FASTag Toll Collection : 2022ರಲ್ಲಿ ಫಾಸ್ಟ್ಯಾಗ್ ಮೂಲಕ 50,855 ಕೋಟಿ ರೂ ಟೋಲ್ ಸಂಗ್ರಹ !
2022ರಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಯ ಟೋಲ್‌ಗಳಲ್ಲಿ ಫಾಸ್ಟ್ಯಾಗ್ ಮೂಲಕ 50.855 ಕೋಟಿ ರೂಪಾಯಿ ಶುಲ್ಕವನ್ನು ಸಂಗ್ರಹಿಸಲಾಗಿದೆ.
ನವದೆಹಲಿ,ಜನವರಿ.24: ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಯ ಟೋಲ್‌ಗಳಲ್ಲಿ ಫಾಸ್ಟ್ಯಾಗ್ ಮೂಲಕ 2022ರಲ್ಲಿ ಸುಮಾರು 50.855 ಕೋಟಿ ರೂಪಾಯಿ ಶುಲ್ಕವನ್ನು ಸಂಗ್ರಹಿಸಲಾಗಿದೆ ಎಂಬ ಮಾಹಿತಿಯನ್ನು ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಪ್ರಕಟನೆಯಲ್ಲಿ ತಿಳಿಸಿದೆ.
ಕಳೆದ ವರ್ಷ ಅಂದರೇ 2021 ರಲ್ಲಿ ಸುಮಾರು ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಯ ಟೋಲ್‌ಗಳಲ್ಲಿ ಫಾಸ್ಟ್ಯಾಗ್ ಮೂಲಕ ಸುಮಾರು 34,778 ಕೋಟಿ ರೂಪಾಯಿಗಳನ್ನು ಸಂಗ್ರಹಿಸಲಾಗಿತ್ತು. ಈ ಬಾರಿ 2022ರಲ್ಲಿ ಸುಮಾರು 50.855 ಕೋಟಿ ರೂಪಾಯಿ ಶುಲ್ಕ ಸಂಗ್ರಹಿಸುವ ಮೂಲಕ 46%ಕ್ಕೆ ಏರಿಕೆಯಾಗಿದೆ ಎಂಬ ಮಾಹಿತಿಯನ್ನು NAHI ತಿಳಿಸಿದೆ.
ಕಳೆದ ಡಿಸೆಂಬರ್ 2022 ರಲ್ಲಿ ರಾಷ್ಟ್ರೀಯ ಹೆದ್ದಾರಿಯ ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್ಯಾಗ್ ಮೂಲಕ 134.44 ಕೋಟಿ ರೂಪಾಯಿ ಪ್ರಾಧಿಕಾರದ ಖಜಾನೆ ಸೇರಿಕೊಂಡಿತ್ತು. ಈ ಪೈಕಿ ಕಳೆದ ಡಿಸೆಂಬರ್ 24 ರಂದು ಸುಮಾರು 144.19 ಕೋಟಿ ರೂ ಒಂದೇ ದಿನದಲ್ಲಿ ಸಂಗ್ರಹವಾಗಿತ್ತು ಎಂಬ ಮಾಹಿತಿಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ತಿಳಿಸಿದೆ.

ಟೋಲ್‌ಗಳಲ್ಲಿ ಅತಿ ಸುಲಭ ಮತ್ತು ತ್ವರಿತವಾಗಿ ಶುಲ್ಕ ಪಾವತಿಸಲು ಫಾಸ್ಟ್ಯಾಗ್ ಬಳಸಲಾಗುತ್ತಿರುವುದರಿಂದ 2022 ರಲ್ಲಿ ಸುಮಾರು 46 ಪ್ರತಿಶತದಷ್ಟು ಬೆಳವಣಿಗೆಯನ್ನು ಕಂಡಿದೆ. 2021 ಮತ್ತು 2022 ರಲ್ಲಿ ಫಾಸ್ಟ್ಯಾಗ್ ಮೂಲಕ ಕ್ರಮವಾಗಿ 219 ಕೋಟಿ ಮತ್ತು 324 ಕೋಟಿ ರೂಪಾಯಿ ಶುಲ್ಕ ಸಂಗ್ರಹಿಸಲಾಗಿತ್ತು.
ಪ್ರಯಾಣಿಕರ ಸಮಯ ಮತ್ತು ತೊಂದರೆ ಮುಕ್ತ ಸಂಚಾರ ಸುಗಮಗೊಳಿಸುವ ನಿಟ್ಟಿನಲ್ಲಿ ಶುಲ್ಕ ಪಾವತಿ ಯೋಜನೆಯನ್ನು ಜಾರಿಗೊಳಿಸಲಾಗಿದೆ.ಈವರೆಗೂ ಸುಮಾರು 6.4 ಕೋಟಿ ಫಾಸ್ಟ್ಯಾಗ್ ವಿತರಿಸಲಾಗಿದೆ. 2021ರಲ್ಲಿ 922 ಟೋಲ್‌ಗಳಲ್ಲಿ ಫಾಸ್ಟ್ಯಾಗ್ ಸಕ್ರಿಯಗೊಳಿಸಲಾಗಿತ್ತು.ಈ ವರ್ಷದಲ್ಲಿ 2022ರಲ್ಲಿ 1,181 ಟೋಲ್‌ಗಳಲ್ಲಿ ಫಾಸ್ಟ್ಯಾಗ್ ಅಳವಡಿಸಿಕೊಳ್ಳಲಾಗಿದೆ ಎಂದು ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.
ಸರ್ಕಾರವು 2021ರ ಫೆಬ್ರವರಿ 16ರಿಂದ ಎಲ್ಲ ಖಾಸಗಿ ಮತ್ತು ವಾಣಿಜ್ಯ ವಾಹನಗಳಿಗೆ ಫಾಸ್ಟ್ಯಾಗ್‌ಅನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಆದೇಶ ಹೊರಡಿಸಿತ್ತು.

ಫಾಸ್ಟ್ಯಾಗ್ ಬದಲಿಗೆ ಜಿಪಿಎಸ್ ವ್ಯವಸ್ಥೆ !
ಮುಂಬರುವ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಡೆರಹಿತ ವಾಹನ ಸಂಚಾರ ಮತ್ತು ಸುಲಭ ಶುಲ್ಕ ಪಾವತಿ ವ್ಯವಸ್ಥೆಗಾಗಿ ಫಾಸ್ಟ್ಯಾಗ್ ಬದಲಿಗೆ ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಯೋಜನೆಯ ಅನುಷ್ಠಾನದಿಂದ ದೇಶವು ಟೋಲ್ ಪ್ಲಾಜಾ ಮುಕ್ತವಾಗಲಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಹೊಸ ತಂತ್ರಜ್ಞಾನ ಆಧಾರಿತ ಟೋಲಿಂಗ್‌ಗೆ ಅನುಕೂಲವಾಗುವಂತೆ ಮೋಟಾರು ವಾಹನ ಕಾಯ್ದೆಗೆ ಮತ್ತಷ್ಟು ತಿದ್ದುಪಡಿಗಳ ಕೆಲಸವನ್ನು ಪ್ರಾರಂಭಿಸುವುದರೊಂದಿಗೆ ಮಹತ್ವಾಕಾಂಕ್ಷೆಯ ಯೋಜನೆಯನ್ನು ಸಿದ್ಧಪಡಿಸಲಾಗುತ್ತಿದೆ.
-
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications