• search
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಅಯೋಧ್ಯೆಯಲ್ಲಿ ಮಸೀದಿ ಇದ್ದಿದ್ದೇ ಸುಳ್ಳು: ವಾಸೀಮ್ ರಿಜ್ವಿ

|

ಲಕ್ನೋ, ಜುಲೈ 13: 'ಅಯೋಧ್ಯೆಯಲ್ಲಿ ಮಸೀದಿ ಇದ್ದಿದ್ದೇ ಸುಳ್ಳು. ಅದು ರಾಮನ ಜನ್ಮಸ್ಥಳ' ಎಂದು ಉತ್ತರ ಪ್ರದೇಶ ಶಿಯಾ ಸೆಂಟ್ರಲ್ ವಕ್ಫ್ ಬೋರ್ಡ್ ಅಧ್ಯಕ್ಷ ವಾಸೀಮ್ ರಿಜ್ವಿ ಹೇಳಿದ್ದಾರೆ.

"ಆ ಜಾಗದಲ್ಲಿ ಮಸೀದಿ ಇರಲೇ ಇಲ್ಲ ಮತ್ತು ಆ ಜಾಗದಲ್ಲಿ ಎಂದಿಗೂ ಮಸೀದಿ ಇರುವುದಕ್ಕೆ ಸಾಧ್ಯವೂ ಇಲ್ಲ. ಅದು ಭಗವಂತ ಶ್ರೀರಾಮನ ಜನ್ಮಸ್ಥಳ. ಅಲ್ಲಿ ರಾಮ ಮಂದಿರವನ್ನು ಮಾತ್ರ ಕಟ್ಟುವುದಕ್ಕೆ ಸಾಧ್ಯ" ಎಂದು ಅವರು ಹೇಳಿದ್ದಾರೆ.

"ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಮಸೀದಿ ಇದ್ದಿದ್ದೇ ಸುಳ್ಳು!"

'ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಕುರಿತ ವಿವಾದವನ್ನು ನಾವು ಶಾಂತಿಯುತವಾಗಿಯೇ ಬಗೆಹರಿಸಿಕೊಳ್ಳಲು ಬಯಸುತ್ತೇವೆ' ಎಂದು ಶಿಯಾ ವಕ್ಫ್ ಬೋರ್ಡ್ ಸುಪ್ರೀಂ ಕೋರ್ಟಿಗೆ ಹೇಳಿದೆ.

ಕಳೆದ ಮಾರ್ಚ್ ನಲ್ಲಿ ದ್ವಾರಕಾ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಹೇಳಿಕೆ ನೀಡಿ, ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಮಸೀದಿ ಇರಲೇ ಇಲ್ಲ, ಕರಸೇವಕರು ಕೆಡವಿದ್ದು ಮಂದಿರವನ್ನ, ಮಸೀದಿಯನ್ನಲ್ಲ" ಎಂದಿದ್ದರು.

ಅತ್ಯಂತ ಸೂಕ್ಷ್ಮ ಪ್ರಕರಣಗಳಲ್ಲೊಂದಾದ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟಿನಲ್ಲಿ ನಡೆಯುತ್ತಿದೆ. ಅಯೋಧ್ಯೆಯ ವಿವಾದಿತ ಜಾಗವನ್ನು ಮೂರು ವಿಭಾಗಗಳಾಗಿ ವಿಂಗಡಿಸಿ 2010ರಲ್ಲಿ ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ 13 ಅರ್ಜಿಗಳು ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದು ಇದರ ವಿಚಾರಣೆ ಜುಲೈ 06 ರಿಂದ ಆರಂಭವಾಗಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
There was never a Masjid on that site in Ayodhya and there can never be a Masjid there. It is the birthplace of Lord Ram and only a Ram Temple will be built. Sympathizers of Babar are destined to lose: Waseem Rizvi,UP Shia Central Waqf Board Chairman,

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more