CM Post Fight: 5 ವರ್ಷ ನಾನೇ CM, 2028ಕ್ಕೆ ನಂದೇ ನಾಯಕತ್ವ: ಡಿ ಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟ ಸಿದ್ದರಾಮಯ್ಯ
ನವದೆಹಲಿ,ಜುಲೈ 10 : ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಮಾಧ್ಯಮಗಳ ಸೃಷ್ಠಿಯಾಗಿದ್ದು, ಊಹಾಪೋಹಗಳಿಗೆ ಆಸ್ಪದವಿಲ್ಲ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ರಾಜ್ಯದಲ್ಲಿ ಶಾಸಕರನ್ನು ಭೇಟಿ ಮಾಡುತ್ತಿರುವ ಉದ್ದೇಶ ಮುಖ್ಯಮಂತ್ರಿಗಳ ಬದಲಾವಣೆಯ ವಿಷಯವಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾದವರೇ ಮುಖ್ಯಮಂತ್ರಿಗಳ ಬದಲಾವಣೆಯ ಪ್ರಶ್ನೆಯನ್ನು ಅಲ್ಲಗೆಳೆದ ಮೇಲೆ , ಈ ವಿಷಯದ ಬಗ್ಗೆ ಊಹಾಪೋಹಗಳಿಗೆ ಆಸ್ಪದವಿಲ್ಲ. ಈ ಊಹಾಪೋಹಗಳನ್ನು ಮಾಧ್ಯಮಗಳ ಸೃಷ್ಟಿಯಾಗಿರುವುದೇ ಹೊರತು, ಕಾಂಗ್ರೆಸ್ ವಲಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಚರ್ಚೆಯೇ ಆಗಿಲ್ಲ ಎಂದರು.

ಈ ವಿಷಯದ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವನ್ನು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಸಹಮತಿಸಬೇಕೆಂದು ಸ್ಪಷ್ಟ ಸೂಚನೆ ನೀಡಿದ್ದು, ವರಿಷ್ಠರ ತೀರ್ಮಾನಕ್ಕೆ ತಲೆಬಾಗುವುದಾಗಿ ನಾವಿಬ್ಬರೂ ಹಲವು ಬಾರಿ ತಿಳಿಸಿದ್ದೇನೆ. ಸರ್ಕಾರಕ್ಕೆ ಎರಡೂವರೆ ವರ್ಷವಾಗಿರುವ ಸಂದರ್ಭದಲ್ಲಿ ಅಧಿಕಾರ ಹಸ್ತಾಂತರದ ವಿಷಯವೇಳುವುದು ಸಹಜ. ಆದರೆ ಈ ಬಗ್ಗೆ ಯಾವುದೇ ಒಪ್ಪಂದವಾಗಿಲ್ಲ. ಇತ್ತೀಚೆಗಷ್ಟೇ 'ಐದು ವರ್ಷವೂ ನಾನೇ ಸಿಎಂ ಆಗಿ ಮುಂದುವರಿಯಲಿದ್ದೇನೆ' ಎಂದು ಸ್ಪಷ್ಟಪಡಿಸಿದ ಮೇಲೆ ಮಾಧ್ಯಮಗಳಲ್ಲಿ ಇಂತಹ ಗಾಳಿಸುದ್ದಿಗಳು ಏಕೆ ಹಬ್ಬಿಸಲಾಗುತ್ತಿದೆ ಎಂದು ಮರುಪ್ರಶ್ನಿಸಿದರಲ್ಲದೇ ಖುದ್ದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಮುಖ್ಯಮಂತ್ರಿಗಳ ಸ್ಥಾನ ಖಾಲಿಯಿಲ್ಲವೇಂದು ಅವರೇ ತಿಳಿಸಿದ್ದಾರೆ ಎಂದರು.
ಕಾಂಗ್ರೆಸ್ ನ ಕೆಲ ಶಾಸಕರೇ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಅಭಿಪ್ರಾಯ ತಿಳಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೆಲವು ಶಾಸಕರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆಯೇ ಹೊರತು, ಇದು ಪಕ್ಷದ ತೀರ್ಮಾನವಲ್ಲ. ಅಧಿಕಾರ ಹಸ್ತಾಂತರದ ಊಹೆಗೆ ಯಾವುದೇ ಅರ್ಥವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ರಾಹುಲ್ ಗಾಂಧಿಯವರನ್ನು ಭೇಟಿಯಾಗುವ ಸಂಭವವಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಸಾಧ್ಯತೆಯಿಲ್ಲ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಇಂದು ಸಂಜೆ ಭೇಟಿ ಮಾಡಿ, ಎಂ ಎಲ್ ಸಿ , ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚಿಸಲಾಗುವುದು ಎಂದರು. ಕರ್ನಾಟಕದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ ಎಂದು ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಬ್ಬರೂ ಪುನರುಚ್ಚರಿಸಿದ್ದೇವೆ ಎಂದರು. ಕರ್ನಾಟಕದ ಮುಖ್ಯಮಂತ್ರಿ ನಾನೇ ಎಂದರು. ಡಿ.ಕೆ.ಶಿವಕುಮಾರ್ ಆಗಲಿ ಅಥವಾ ಶಾಸಕರು ಯಾರೇ ಆಗಲಿ ಮುಖ್ಯಮಂತ್ರಿಯಾಗಬೇಕೆAಬ ಆಸೆ ಇಟ್ಟುಕೊಂಡಿದ್ದರೆ ಅದರಲ್ಲ ತಪ್ಪೇನಿಲ್ಲ ಎಂದರು.
-
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications