'ದಿ ಕೇರಳ ಸ್ಟೋರಿ' ಸಂಘ ಪರಿವಾರದ ಸುಳ್ಳು ಕಾರ್ಖಾನೆಯ ಉತ್ಪನ್ನ : ಸಿಎಂ ಪಿಣರಾಯಿ ವಿಜಯನ್ ವಾಗ್ದಾಳಿ
ತಿರುವನಂತಪುರಂ, ಏಪ್ರಿಲ್. 30: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 'ದಿ ಕೇರಳ ಸ್ಟೋರಿ' ಚಿತ್ರದ ನಿರ್ಮಾಪಕರ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿದ್ದು, 'ಲವ್ ಜಿಹಾದ್' ವಿಷಯವನ್ನು ಕೆದಕುವ ಮೂಲಕ ರಾಜ್ಯವನ್ನು ಧಾರ್ಮಿಕ ಉಗ್ರವಾದದ ಕೇಂದ್ರವೆಂದು ಬಿಂಬಿಸುವ ಸಂಘಪರಿವಾರದ ಪ್ರಚಾರ ಇದು ಎಂದು ಆಕ್ರೋಶ ಹೊರಹಾಕಿದ್ದಾರೆ.
ಈ ಚಿತ್ರವು ಕೋಮುವಾದವನ್ನು ಹಬ್ಬುವ ಉದ್ದೇಶದಿಂದ ಮತ್ತು ರಾಜ್ಯದ ವಿರುದ್ಧ ದ್ವೇಷದ ಪ್ರಚಾರವನ್ನು ಉದ್ದೇಶಪೂರ್ವಕವಾಗಿ ನಿರ್ಮಿಸಲಾಗಿದೆ ಎಂದು ತೋರುತ್ತದೆ. ಈ ನಕಲಿ ಕಥೆ ಸಂಘ ಪರಿವಾರದ ಸುಳ್ಳು ಕಾರ್ಖಾನೆಯ ಉತ್ಪನ್ನವಾಗಿದೆ. ಲವ್ ಜಿಹಾದ್‌ನಂತಹ ಪರಿಕಲ್ಪನೆಯನ್ನು ನ್ಯಾಯಾಲಯಗಳು, ತನಿಖಾ ಸಂಸ್ಥೆಗಳು ಮತ್ತು ಕೇಂದ್ರ ಗೃಹ ಸಚಿವಾಲಯವೂ ತಿರಸ್ಕರಿಸಿದೆ ಆದರೆ, ಇದನ್ನು ಬಳಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ದಿ ಕೇರಳ ಸ್ಟೋರಿ' ಚಿತ್ರದ ಟ್ರೈಲರ್ ಜಾತ್ಯತೀತತೆಯ ಭೂಮಿ ಕೇರಳದಲ್ಲಿ ಧಾರ್ಮಿಕ ಉಗ್ರವಾದದ ಕೇಂದ್ರವಾಗಿ ತನ್ನನ್ನು ತಾನು ಸ್ಥಾಪಿಸಿಕೊಂಡಿರುವ ಸಂಘ ಪರಿವಾರದ ಪ್ರಚಾರವನ್ನು ಹರಡಲು ಪ್ರಯತ್ನಿಸುತ್ತಿದೆ ಎಂದು ಸೂಚಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
" ಸಂಘಪರಿವಾರ ನಕಲಿ ಕಥೆಗಳು ಮತ್ತು ಚಲನಚಿತ್ರಗಳ ಮೂಲಕ ವಿಭಜನೆಯ ರಾಜಕೀಯವನ್ನು ಮಾಡಲು ಪ್ರಯತ್ನಿಸುತ್ತಿದ್ದಾರೆ. ಸಂಘಪರಿವಾರವು ಯಾವುದೇ ಸತ್ಯ ಮತ್ತು ಪುರಾವೆಗಳಿಲ್ಲದೆ ಇಂತಹ ಪುರಾಣಗಳನ್ನು ಹರಡುತ್ತಿದೆ. ಕೇರಳದಲ್ಲಿ 32,000 ಮಹಿಳೆಯರು ಇಸ್ಲಾಂಗೆ ಮತಾಂತರಗೊಂಡು ಇಸ್ಲಾಮಿಕ್ ಸ್ಟೇಟ್ ಸೇರಿದ್ದಾರೆ ಎಂಬ ದೊಡ್ಡ ಸುಳ್ಳು ಚಿತ್ರದ ಟ್ರೇಲರ್‌ನಲ್ಲಿ ನಾವು ನೋಡಿದ್ದು, ಈ ನಕಲಿ ಕಥೆ ಸಂಘಪರಿವಾರದ ಸುಳ್ಳು ಕಾರ್ಖಾನೆಯ ಉತ್ಪನ್ನವಾಗಿದೆ" ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಸುದೀಪ್ತೋ ಸೇನ್ ಬರೆದು ನಿರ್ದೇಶಿಸಿದ 'ದಿ ಕೇರಳ ಸ್ಟೋರಿ', ದಕ್ಷಿಣ ರಾಜ್ಯದಲ್ಲಿ ಕಾಣೆಯಾಗಿದ್ದಾರೆ ಎಂದು ಹೇಳಲಾದ ಸುಮಾರು 32,000 ಮಹಿಳೆಯರ ಹಿಂದಿನ ಘಟನೆಗಳನ್ನು ಹೊರತೆಗೆಯುತ್ತಿದೆ ಎಂದು ಚಿತ್ರಿಸಲಾಗಿದೆ. ಇವರೆಲ್ಲಾ ಮತಾಂತರಗೊಂಡರು ಮತ್ತು ಭಾರತ ಮತ್ತು ಜಗತ್ತಿನಲ್ಲಿ ಭಯೋತ್ಪಾದಕ ಕಾರ್ಯಾಚರಣೆಗಳಲ್ಲಿ ಭಾಗವಹಿಸಲು ನಿಯೋಜಿಸಲಾಗಿತ್ತು ಎಂದು ಚಲನಚಿತ್ರವು ತಪ್ಪಾಗಿ ಹೇಳುತ್ತಿದೆ. ಕೇರಳದ ಚುನಾವಣಾ ರಾಜಕೀಯದಲ್ಲಿ ಲಾಭ ಪಡೆಯಲು ಸಂಘಪರಿವಾರ ನಡೆಸುತ್ತಿರುವ ವಿವಿಧ ಪ್ರಯತ್ನಗಳ ಹಿನ್ನೆಲೆಯಲ್ಲಿ ನೋಡಬೇಕಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ಇನ್ನು, ಈ ಸುಳ್ಳು ಆರೋಪವನ್ನು ಸಿನಿಮಾದಲ್ಲಿ ಮುಖ್ಯ ವಿಷಯವನ್ನಾಗಿ ಮಾಡಿರುವುದು ಕೇರಳವನ್ನು ಜಗತ್ತಿನ ಮುಂದೆ ಅವಮಾನಿಸುವ ಹುಮ್ಮಸ್ಸಿನಿಂದ. ಕೇರಳದ ಧಾರ್ಮಿಕ ಸಾಮರಸ್ಯದ ವಾತಾವರಣವನ್ನು ಮುರಿದು ಕೋಮುವಾದದ ವಿಷವನ್ನು ಹರಡಲು ಸಂಘಪರಿವಾರ ಪ್ರಯತ್ನಿಸುತ್ತಿದೆ ಎಂದು ಪಿಣರಾಯಿ ವಿಜಯನ್ ಕಟುವಾಗಿ ಟೀಕಿಸಿದ್ದಾರೆ.
ಆಡಳಿತಾರೂಢ ಸಿಪಿಐ(ಎಂ) ಮತ್ತು ಪ್ರತಿಪಕ್ಷ ಕಾಂಗ್ರೆಸ್ ಕೂಡ ಚಲನಚಿತ್ರವನ್ನು ಟೀಕಿಸಿದ್ದು, ಅಭಿವ್ಯಕ್ತಿ ಸ್ವಾತಂತ್ರ್ಯವು ಸಮಾಜದಲ್ಲಿ ವಿಷವನ್ನು ಉಗುಳುವ ಪರವಾನಗಿಯಲ್ಲ ಮತ್ತು ಚಲನಚಿತ್ರವು ರಾಜ್ಯದ ಕೋಮು ಸೌಹಾರ್ದತೆಯನ್ನು ಹಾಳುಮಾಡುವ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ. ಸುಳ್ಳು ಹೇಳಿಕೆಗಳ ಮೂಲಕ ಸಮಾಜದಲ್ಲಿ ಕೋಮು ವಿಭಜನೆಯನ್ನು ಸೃಷ್ಟಿಸುವ ಉದ್ದೇಶದಿಂದ ವಿವಾದಾತ್ಮಕ ಚಲನಚಿತ್ರವನ್ನು ಪ್ರದರ್ಶಿಸಲು ಅನುಮತಿ ನೀಡದಂತೆ ಕಾಂಗ್ರೆಸ್ ಪಕ್ಷವು ಸರ್ಕಾರಕ್ಕೆ ಒತ್ತಾಯಿಸಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications