ಅಣ್ಣಮಲೈ ವಿರುದ್ಧ ಪ್ರಕರಣ ದಾಖಲಿಸಿದ ತಮಿಳುನಾಡು ಸರ್ಕಾರ
ಚೆನ್ನೈ, ಮೇ 10: ತಮಿಳುನಾಡು ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುವ ಡಿಎಂಕೆ ಫೈಲ್ಸ್ ಬಿಡುಗಡೆ ಮಾಡಿದ್ದಕ್ಕಾಗಿ ರಾಜ್ಯ ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ.
ಚೆನ್ನೈ ನಗರದ ಪಬ್ಲಿಕ್ ಪ್ರಾಸಿಕ್ಯೂಟರ್ ಅವರು ಅಣ್ಣಾಮಲೈ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಮಾನಹಾನಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 2011ರಲ್ಲಿ ಚೆನ್ನೈ ಮೆಟ್ರೋ ಒಪ್ಪಂದವನ್ನು ಸರಿಪಡಿಸಲು ಎಂಕೆ ಸ್ಟಾಲಿನ್‌ಗೆ ₹ 200 ಕೋಟಿ ನೀಡಲಾಗಿದೆ ಎಂದು ಅಣ್ಣಮಲೈ ಇತ್ತೀಚೆಗೆ ಆರೋಪಿಸಿದ್ದರು.

ಎಂಕೆ ಸ್ಟಾಲಿನ್ ಅವರ ಪಕ್ಷವಾದ ಡಿಎಂಕೆ ನಾಯಕರು ₹ 1.34 ಲಕ್ಷ ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಅದನ್ನು ಭ್ರಷ್ಟಾಚಾರದ ಮೂಲಕ ಗಳಿಸಿದ್ದಾರೆ ಎಂದು ಅಣ್ಣಾಮಲೈ ಹೇಳಿದ್ದಾರೆ.
ಡಿಎಂಕೆ ವಕ್ತಾರ ಟಿಕೆಎಸ್ ಇಳಂಗೋವನ್, " ಅಣ್ಣಾಮಲೈ ಅವರನ್ನು ಶಿಕ್ಷಿಸುವುದೇ ಉತ್ತಮ ಕ್ರಮವಾಗಿದೆ. ರಾಹುಲ್ ಗಾಂಧಿ ಹೇಳಿದ್ದು ಏನೂ ಅಲ್ಲ, ಆದರೆ ಅವರನ್ನು ಅನರ್ಹಗೊಳಿಸಲಾಗಿದೆ. ಅಣ್ಣಾಮಲೈ ವಿರುದ್ಧ ಮೊಕದ್ದಮೆ ಹೂಡಲು ಇದು ಕಾರಣವಾಗಿದೆ ಎಂದು ಹೇಳಿದರು. ಈ ಹಿಂದೆ ಡಿಎಂಕೆಯ ಲೀಗಲ್ ನೋಟಿಸ್ ನಂತರ ಕ್ಷಮೆ ಯಾಚಿಸಲು ನಿರಾಕರಿಸಿದ ಅಣ್ಣಾಮಲೈ ಅವರು ನ್ಯಾಯಾಲಯದಲ್ಲಿ ಪ್ರಕರಣವನ್ನು ಎದುರಿಸಲಿದ್ದಾರೆ ಎಂದು ಬಿಜೆಪಿ ಹೇಳಿದೆ.
ತಮಿಳುನಾಡು ಬಿಜೆಪಿ ಮುಖ್ಯಸ್ಥರು ಈ ವರ್ಷ ಏಪ್ರಿಲ್ 14 ರಂದು ₹ 1.34 ಲಕ್ಷ ಕೋಟಿ ಮೌಲ್ಯದ ಆಸ್ತಿಯ ದೀರ್ಘ ಪಟ್ಟಿಯನ್ನು ಸಾರ್ವಜನಿಕಗೊಳಿಸಿದ್ದರು. ಇದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಮತ್ತು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಸೇರಿದಂತೆ ಪ್ರಮುಖ ಡಿಎಂಕೆ ನಾಯಕರು ಮತ್ತು ದುರೈ ಮುರುಗನ್ ಸೇರಿದಂತೆ ಇತರ ಮಂತ್ರಿಗಳ ಒಡೆತನದಲ್ಲಿದೆ ಎಂದು ಅವರು ಹೇಳಿದ್ದಾರೆ.
ಅಣ್ಣಾಮಲೈ ಅವರ ಆರೋಪಗಳನ್ನು ಡಿಎಂಕೆ ಇದೊಂದು ಜೋಕ್ ಎಂದು ಕರೆದಿತ್ತು. ನಾವು ಲಂಚ ಪಡೆದ ಒಂದೇ ಒಂದು ಆರೋಪವೂ ಇಲ್ಲ. ಅವರು ಪಟ್ಟಿ ಮಾಡಿರುವ ಎಲ್ಲಾ ಅಭ್ಯರ್ಥಿಗಳು ತಮ್ಮ ಅಫಿಡವಿಟ್‌ಗಳಲ್ಲಿ ತಮ್ಮ ಆಸ್ತಿ ವಿವರಗಳನ್ನು ನೀಡಿದ್ದಾರೆ. ಒಂದು ವೇಳೆ ಉಲ್ಲಂಘನೆಯಾಗಿದ್ದರೆ, ಯಾವುದೇ ವ್ಯಕ್ತಿ ಚುನಾವಣೆಗೆ ಸವಾಲು ಹಾಕಬಹುದು ಎಂದು ಡಿಎಂಕೆ ಸಂಸದ ಆರ್‌ಎಸ್ ಭಾರತಿ ಹೇಳಿದ್ದಾರೆ.
ಎಪ್ರಿಲ್ 20 ರಂದು, ಕೆ ಅಣ್ಣಾಮಲೈ ಅವರು ಸಾಮಾಜಿಕ ಮಾಧ್ಯಮದಲ್ಲಿ ಆಡಿಯೋ ಕ್ಲಿಪ್ ಅನ್ನು ಬಿಡುಗಡೆ ಮಾಡಿದ್ದರು. ರಾಜ್ಯದ ಹಣಕಾಸು ಸಚಿವ ಪಳನಿವೇಲ್ ತ್ಯಾಗ ರಾಜನ್ ಅವರು ಯಾರೊಂದಿಗಾದರೂ ಸಂಭಾಷಣೆ ನಡೆಸಿದಾಗ ಮುಖ್ಯಮಂತ್ರಿ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಮತ್ತು ಅಳಿಯ ವಿ ಶಬರೇಶನ್ ಅವರು ₹ 30,000 ಕೋಟಿ ಆಸ್ತಿಯನ್ನು ಸಂಗ್ರಹಿಸಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ.
ಏಪ್ರಿಲ್ 25 ರಂದು, ಬಿಜೆಪಿ ನಾಯಕ ಪಳನಿವೇಲ್ ತ್ಯಾಗ ರಾಜನ್ ಅವರ ಧ್ವನಿಯನ್ನು ಒಳಗೊಂಡಿರುವ ಆಡಿಯೊ ಕ್ಲಿಪ್ ಅನ್ನು ಬಿಡುಗಡೆ ಮಾಡಿದರು. ಕ್ಲಿಪ್‌ನಲ್ಲಿರುವ ವ್ಯಕ್ತಿ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಆರೋಪವನ್ನು ಕೇಳಿ ಬಂದಿತ್ತು.
ಇದಾದ ಎರಡು ದಿನಗಳ ನಂತರ, ಪಳನಿವೇಲ್ ತ್ಯಾಗ ರಾಜನ್ ಹೇಳಿಕೆಯನ್ನು ನಿರಾಕರಿಸಿದರು ಮತ್ತು ಆಡಿಯೊ ಕ್ಲಿಪ್ ಅನ್ನು "ದುರುದ್ದೇಶಪೂರಿತ, ಕಪೋಲಕಲ್ಪಿತ" ಎಂದು ತಳ್ಳಿಹಾಕಿದರು. ಡಿಎಂಕೆ ಕಾರ್ಯಕರ್ತರ ನಡುವೆ ಒಡಕು ಮೂಡಿಸಲು ಮತ್ತು ಅವರ ಮತ್ತು ಮುಖ್ಯಮಂತ್ರಿ ನಡುವೆ ಬಿರುಕು ಮೂಡಿಸಲು ಬಿಡುಗಡೆ ಮಾಡಿದ್ದಾರೆ ಎಂದು ಆರೋಪಿಸಿದರು..












Click it and Unblock the Notifications