ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಾಕಿಸ್ತಾನದಲ್ಲಿ ಬಿದ್ದ ಭಾರತದ ಕ್ಷಿಪಣಿ; ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ ರಕ್ಷಣಾ ಸಚಿವಾಲಯ

|
Google Oneindia Kannada News

ನವದೆಹಲಿ, ಮಾರ್ಚ್ 12: ಭಾರತೀಯ ಸೂಪರ್‍ಸಾನಿಕ್ ಕ್ಷಿಪಣಿ ಆಕಸ್ಮಿಕವಾಗಿ ಉಡಾವಣೆಯಾಗಿ, ಪಾಕಿಸ್ತಾನದ ವಾಯುನೆಲೆ ಸಮೀಪ ಬಿದ್ದಿತ್ತು. ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಭಾರತ ಸರ್ಕಾರ, ಮಾರ್ಚ್ 9ರಂದು ತಾಂತ್ರಿಕ ದೋಷದಿಂದಾಗಿ ಆಕಸ್ಮಿಕವಾಗಿ ಕ್ಷಿಪಣಿ ಉಡಾವಣೆ ಆಗಿತ್ತು. ಘಟನೆಯು ತೀವ್ರ ವಿಷಾದನೀಯವಾಗಿದ್ದರೂ, ಅಪಘಾತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದು ಸಮಾಧಾನದ ವಿಷಯವಾಗಿದೆ ಎಂದು ರಕ್ಷಣಾ ಸಚಿವಾಲಯ ಇಂದು ಹೇಳಿಕೆಯಲ್ಲಿ ತಿಳಿಸಿದೆ.

ಪಾಕಿಸ್ತಾನಕ್ಕೆ ಬಂದಿಳಿದ ಕ್ಷಿಪಣಿಯೊಂದು ಆಕಸ್ಮಿಕವಾಗಿ ಉಡಾಯಿಸಿರುವುದನ್ನು ಭಾರತ ಗಂಭೀರವಾಗಿ ಪರಿಗಣಿಸಿದ್ದು, ತಾಂತ್ರಿಕ ದೋಷದಿಂದ ನಿತ್ಯ ನಿರ್ವಹಣೆ ವೇಳೆ ಈ ಘಟನೆ ನಡೆದಿದೆ ಎಂದು ಹೇಳಿದೆ. ಘಟನೆಯ ಬಗ್ಗೆ ವಿವರವಾದ ತನಿಖೆಗಾಗಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

"ಮಾರ್ಚ್ 9 ರಂದು ಸಾಮಾನ್ಯ ನಿರ್ವಹಣೆಯ ಸಂದರ್ಭದಲ್ಲಿ, ತಾಂತ್ರಿಕ ದೋಷದಿಂದ ಆಕಸ್ಮಿಕವಾಗಿ ಕ್ಷಿಪಣಿಯ ಉಡಾವಣೆಗೆ ಕಾರಣವಾಯಿತು. ಭಾರತ ಸರ್ಕಾರವು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ನ್ಯಾಯಾಲಯದ ವಿಚಾರಣೆಗೆ ಆದೇಶಿಸಿದೆ. ಕ್ಷಿಪಣಿ ಪಾಕಿಸ್ತಾನದ ಒಂದು ಪ್ರದೇಶದಲ್ಲಿ ಬಂದಿಳಿದಿದೆ. ಈ ಘಟನೆಯು ತೀವ್ರವಾಗಿ ವಿಷಾದನೀಯವಾಗಿದ್ದರೂ, ಅಪಘಾತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದು ಸಮಾಧಾನದ ವಿಷಯವಾಗಿದೆ," ಎಂದು ರಕ್ಷಣಾ ಸಚಿವಾಲಯ ಹೇಳಿದೆ.

The Ministry of Defense ordered a High-level Investigation on An Indian Missile That Fell in Pakistan

ಘಟನೆಯ ಎಲ್ಲಾ ಸಂಭಾವ್ಯ ಅಂಶಗಳನ್ನು ತನಿಖಾ ತಂಡವು ತನಿಖೆ ಮಾಡುತ್ತದೆ ಎಂದು ಬೆಳವಣಿಗೆಯ ಬಗ್ಗೆ ತಿಳಿದಿರುವ ಅಧಿಕಾರಿಗಳು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಪಾಕಿಸ್ತಾನವು ಇಂದು ಇಸ್ಲಾಮಾಬಾದ್‌ನಲ್ಲಿ ತನ್ನ ವಿದೇಶಾಂಗ ಕಚೇರಿಗೆ ಭಾರತದ ರಾಯಭಾರಿ ಅಧಿಕಾರಿಗಳನ್ನು ಕರೆಸಿ, ಭಾರತೀಯ ಮೂಲದ "ಸೂಪರ್-ಸಾನಿಕ್ ಫ್ಲೈಯಿಂಗ್ ಆಬ್ಜೆಕ್ಟ್' ಮೂಲಕ ತನ್ನ ವಾಯುಪ್ರದೇಶವನ್ನು ಅಪ್ರಚೋದಿತವಾಗಿ ಉಲ್ಲಂಘಿಸಿದ ಆರೋಪದ ಬಗ್ಗೆ ತನ್ನ ತೀವ್ರ ಪ್ರತಿಭಟನೆಯನ್ನು ವ್ಯಕ್ತಪಡಿಸಿದೆ. ಘಟನೆಯ ಬಗ್ಗೆ ಸಂಪೂರ್ಣ ಮತ್ತು ಪಾರದರ್ಶಕ ತನಿಖೆಗೆ ಕೋರಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ಹಿಂದಿನ ದಿನ ವರದಿ ಮಾಡಿದೆ.

ಮಾರ್ಚ್ 9ರಂದು ಸಂಜೆ 6:43ಕ್ಕೆ (ಸ್ಥಳೀಯ ಕಾಲಮಾನ) ಭಾರತದ ಸೂರತ್‌ಗಢದಿಂದ ಪಾಕಿಸ್ತಾನಕ್ಕೆ ಪ್ರವೇಶಿಸಿದ ಭಾರತೀಯ ಮೂಲದ "ಸೂಪರ್-ಸಾನಿಕ್ ಫ್ಲೈಯಿಂಗ್ ಆಬ್ಜೆಕ್ಟ್" ತನ್ನ ವಾಯುಪ್ರದೇಶವನ್ನು ಉಲ್ಲಂಘಿಸಿದೆ ಎಂದು ವಿದೇಶಾಂಗ ಕಚೇರಿಗೆ ಕರೆಸಲಾದ ಭಾರತೀಯ ರಾಜತಾಂತ್ರಿಕರಿಗೆ ತಿಳಿಸಲಾಗಿದೆ.

ಭಾರತೀಯ ಸೂಪರ್‍ಸಾನಿಕ್ ಕ್ಷಿಪಣಿಯು ಸಿರ್ಸಾದಿಂದ ಉಡಾವಣೆಗೊಂಡು ಪಾಕಿಸ್ತಾನದ ಭೂಪ್ರದೇಶದ ಸುಮಾರು 124 ಕಿ.ಮೀ. ದೂರದಲ್ಲಿರುವ, ಖನೇವಾಲ್ ಜಿಲ್ಲೆಯ ಮಿಯಾನ್ ಚನ್ನು ಬಳಿ ಇಳಿಯಿತು ಎಂದು ಪಾಕಿಸ್ತಾನದ ಮಿಲಿಟರಿ ವಕ್ತಾರ ಮೇಜರ್ ಜನರಲ್ ಬಾಬರ್ ಇಫ್ತಿಕರ್ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

ಕ್ಷಿಪಣಿಯು 40,000 ಅಡಿ ಎತ್ತರದಲ್ಲಿ ಪ್ರಯಾಣಿಸುತ್ತಿತ್ತು, ಭಾರತೀಯ ಮತ್ತು ಪಾಕಿಸ್ತಾನ ವಾಯುಪ್ರದೇಶದಲ್ಲಿ ಪ್ರಯಾಣಿಕರ ವಿಮಾನಗಳು ಮತ್ತು ನೆಲದ ಮೇಲಿನ ನಾಗರಿಕರ ಆಸ್ತಿಗೆ ಅಪಾಯ ತರುತ್ತಿತ್ತು ಎಂದು ಹೇಳಿದ್ದಾರೆ.

Recommended Video

Pakistanದಲ್ಲಿ ಬಿದ್ದ ಭಾರತದ ಕ್ಷಿಪಣಿ , ಏನಿದು ಎಡವಟ್ಟು | Oneindia Kannada

English summary
India is seriously considering the accidental fired of a missile that landed in Pakistan, A high-level investigation has been ordered for a detailed investigation into the incident, the defense ministry said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X