ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಸ್ತಿ ಮಾಲೀಕರ ಗಮನಕ್ಕೆ: ಬರಲಿದೆ ಹೊಸ ಮಾದರಿಯ ಗುರುತಿನ ಸಂಖ್ಯೆ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 19: ಸ್ಥಿರಾಸ್ತಿಗೂ ಇನ್ನುಮುಂದೆ ಆಧಾರ್ ಮಾದರಿಯ ವಿಶಿಷ್ಟ ಗುರುತಿನ ಸಂಖ್ಯೆ ಬರಲಿದೆ.

ಭೂ ವ್ಯವಹಾರ ಪ್ರಕ್ರಿಯೆಯನ್ನು ಸರಳ ಹಾಗೂ ಪಾರದರ್ಶಕಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಜಮೀನಿನ ಎಲ್ಲಾ ಮಾಹಿತಿಯನ್ನೊಳಗೊಂಡ ಆಧಾರ್ ರೀತಿಯ ವಿಶಿಷ್ಟ ಗುರುತಿನ ಸಂಖ್ಯೆಯೊಂದಿಗೆ ಆಧಾರ್ ಹಾಗೂ ಕಂದಾಯ ನ್ಯಾಯಾಲಯ ವ್ಯವಸ್ಥೆ ಸಂಖ್ಯೆಯನ್ನು ಜೋಡಣೆಗೊಳಿಸಲಾಗುತ್ತದೆ.

ಭೂ ಮಾಲೀಕ, ವಿಳಾಸ, ವಿಸ್ತೀರ್ಣ ಸೇರಿ ಜಮೀನಿನ ಎಲ್ಲಾ ಮಾಹಿತಿಗಳು ಬೆರಳ ತುದಿಯಲ್ಲೇ ಲಭ್ಯವಾಗಲಿದೆ. ಈ ಬಗ್ಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆ ಕೆಲಸ ಆರಂಭಿಸಿದೆ.

ದೇಶದೆಲ್ಲೆಡೆ ಕಳೆದ 20 ವರ್ಷಗಳಿಂದ ಭೂ ವಿವಾದ ಸಂಬಂಧ ಎರಡನೇ ಮೂರರಷ್ಟು ಪ್ರಕರಣಗಳು ನ್ಯಾಯಾಲಯದಲ್ಲಿ ಕೊಳೆಯುತ್ತಿದ್ದು, ಈ ಯೋಜನೆಯಿಂದ ಅವುಗಳ ಶೀಘ್ರ ವಿಲೇವಾರಿ ಕೂಡ ನಡೆಯಲಿದೆ. ಸರ್ಕಾರ ಈಗಾಗಲೇ ಡಿಜಿಟಲ್ ಇಂಡಿಯಾ ಯೋಜನೆಯಡಿ ಭೂ ದಾಖಲೆ ಡಿಜಿಟಲೀಕರಣ ಪ್ರಕ್ರಿಯೆ ಆರಂಭಿಸಿದೆ.

ಭೂದಾಖಲೆ ಸಂಪೂರ್ಣವಾಗಿ ಡಿಜಿಟಲೀಕರಣ

ಭೂದಾಖಲೆ ಸಂಪೂರ್ಣವಾಗಿ ಡಿಜಿಟಲೀಕರಣ

ಸರ್ಕಾರದ ಈ ಯೋಜನೆಯಿಂದ ಭೂ ದಾಖಲೆಗಳು ಸಂಪೂರ್ಣವಾಗಿ ಡಿಜಿಟಲೀಕರಣಗೊಳ್ಳುವುದರಿಂದ ಭೂಮಾಲಿಕರ ಮಾಹಿತಿ ಪತ್ತೆ ಹಚ್ಚುವುದು ಸುಲಭವಾಗಲಿದೆ.

ಜೊತೆಗೆ ಭೂವ್ಯವಹಾರ , ಆಸ್ತಿ ತೆರಿಗೆ ಸಂಗ್ರಹ, ಸಾರ್ವಜನಿಕ ಯೋಜನೆಗಳಿಗೆ ಭೂಸ್ವಾಧೀನ, ಆಸ್ತಿ ತೆರಿಗೆ ಸಮಸ್ಯೆಗಳ ಪರಿಹಾರ ಹಾಗೂ ಪ್ರಾಕೃತಿಕ ವಿಕೋಪದ ವೇಳೆ ಪರಿಹಾರ ಹಂಚಿಕೆಯೂ ಸರಳವಾಗಲಿದೆ ಎನ್ನುವುದು ಅಧಿಕಾರಿಗಳ ಅಭಿಪ್ರಾಯ.

ಬೆರಳ ತುದಿಯಲ್ಲಿ ಭೂ ದಾಖಲೆ

ಬೆರಳ ತುದಿಯಲ್ಲಿ ಭೂ ದಾಖಲೆ

ಬೆರಳ ತುದಿಯಲ್ಲಿ ಭೂದಾಖಲೆ ಲಭ್ಯವಾಗಲಿದ್ದು, ಬೇನಾಮಿ ಆಸ್ತಿಗೆ ಬ್ರೇಕ್ ಬೀಳಲಿದೆ. ರೈತರಿಗೆ ಸುಲಭ ಸಾಲ ಸೌಲಭ್ಯ, ಭೂ ತಕರಾರು ಶೀಘ್ರ ಇತ್ಯರ್ಥ ಸಾಧ್ಯವಾಗಲಿದೆ. ವಿಕೋಪ ಸಂದರ್ಭ ಪರಿಹಾರ ಹಂಚಿಕೆಯೂ ಸುಲಭವಾಗಲಿದೆ.

ವಿಶಿಷ್ಟ ಸಂಖ್ಯೆ ಮೂಲಕ ಜಮೀನಿನ ಹಿಂದಿನ ಮಾಲಿಕರ ಮಾಹಿತಿ

ವಿಶಿಷ್ಟ ಸಂಖ್ಯೆ ಮೂಲಕ ಜಮೀನಿನ ಹಿಂದಿನ ಮಾಲಿಕರ ಮಾಹಿತಿ

ಈ ವಿಶಿಷ್ಟ ಸಂಖ್ಯೆ ಮೂಲಕ ಜಮೀನಿನ ಹಿಂದಿನ ಮಾಲಿಕರ ಕುರಿತು ಕೂಡ ಮಾಹಿತಿ ಲಭ್ಯವಾಗಲಿದೆ. ಭೂವ್ಯವಹಾರದಲ್ಲಿ ಪಾರದರ್ಶಕತೆ ಇರಲಿದೆ. ಮಾಲಿಕತ್ವ ವಿವಾದ ಹೂಡಿಕೆಗೆ ಹಿಂಜರಿಯುವ ಸಮಸ್ಯೆ ಕೂಡ ಇದರಿಂದ ಪರಿಹಾರವಾಗಲಿದೆ. ಹೆಚ್ಚಿನ ವಿದೇಶಿ ಬಂಡವಾಳ ಆಕರ್ಷಿಸಲಿದೆ.

ಬೇನಾಮಿ ಆಸ್ತಿಗಳ ಬಗ್ಗೆ ಸರ್ಕಾರಕ್ಕೆ ಸುಲಭ ಮಾಹಿತಿ

ಬೇನಾಮಿ ಆಸ್ತಿಗಳ ಬಗ್ಗೆ ಸರ್ಕಾರಕ್ಕೆ ಸುಲಭ ಮಾಹಿತಿ

ಬೇನಾಮಿ ಆಸ್ತಿಗಳ ಬಗ್ಗೆಯೂ ಸರ್ಕಾರಕ್ಕೆ ಸುಲಭವಾಗಿ ಮಾಹಿತಿ ದೊರೆಯಲಿದೆ. ಜೊತೆಗೆ ಜಮೀನು ಅಡವಿಟ್ಟು ಸಾಲ ಪಡೆಯಲು ರೈತರ ಬವಣೆಯನ್ನು ಇದು ಕಡಿಮೆ ಮಾಡಲಿದೆ ಎನ್ನವುದು ತಜ್ಞರ ಅಭಿಪ್ರಾಯ.

English summary
The Aadhaar-like identification number is coming soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X