶಾದ್ಯಂತ ಸಖತ್ ಸದ್ದು ಮಾಡುತ್ತಿದೆ. ಆರಂಭಿಕ ಹಂತದಲ್ಲಿ ಈ ಚಿತ್ರದ ಕುರಿತು ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರೆ ಶನಿವಾರ ಚಿತ್ರತಂಡದ ಪ್ರಮುಖರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದು, ಸಿನಿಮಾಗೆ ಅವಕಾಶ ನೀಡುವಂತೆ ಕೋರಿದ್ದರು.

ದಿ ಕಾಶ್ಮೀರಿ ಫೈಲ್ಸ್ ಸಿನಿಮಾವನ್ನು ವೀಕ್ಷಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಇಡೀ ಸಿನಿಮಾದ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡಿದ್ದರು. ಪ್ರಧಾನಿ ಮೆಚ್ಚುಗೆ ಬೆನ್ನಲ್ಲೇ ಹಲವು ರಾಜ್ಯಗಳಲ್ಲಿ ಸಿನಿಮಾಗೆ ತೆರಿಗೆ ವಿನಾಯಿತಿಯನ್ನು ನೀಡಲಾಯಿತು.

ಭಾರತದ 8 ರಾಜ್ಯಗಳಲ್ಲಿ ತೆರಿಗೆ ವಿನಾಯಿತಿ:

ದಿ ಕಾಶ್ಮೀರ್​ ಫೈಲ್ಸ್​ ಹಿಂದಿ ಸಿನಿಮಾಕ್ಕೆ ಗುಜರಾತ್, ಹರ್ಯಾಣ, ಮಧ್ಯಪ್ರದೇಶದಲ್ಲಿ ತೆರಿಗೆ ವಿನಾಯತಿ ಘೋಷಿಸಲಾಗಿದೆ. ಕರ್ನಾಟಕದಲ್ಲೂ ಈ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ. ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಮೇಲಿನ ಮನರಂಜನಾ ತೆರಿಗೆಯನ್ನು ತೆಗೆದು ಹಾಕಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇದರ ಬೆನ್ನಲ್ಲೇ ಗೋವಾ, ತ್ರಿಪುರಾ, ಉತ್ತರಾಖಂಡ್, ಉತ್ತರ ಪ್ರದೇಶ ಹಾಗೂ ಮಹಾರಾಷ್ಟ್ರದಲ್ಲೂ ಸಿನಿಮಾ ಮೇಲಿನ ಮನರಂಜನಾ ತೆರಿಗೆಗೆ ವಿನಾಯಿತಿ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+