ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಸದೀಯ ಸ್ಥಾಯಿ ಸಮಿತಿಗೆ 'ವೈದ್ಯಕೀಯ ಆಯೋಗ ಮಸೂದೆ': ಅನಂತ್ ಕುಮಾರ್

By Sachhidananda Acharya
|
Google Oneindia Kannada News

ನವದೆಹಲಿ, ಜನವರಿ 2: ವೈದ್ಯಕೀಯ ಆಯೋಗ ಮಸೂದೆ (ಎನ್ಎಂಸಿ) ಯನ್ನು ಸಂಸದೀಯ ಸ್ಥಾಯಿ ಸಮಿತಿಗೆ ಕಳುಹಿಸಲಾಗುವುದು ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.

ದೇಶದಾದ್ಯಂತ ವೈದ್ಯಕೀಯ ಆಯೋಗ ಮಸೂದೆಯನ್ನು ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ)ದ ನೇತೃತ್ವದಲ್ಲಿ ವೈದ್ಯರು ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಷ್ಟ್ರದಾದ್ಯಂತ ಒಪಿಡಿಗಳನ್ನು ಮುಚ್ಚಿ ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.

ಕೇಂದ್ರದ ವಿರುದ್ಧ ಸಿಡಿದೆದ್ದ ವೈದ್ಯರು: ದೇಶಾದ್ಯಂತ ಓಪಿಡಿ ಸೇವೆ ಸ್ಥಗಿತಕೇಂದ್ರದ ವಿರುದ್ಧ ಸಿಡಿದೆದ್ದ ವೈದ್ಯರು: ದೇಶಾದ್ಯಂತ ಓಪಿಡಿ ಸೇವೆ ಸ್ಥಗಿತ

ಇದೀಗ ವೈದ್ಯರ ಮುಷ್ಕರಕ್ಕೆ ತಲೆಬಾಗಿರುವ ಕೇಂದ್ರ ಸರಕಾರ ಮಸೂದೆಯನ್ನು ಸಂಸದೀಯ ಸ್ಥಾಯಿ ಸಮಿತಿಗೆ ನೀಡಲು ಒಪ್ಪಿಕೊಂಡಿದೆ. ಈ ಮಾಹಿತಿಯನ್ನು ಕೇಂದ್ರ ಸಚಿವ ಅನಂತ್ ಕುಮಾರ್ ಲೋಕಸಭೆಯಲ್ಲಿ ತಿಳಿಸಿದ್ದಾರೆ.

 Ananth Kumar

ಸೋಮವಾರ ಈ ಸಂಬಂಧ ಪ್ರತಿಕ್ರಿಯೆ ನೀಡಿದ್ದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, 'ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ'ದ ಬದಲು ಬೇರೆ ಸಂಸ್ಥೆ ಸ್ಥಾಪಿಸಲು ಈ ಮಸೂದೆ ಮಂಡಿಸಲಾಗುತ್ತಿದೆ. ಇದರಿಂದ ಹಲವು ಸಮಸ್ಯೆಗಳು ಎದುರಾಗಲಿವೆ ಎಂದಿದ್ದರು. ಈ ಮಸೂದೆಯನ್ನು ಸಂಸದೀಯ ಸ್ಥಾಯಿ ಸಮಿತಿಗೆ ವರ್ಗಾಯಿಸುವಂತೆ ಅವರು ಆಗ್ರಹಿಸಿದ್ದರು.

'ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ'ದ ಬದಲು ಪಾರದರ್ಶಕತೆಗಾಗಿ ಬೇರೆಯದೇ ಸಂಸ್ಥೆಯನ್ನು ತೆರೆಯಲು ಕೇಂದ್ರ ಸರಕಾರ ಕೆಲವು ದಿನಗಳ ಹಿಂದೆ ಲೋಕಸಭೆಯಲ್ಲಿ ಈ ಮಸೂದೆ ಮಂಡಿಸಿತ್ತು. ಈ ಮಸೂದೆ ಪ್ರಕಾರ ಆಯುರ್ವೇದ, ಯೋಗ ಮತ್ತು ನ್ಯಾಚುರೋಪತಿ, ಯುನಾನಿ, ಸಿದ್ಧ ಹಾಗೂ ಹೋಮಿಯೋಪತಿ ವೈದ್ಯರು ತಾವು ವೃತ್ತಿ ಆರಂಭಿಸುವ ಮೊದಲು 'ಬ್ರಿಡ್ಜ್ ಕೋರ್ಸ್' ಮಾಡಬೇಕಾಗಿದೆ.

ಧಾರವಾಡ: ವೈದ್ಯರ ಮುಷ್ಕರ, ನವಜಾತ ಶಿಶುವಿಗೆ ಚಿಕಿತ್ಸೆ ನಿರಾಕರಣೆಧಾರವಾಡ: ವೈದ್ಯರ ಮುಷ್ಕರ, ನವಜಾತ ಶಿಶುವಿಗೆ ಚಿಕಿತ್ಸೆ ನಿರಾಕರಣೆ

ಈ ಮಸೂದೆ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತರಲಿದೆ ಎಂದುಕೊಳ್ಳಲಾಗಿದೆ. ಈಗಾಗಲೇ ವೈದ್ಯಕೀಯ ಶಿಕ್ಷಣ ಕ್ಷೇತ್ರ ಭ್ರಷ್ಟಾಚಾರ ಮತ್ತು ಅನೈತಿಕ ಚಟುವಟಿಕೆಗಳ ತಾಣವಾಗಿದೆ ಎಂಬ ದೂರಿನ ನಡುವೆ ಈ ಮಸೂದೆಯನ್ನು ಮಂಡಿಸಲಾಗಿದೆ.

English summary
"The Medical Commission bill to be sent to standing committee,” said union minister Ananth Kumar in Lok Sabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X