ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಒಳ್ಳೆ ಸುದ್ದಿ: ಭಾರತದಲ್ಲಿ ಕೊವಿಡ್ 19ನಿಂದ ಗುಣಮುಖರಾದವರ ಸಂಖ್ಯೆ ಏರಿಕೆ

|
Google Oneindia Kannada News

ನವದೆಹಲಿ, ಜೂನ್ 25: ಕೊರೊನಾ ಸೋಂಕಿನ ಭಯದಲ್ಲಿರುವ ಮಂದಿಗೆ ಶುಭ ಸುದ್ದಿ ಇದೆ. ಭಾರತದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾದವರ ಪ್ರಮಾಣ ಶೇ.57.43ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 13,012 ಮಂದಿ ಗುಣಮುಖರಾಗಿದ್ದಾರೆ.

Recommended Video

ಜನಸಾಮಾನ್ಯರಿಗೆ ಒಂದು ನ್ಯಾಯ, ರಾಜಕಾರಣಿಗಳಿಗೊಂದು ನ್ಯಾಯ | Oneindia Kannada

ಇದುವರೆಗೆ 2,71,696 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಭಾರತದಲ್ಲಿ ಒಂದೇ ದಿನ 16,922 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಬ್ರೇಕಿಂಗ್: ಭಾರತದಲ್ಲಿ ಒಂದೇ ದಿನ 16,922 ಮಂದಿಗೆ ಕೊರೊನಾವೈರಸ್!ಬ್ರೇಕಿಂಗ್: ಭಾರತದಲ್ಲಿ ಒಂದೇ ದಿನ 16,922 ಮಂದಿಗೆ ಕೊರೊನಾವೈರಸ್!

ಒಂದೇ ದಿನ ದೇಶದಲ್ಲಿ ಮಹಾಮಾರಿಗೆ 418 ಮಂದಿ ಬಲಿಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆಯು ಬರೋಬ್ಬರಿ 4,73,105ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ದೇಶದಲ್ಲಿ ಇದುವರೆಗೂ 14,894 ಮಂದಿ ಬಲಿಯಾಗಿದ್ದಾರೆ. ಇನ್ನು, 2,71,697 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. 1,86,514 ಮಂದಿ ಸೋಂಕಿತರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.

The Recovery Rate Of COVID 19 Patients Increased To 57.43 Percent

ದೇಶದಲ್ಲಿ ಕೊರೊನಾವೈರಸ್ ಸೋಂಕು ಪತ್ತೆಗಾಗಿ ರಕ್ತ ಹಾಗೂ ಗಂಟಲು ದ್ರವ್ಯದ ಮಾದರಿಯನ್ನು ತಪಾಸಣೆ ನಡೆಸಲಾಗುತ್ತಿದೆ. ಈ ಪ್ರಮಾಣದಲ್ಲೂ ಭಾರಿ ಏರಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ ಐಸಿಎಂಆರ್ ನಲ್ಲಿ 2,07,871 ಜನರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಜೂನ್.24ರವರೆಗೂ ದೇಶದಲ್ಲಿ ಬರೋಬ್ಬರಿ 75,60,782 ಜನರ ರಕ್ತ ಹಾಗೂ ಗಂಟಲು ದ್ರವ್ಯದ ಮಾದರಿ ತಪಾಸಣೆ ನಡೆಸಲಾಗಿದೆ.

ಜಗತ್ತಿನಾದ್ಯಂತ ದಿನದಿಂದ ದಿನಕ್ಕೆ ಕೊವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇದುವರೆಗೆ ಮಹಾಮಾರಿಗೆ ಬಲಿಯಾದವರ ಸಂಖ್ಯೆ 4.8 ಲಕ್ಷಕ್ಕೇರಿದೆ. ಅಮೆರಿಕದ ಜಾನ್ ಹಾಪ್ ಕಿನ್ಸ್ ವಿಶ್ವವಿದ್ಯಾಲಯದ ಕೊರೊನಾ ಸಂಶೋಧನಾ ಕೇಂದ್ರ ವರದಿ ಮಾಡಿರುವಂತೆ ಈ ವರೆಗೂ ಜಗತ್ತಿನಾದ್ಯಂತ ಸೋಂಕಿತರ ಸಂಖ್ಯೆ 95, 27,123ಕ್ಕೆ ಏರಿಕೆಯಾಗಿದೆ.

ರಷ್ಯಾದಲ್ಲಿ ಸೋಂಕಿತರ ಸಂಖ್ಯೆ 606,881ಕ್ಕೆ ಏರಿದ್ದು, ಸಾವಿನ ಸಂಖ್ಯೆ 8,513 ಆಗಿದೆ. ಇಂಗ್ಲೆಂಡ್‌ನಲ್ಲಿ 43,081, ಇಟಲಿಯಲ್ಲಿ 34,644 ಮತ್ತು ಫ್ರಾನ್ಸ್‌ನಲ್ಲಿ 29,731ಜನರು ಸೋಂಕಿನಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.

ಅತಿಹೆಚ್ಚು (2,462,554) ಜನರಲ್ಲಿ ಸೋಂಕು ಕಾಣಿಸಿಕೊಂಡಿರುವ ಅಮೆರಿಕದಲ್ಲಿ ಈವರೆಗೆ ಒಟ್ಟು 124,281 ಮಂದಿ ಮೃತಪಟ್ಟಿದ್ದಾರೆ.1,040,605 ಮಂದಿ ಗುಣಮುಖರಾಗಿದ್ದಾರೆ. ಬ್ರೆಜಿಲ್‌ನಲ್ಲಿ 1,192,474ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಈ ಪೈಕಿ 53,874 ಸೋಂಕಿತರು ಮೃತಪಟ್ಟು, 649,908 ಮಂದಿ ಗುಣಮುಖರಾಗಿದ್ದಾರೆ.

English summary
Health Ministry Given information that During the last 24 hours, a total of 13,012 COVID19 patients have been cured. So far, a total of 2,71,696 patients have been cured of COVID19. The recovery rate is 57.43 percent.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X