ಮಮತಾ ಬ್ಯಾನರ್ಜಿಗೆ 'ದಿ ಕೇರಳ ಸ್ಟೋರಿ' ನಿರ್ಮಾಪಕ ಕೈ ಮುಗಿದು ಮನವಿ ಮಾಡಿದ್ದು ಹೀಗೆ
ಕೋಲ್ಕತ್ತಾ, ಮೇ.19: 'ದಿ ಕೇರಳ ಸ್ಟೋರಿ' ಸಿನಿಮಾದ ಮೇಲೆ ಪಶ್ಚಿಮ ಬಂಗಾಳ ಸರ್ಕಾರ ವಿಧಿಸಿದ್ದ ನಿಷೇಧಕ್ಕೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ. ಆದರೆ, ಈ ಸಿನಿಮಾ ಘಟನೆಗಳ ಕಾಲ್ಪನಿಕ ಕಥೆಯಾಗಿದೆ. ಕೇರಳದಲ್ಲಿ 32,000 ಮಹಿಳೆಯರು ಇಸ್ಲಾಂಗೆ ಮತಾಂತರಗೊಳ್ಳಲು ಮತ್ತು ಭಯೋತ್ಪಾದಕ ಗುಂಪು ಐಸಿಸ್‌ಗೆ ಸೇರಲು ಬಲವಂತಪಡಿಸಲಾಗಿದೆ ಎಂಬುದಕ್ಕೆ ಯಾವುದೇ ಡೇಟಾ ಇಲ್ಲ ಎಂದು ಚಿತ್ರದಲ್ಲಿ ಸೇರಿಸುವಂತೆ ನಿರ್ಮಾಪಕರಿಗೆ ಸೂಚಿಸಿದೆ.
ಮೇ 8 ರಂದು ಮುಖ್ಯಮಂತ್ರಿ ಬ್ಯಾನರ್ಜಿ ರಾಜ್ಯದಲ್ಲಿ ಚಿತ್ರಕ್ಕೆ ನಿಷೇಧ ಹೇರಿದ್ದರು. ಸುಪ್ರೀಂ ಕೋರ್ಟ್ ತೀರ್ಪಿನ ನಂತರ, 'ದಿ ಕೇರಳ ಸ್ಟೋರಿ' ನಿರ್ಮಾಪಕ ವಿಪುಲ್ ಶಾ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಚಲನಚಿತ್ರವನ್ನು ವೀಕ್ಷಿಸುವಂತೆ ಒತ್ತಾಯಿಸಿದ್ದಾರೆ. ಅವರ ಟೀಕೆಗಳು ಯಾವುದಾದರೂ ಇದ್ದರೆ ಅವುಗಳನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ.

" ಮಮತಾ ದೀದಿ ಅವರಿಗೆ ಈ ಚಿತ್ರವನ್ನು ನಮ್ಮೊಂದಿಗೆ ವೀಕ್ಷಿಸಲು ಮತ್ತು ಅಂತಹದ್ದೇನಾದರೂ ಕಂಡುಬಂದಲ್ಲಿ ನಮ್ಮೊಂದಿಗೆ ಚರ್ಚಿಸಲು ನಾನು ಮಮತಾ ದೀದಿ ಅವರಿಗೆ ಕೈಮುಗಿದಯ ಕೇಳಿಕೊಳ್ಳುತ್ತೇನೆ. ನಾವು ಅವರ ಎಲ್ಲಾ ಕೇಳಬಹುದುದಾದ ಟೀಕೆಗಳನ್ನು ಆಲಿಸಲು ಮತ್ತು ನಮ್ಮ ದೃಷ್ಟಿಕೋನವನ್ನು ಅವರ ಮುಂದೆ ಇರಿಸಲು ಬಯಸುತ್ತೇವೆ" ಎಂದು ನಿರ್ಮಾಪಕ ವಿಪುಲ್ ಶಾ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.
ದಿ ಕೇರಳ ಸ್ಟೋರಿಗೆ ನಿಷೇಧವನ್ನು ತೆರವುಗೊಳಿಸಿರುವ ಸುಪ್ರೀಂ ಕೋರ್ಟ್, ಚಿತ್ರಕ್ಕೆ ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ಪ್ರಮಾಣ ಪತ್ರ ನೀಡಿರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಪಶ್ಚಿಮ ಬಂಗಾಳ ಸರ್ಕಾರದ ಕರ್ತವ್ಯ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಗುರುವಾರ ಹೇಳಿದ್ದಾರೆ.
#WATCH | "With folded hands, I would like to tell Mamata Didi to watch this film with us and discuss with us if she finds anything as such. We would like to listen to all her valid criticisms and present our point of view...," says #TheKeralaStory producer Vipul Shah https://t.co/6QlsCHISfW pic.twitter.com/rSVmWo0dQa
— ANI (@ANI) May 18, 2023
ಇದಾದ ಬಳಿಕ ಪಶ್ಚಿಮ ಬಂಗಾಳದಲ್ಲಿ 'ದಿ ಕೇರಳ ಸ್ಟೋರಿ' ಸಿನಿಮಾ ಪ್ರದರ್ಶನದಿಂದ ಯಾವುದೇ ಸಮಸ್ಯೆ ಎದುರಾದರೆ, ಪ್ರತಿಪಕ್ಷಗಳು ಆಡಳಿತ ಪಕ್ಷವನ್ನು ದೂಷಿಸಬಾರದು ಎಂದು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹೇಳಿದೆ.
ಸುದೀಪ್ತೋ ಸೇನ್ ನಿರ್ದೇಶಿಸಿದ ಮತ್ತು ವಿಪುಲ್ ಶಾ ನಿರ್ಮಿಸಿದ 'ದಿ ಕೇರಳ ಸ್ಟೋರಿ' ಸಿನಿಮಾದಲ್ಲಿ ಅದಾ ಶರ್ಮಾ, ಯೋಗಿತಾ ಬಿಹಾನಿ, ಸೋನಿಯಾ ಬಲಾನಿ ಮತ್ತು ಸಿದ್ಧಿ ಇದ್ನಾನಿ ನಟಿಸಿದ್ದಾರೆ. ಈ ಚಿತ್ರ ಮೇ 5 ರಂದು ದೇಶಾದ್ಯಂತ ಬಿಡುಗಡೆಯಾಗಿದೆ. ಕೇರಳದಲ್ಲಿ ಚಿತ್ರ ಬಿಡುಗಡೆಯಾಗಿಲ್ಲ. ತಮಿಳುನಾಡಿನಲ್ಲಿ ಥಿಯೇಟರ್ ಮಾಲೀಕರೆ ಸಿನಿಮಾ ಪ್ರದರ್ಶಿಸದಿರಲು ನಿರ್ಧರಿಸಿದ್ದಾರೆ.

"ಸೆನ್ಸಾರ್ ಮಂಡಳಿಯಿಂದ ಅಂಗೀಕಾರವಾದ ನಂತರ ಯಾವುದೇ ರಾಜ್ಯವು ಚಲನಚಿತ್ರವನ್ನು ನಿಷೇಧಿಸಲು ಸಾಧ್ಯವಿಲ್ಲ, ಈ ನಿಷೇಧವು ಕಾನೂನುಬಾಹಿರವಾಗಿದೆ. ಚಲನಚಿತ್ರವನ್ನು ವೀಕ್ಷಿಸಲು ಎಲ್ಲರಿಗೂ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಮತ್ತೊಮ್ಮೆ ಸಾಬೀತುಪಡಿಸಿದೆ. ನೀವು ಸಿನಿಮಾವನ್ನು ಇಷ್ಟಪಡಬಹುದು ಅಥವಾ ಇಷ್ಟಪಡದಿರಬಹುದು ಆದರೆ ನೀವು ತಡೆಯಲು ಸಾಧ್ಯವಿಲ್ಲ' ಎಂದು ನಿರ್ದೇಶಕ ಸುದೀಪ್ತೋ ಸೇನ್ ಹೇಳಿದ್ದಾರೆ.
ಮೇ 8 ರಂದು ಮುಖ್ಯಮಂತ್ರಿ ಬ್ಯಾನರ್ಜಿ ಚಿತ್ರದ ಪ್ರದರ್ಶನವನ್ನು ತಕ್ಷಣವೇ ನಿಷೇಧಿಸುವಂತೆ ಆದೇಶಿಸಿದರು. ಈ ನಿಷೇಧವು ದ್ವೇಷ ಅಥವಾ ಹಿಂಸಾಚಾರದ ಯಾವುದೇ ಘಟನೆಗಳನ್ನು ತಡೆಗಟ್ಟುವ ಉದ್ದೇಶವನ್ನು ಹೊಂದಿದೆ ಎಂದು ವರದಿಯಾಗಿದೆ. ಹಿಂಸಾಚಾರವನ್ನು ಪ್ರಚೋದಿಸುವ ಯಾವುದೇ ಪ್ರಯತ್ನವನ್ನು ಸರ್ಕಾರ ಸಹಿಸುವುದಿಲ್ಲ. ಕೂಲಂಕಷವಾಗಿ ಪರಿಗಣಿಸಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದರು.
-
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral









Click it and Unblock the Notifications