ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಗಸ್ಟ್‌ 15ರವರೆಗೂ ಈ ರಾಜ್ಯಗಳಲ್ಲಿ ಮಳೆ ನಿಲ್ಲುವುದಿಲ್ಲ; IMD ಮುನ್ಸೂಚನೆ

|
Google Oneindia Kannada News

ನವದೆಹಲಿ, ಆಗಸ್ಟ್‌ 12: ಉತ್ತರ ಭಾರತದಲ್ಲಿ ಮುಂಗಾರು ಪ್ರಭಾವ ಮುಂದುವರೆದಿದ್ದು, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಧಿಕ ಪ್ರಮಾಣದ ಮಳೆ ಬೀಳುತ್ತಿದೆ.

ಈಶಾನ್ಯ ರಾಜ್ಯಗಳಲ್ಲಿ ಇನ್ನೂ ಕೆಲ ದಿನಗಳ ಕಾಲ ಮಳೆ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಮುಂದಿನ ಮೂರು ದಿನಗಳ ಕಾಲ ಉತ್ತರ ಭಾರತದಲ್ಲಿ ಅಧಿಕ ಮಳೆ ಮುಂದುವರೆಯುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಆಗಸ್ಟ್‌ 12 ಹಾಗೂ 13ರಂದು ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಆಗಸ್ಟ್ 12ರಂದು ಸಿಕ್ಕಿಂನಲ್ಲಿ ಅತಿ ಹೆಚ್ಚಿನ ಮಳೆಯಾಗುವ ಸೂಚನೆ ನೀಡಿದೆ.

ಹವಾಮಾನ ಬದಲಾವಣೆಯ ಕೆಟ್ಟ ಪರಿಣಾಮಗಳಿಗೆ ಸಾಕ್ಷಿಯಾಗಲಿದೆ ಭೂಮಿ; ಐಪಿಸಿಸಿ ಎಚ್ಚರಿಕೆಹವಾಮಾನ ಬದಲಾವಣೆಯ ಕೆಟ್ಟ ಪರಿಣಾಮಗಳಿಗೆ ಸಾಕ್ಷಿಯಾಗಲಿದೆ ಭೂಮಿ; ಐಪಿಸಿಸಿ ಎಚ್ಚರಿಕೆ

ಉತ್ತರ ಪ್ರದೇಶದ ಪೂರ್ವ ಭಾಗಗಳಲ್ಲಿ ಹಾಗೂ ಬಿಹಾರದಲ್ಲಿ ಆಗಸ್ಟ್ 14ರವರೆಗೂ ಮಳೆ ಮುಂದುವರೆಯಲಿದ್ದು, ಆನಂತರ ಮಳೆ ಪ್ರಮಾಣ ತಗ್ಗಲಿದೆ. ಈ ಎರಡು ಪ್ರದೇಶಗಳು ಗುರುವಾರ ಅತಿ ಹೆಚ್ಚಿನ ಮಳೆ ಪಡೆಯಲಿವೆ ಎಂದು ತಿಳಿಸಿದೆ. ಹಿಮಾಚಲ ಪ್ರದೇಶದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಮುನ್ಸೂಚನೆ ನೀಡಲಾಗಿದೆ. ಇನ್ನೂ ಯಾವ್ಯಾವ ರಾಜ್ಯಗಳಲ್ಲಿ ಮಳೆಯಾಗಲಿದೆ? ಮುಂದೆ ಓದಿ...

 ಚಂಡಮಾರುತ ಹಾಗೂ ವಾಯುಭಾರ ಕುಸಿತದ ಪ್ರಭಾವ

ಚಂಡಮಾರುತ ಹಾಗೂ ವಾಯುಭಾರ ಕುಸಿತದ ಪ್ರಭಾವ

ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಆಗಸ್ಟ್‌ 13 ರಿಂದ ಆಗಸ್ಟ್ 15ರವರೆಗೂ ಭಾರೀ ಮಳೆ ಸೂಚನೆ ನೀಡಲಾಗಿದೆ. ಆಗಸ್ಟ್ 15ರಂದು ವಾಯವ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವ ಹಾಗೂ ಮುಂದಿನ 48 ಗಂಟೆಗಳಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ಒಡಿಶಾ, ಆಂಧ್ರ ಕರಾವಳಿ ತೀರ, ತೆಲಂಗಾಣ, ವಿದರ್ಭ ಹಾಗೂ ಛತ್ತೀಸ್‌ಗಡದಲ್ಲಿ ಆಗಸ್ಟ್‌ 17ರವರೆಗೂ ವ್ಯಾಪಕ ಮಳೆ ಬೀಳುವ ಸೂಚನೆ ನೀಡಲಾಗಿದೆ.

 ಮುಂದಿನ 5 ದಿನಗಳವರೆಗೂ ದುರ್ಬಲ ಮುಂಗಾರು

ಮುಂದಿನ 5 ದಿನಗಳವರೆಗೂ ದುರ್ಬಲ ಮುಂಗಾರು

ಮುಂದಿನ ಐದು ದಿನಗಳವರೆಗೂ ದೇಶದಲ್ಲಿ ದುರ್ಬಲ ಮುಂಗಾರು ಮುಂದುವರೆಯಲಿದೆ. ಈಶಾನ್ಯ ಹಾಗೂ ಪೂರ್ವ ಭಾರತದಲ್ಲಿ, ಉತ್ತರ ಪ್ರದೇಶ ಹಾಗೂ ಬಿಹಾರದಲ್ಲಿ ಆಗಸ್ಟ್‌ 14ರವರೆಗೂ ನಿರಂತರ ಮಳೆಯಾಗಲಿದೆ. ಪಂಜಾಬ್, ಹರಿಯಾಣ, ರಾಜಸ್ಥಾನ, ಮಹಾರಾಷ್ಟ್ರ, ಗುಜರಾತ್‌ನಲ್ಲಿ ಆಗಸ್ಟ್ 15ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪಂಜಾಬ್, ಹರಿಯಾಣ, ರಾಜಸ್ಥಾನದಲ್ಲಿ ಇನ್ನೂ ನಾಲ್ಕು ದಿನ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ. ಪಶ್ಚಿಮ ಬಂಗಾಳದಲ್ಲಿ ಅಧಿಕ ಮಳೆಯಾಗುತ್ತಿರುವ ಕಾರಣ ಗಂಗಾ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗಿ ತಗ್ಗು ಪ್ರದೇಶಗಳಿಗೆ ನೀರು ಹರಿದು ಪ್ರವಾಹದಿಂದಾಗಿ ಜನಜೀವನ ತತ್ತರಿಸಿದೆ.

ಈ ನಾಲ್ಕು ರಾಜ್ಯಗಳಲ್ಲಿ ಆಗಸ್ಟ್‌ 15ರವರೆಗೂ ಭಾರೀ ಮಳೆ ಎಚ್ಚರಿಕೆಈ ನಾಲ್ಕು ರಾಜ್ಯಗಳಲ್ಲಿ ಆಗಸ್ಟ್‌ 15ರವರೆಗೂ ಭಾರೀ ಮಳೆ ಎಚ್ಚರಿಕೆ

 ಕೇರಳ, ತಮಿಳುನಾಡಿನಲ್ಲಿ ಆಗಸ್ಟ್ 14ರವರೆಗೆ ಮಳೆ

ಕೇರಳ, ತಮಿಳುನಾಡಿನಲ್ಲಿ ಆಗಸ್ಟ್ 14ರವರೆಗೆ ಮಳೆ

ತಮಿಳುನಾಡು ಹಾಗೂ ಕೇರಳದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ. ತಮಿಳುನಾಡಿನಲ್ಲಿ ಆಗಸ್ಟ್‌ 14ರವರೆಗೆ ಹಾಗೂ ಕೇರಳದಲ್ಲಿ ಆಗಸ್ಟ್‌ 12ರವರೆಗೆ ಅಧಿಕ ಮಳೆಯಾಗಲಿದೆ. ಆನಂತರ ಇಲ್ಲಿ ಮಳೆ ಪ್ರಮಾಣ ತಗ್ಗಲಿದೆ ಎಂದು ಮುನ್ಸೂಚನೆ ನೀಡಿದೆ.

 ರಾಜ್ಯದಲ್ಲಿ ಸಾಧಾರಣ ಮಳೆ ಸೂಚನೆ

ರಾಜ್ಯದಲ್ಲಿ ಸಾಧಾರಣ ಮಳೆ ಸೂಚನೆ

ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆಗಸ್ಟ್ 16ರವರೆಗೂ ಸಾಧಾರಣ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಒಳನಾಡಿನಲ್ಲಿ ಚದುರಿದ ಮಳೆ ಮುಂದುವರೆಯಲಿದೆ. ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿರುವುದಾಗಿ ಬೆಂಗಳೂರಿನ ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಗುರುವಾರ ಹಾಗೂ ಶುಕ್ರವಾರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

English summary
India Meteorological Department on Thursday said that these states may receive extremely heavy rainfall till august 15,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X