ಬಿಎಸ್‌ಪಿಯ ಮಾಯಾವತಿ ಕಾಂಗ್ರೆಸ್‌ಗೆ 'ಕೈ' ಕೊಟ್ಟಿದ್ದೇಕೆ?

ನವದೆಹಲಿ, ಅಕ್ಟೋಬರ್ 04 : ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಿಎಸ್‌ಪಿ ಸ್ಪಷ್ಟಪಡಿಸಿದೆ. 2019ರ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗ ಪಕ್ಷದ ನಿರ್ಧಾರ ಅಚ್ಚರಿಗೆ ಕಾರಣವಾಗಿದೆ.

ಬಿಎಸ್‌ಪಿ ವರಿಷ್ಠೆ ಮಾಯಾವತಿ ಅವರು ಕಾಂಗ್ರೆಸ್ ನಾಯಕರ ವಿರುದ್ಧ ಕಟುವಾದ ಟೀಕೆ ಮಾಡಿದರು. ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದರು.

ಸೀಟು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಎಸ್‌ಪಿ ನಡುವೆ ಹೊಂದಾಣಿಕೆ ಆಗಿಲ್ಲ. ಆದ್ದರಿಂದ, ಮೈತ್ರಿ ಮಾಡಿಕೊಳ್ಳುವುದಿಲ್ಲ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಚುನಾವಣೆಯನ್ನು ಬಿಎಸ್‌ಪಿ ಏಕಾಂಗಿಯಾಗಿ ಎದುರಿಸಲಿದೆ.

The real reason why Mayawati showed Congress the hand

ರಾಜಸ್ಥಾನದ 200 ಸೀಟುಗಳು ಪೈಕಿ ಕಾಂಗ್ರೆಸ್ ಬಿಎಸ್‌ಪಿಗೆ 9 ಸೀಟುಗಳನ್ನು ಮಾತ್ರ ನೀಡಿದೆ. ಮಧ್ಯಪ್ರದೇಶದ 231 ಸೀಟುಗಳ ಪೈಕಿ 15 ಸೀಟುಗಳನ್ನು ನೀಡುವುದಾಗಿ ಹೇಳಿದೆ. ಛತ್ತೀಸ್‌ಗಢದ 90 ಸೀಟುಗಳ ಪೈಕಿ 5 ಸೀಟುಗಳು ಬಿಎಸ್‌ಪಿಗೆ ನೀಡಲಾಗುತ್ತದೆ.

ಮಧ್ಯಪ್ರದೇಶ ಮತ್ತು ರಾಜಸ್ಥಾನದ ಕೆಲವು ಪ್ರದೇಶದಲ್ಲಿ ಬಿಎಸ್‌ಪಿ ಹೆಚ್ಚಿನ ಪ್ರಭಾವವನ್ನು ಹೊಂದಿದೆ. 2013ರ ಚುನಾವಣೆಯಲ್ಲಿ ಬಿಎಸ್‌ಪಿ ಮಧ್ಯಪ್ರದೇಶದಲ್ಲಿ 6.29 ಮತಗಳನ್ನು ಪಡೆದಿತ್ತು. ರಾಜಸ್ಥಾನದಲ್ಲಿ 3.4 ಶೇ ಮತಗಳನ್ನು ಪಡೆದಿತ್ತು.

ಆದರೆ, ರಾಜಕೀಯ ನಾಟಕ ಇನ್ನೂ ಅಂತಿಮಗೊಂಡಿಲ್ಲ. ಬಿಎಸ್‌ಪಿ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೂ ಪ್ರಕಟಿಸಿಲ್ಲ. ಬಿಎಸ್‌ಪಿ ಮತ್ತು ಕಾಂಗ್ರೆಸ್‌ ಮೈತ್ರಿ ಮಾಡಿಕೊಳ್ಳಲಿವೆಯೇ? ಕಾದು ನೋಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+