ಈ ರಾಜ್ಯಗಳಲ್ಲಿ ಮುಂದಿನ 5 ದಿನಗಳವರೆಗೆ ಮಳೆ ಮುನ್ಸೂಚನೆ
ನವದೆಹಲಿ, ಅಕ್ಟೋಬರ್ 10: ಮುಂಗಾರು ಅಂತ್ಯವಾಗಿದ್ದರೂ ಮುಂದಿನ ಕೆಲವು ದಿನಗಳ ಕಾಲ ಹಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಛತ್ತೀಸ್‌ಗಡ, ಜಾರ್ಖಂಡ್ ಹಾಗೂ ಬಿಹಾರದಲ್ಲಿ ಈಗಾಗಲೇ ನೈಋತ್ಯ ಮುಂಗಾರು ಅಂತ್ಯವಾಗಿದೆ. ಇನ್ನಷ್ಟು ಪ್ರದೇಶಗಳಿಂದ ಮುಂಗಾರು ಅಂತ್ಯವಾಗಲು ಹವಾಮಾನ ಸೂಕ್ತವಾಗಿದೆ. ಮುಂದಿನ ಮೂರು-ನಾಲ್ಕು ದಿನಗಳಲ್ಲಿ ಮುಂಗಾರು ಅಂತ್ಯವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಭಾರತದ ಕರಾವಳಿ ಪ್ರದೇಶಗಳಲ್ಲಿ 'ಜವಾದ್' ಚಂಡಮಾರುತದ ಪ್ರಭಾವದಿಂದ ಮಳೆಯಾಗುವುದಾಗಿ ತಿಳಿಸಿದೆ. ಗುಲಾಬ್, ಶಾಹೀನ್ ನಂತರ ಇದೀಗ ಜವಾದ್ ಚಂಡಮಾರುತ ಅಪ್ಪಳಿಸಲಿರುವುದಾಗಿ ಮುನ್ಸೂಚನೆ ನೀಡಲಾಗಿದೆ.

ನೈಋತ್ಯ ಬಂಗಾಳ ಕೊಲ್ಲಿಯಲ್ಲಿನ ಚಂಡಮಾರುತ ಪರಿಚಲನೆಯು ದಕ್ಷಿಣದ ಕಡೆಗೆ ಇರಲಿದೆ. ಹೀಗಾಗಿ ಈಶಾನ್ಯ ಪ್ರದೇಶಗಳಲ್ಲಿ ಮಳೆ ಕಡಿಮೆಯಾಗಲಿದ್ದು, ದಕ್ಷಿಣದ ರಾಜ್ಯಗಳೆಡೆಗೆ ಮಾರುತಗಳು ಚಲಿಸಲಿವೆ ಎಂದು ಹೇಳಿದೆ. ಈಚೆಗಷ್ಟೆ ಎರಡು ಚಂಡಮಾರುತಗಳ ಪ್ರಭಾವದಿಂದ ಬಹುಪಾಲು ರಾಜ್ಯಗಳು ಭಾರೀ ಮಳೆಯನ್ನು ಪಡೆದಿದ್ದವು. ಗುಲಾಬ್ ಹಾಗೂ ಶಾಹೀನ್ ಚಂಡಮಾರುತದಿಂದಾಗಿ ಮುಂಗಾರು ಅಂತ್ಯದ ಅವಧಿಯಲ್ಲಿಯೂ ಮಳೆ ಪ್ರಭಾವ ಜೋರಾಗಿತ್ತು. ಇದೀಗ ಮತ್ತಷ್ಟು ದಿನ ಮಳೆಯಾಗುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಐದು ದಿನಗಳವರೆಗೂ ಅಂಡಮಾನ್, ನಿಕೋಬಾರ್‌ನಲ್ಲಿ ಅಧಿಕ ಮಳೆಯಾಗುವ ಸಂಭವವಿದೆ. 50-60 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು ಮಿಂಚು ಸಹಿತ ಮಳೆಯಾಗುವುದಾಗಿ ತಿಳಿಸಿದೆ.
'ಅಂಡಮಾನ್ ನಿಕೋಬಾರ್‌ನಲ್ಲಿ ಚಂಡಮಾರುತ ಪರಿಚಲನೆಯಿದ್ದು, ಈ ಪ್ರಭಾವದಲ್ಲಿ ಮುಂದಿನ 48 ಗಂಟೆಗಳಲ್ಲಿ ವಾಯುಭಾರ ಕುಸಿತ ಉಂಟಾಗಲಿದೆ. ನಂತರ ಪಶ್ಚಿಮ- ನೈಋತ್ಯ ದಿಕ್ಕಿನೆಡೆಗೆ ಚಲಿಸಲಿದ್ದು, ಉತ್ತರ ಒಡಿಶಾ ಹಾಗೂ ಉತ್ತರ ಆಂಧ್ರಪ್ರದೇಶ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸೂಚನೆಯನ್ನು ನೀಡಲಾಗಿದೆ. ಮುಂದಿನ ಐದು ದಿನಗಳವರೆಗೂ ಮಳೆ ಮುಂದುವರೆಯಲಿದೆ' ಎಂದು ತಿಳಿಸಿದೆ.

'ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಚಂಡಮಾರುತ ಪರಿಚಲನೆಯಿದೆ. ಇದರ ಪ್ರಭಾವದಲ್ಲಿ ವ್ಯಾಪಕದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಮಹಾರಾಷ್ಟ್ರ, ತಮಿಳುನಾಡು, ಕರ್ನಾಟಕದ ಒಳನಾಡು ಹಾಗೂ ಕೇರಳದಲ್ಲಿ ಮುಂದಿನ ಐದು ದಿನಗಳವರೆಗೂ ಮಳೆ ಮುಂದುವರೆಯಲಿದೆ ಎಂದು ತಿಳಿಸಿದೆ.
ಅಕ್ಟೋಬರ್ 11ರಿಂದ 13ರವರೆಗೂ ಕೇರಳ, ಮಹಾರಾಷ್ಟ್ರದಲ್ಲಿ ಅಧಿಕ ಮಳೆಯಾಗುವುದಾಗಿ ಮುನ್ಸೂಚನೆ ನೀಡಲಾಗಿದೆ. ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಅಕ್ಟೋಬರ್ 10 ರಿಂದ 12ರ ತನಕ ಮಳೆಯಾಗಲಿದೆ. ಗೋವಾ, ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು ರಾಜ್ಯಗಳಲ್ಲಿ 4 ರಿಂದ 5 ದಿನಗಳ ತನಕ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ತಿಳಿಸಿದೆ.
ಕರ್ನಾಟಕದ ಕರಾವಳಿಯಲ್ಲಿ ಅಕ್ಟೋಬರ್ 11-13ರವರೆಗೆ, ಉತ್ತರ ಒಳನಾಡಿನಲ್ಲಿ 10, 12,13 ರಂದು, ರಾಯಲಸೀಮಾದಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಮಳೆಯಾಗಲಿದೆ. ಅಕ್ಟೋಬರ್ 11ರಂದು ಕೊಂಕಣ, ಗೋವಾದಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಮುಂದಿನ 48 ಗಂಟೆಗಳಲ್ಲಿ ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನ್, ಪಂಜಾಬ್, ಹರ್ಯಾಣ, ಚಂಡೀಗಢ್, ದೆಹಲಿ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಉತ್ತರಾಖಂಡ್ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಕೇರಳದಲ್ಲಿ ಆರೆಂಜ್ ಅಲರ್ಟ್:
ಕೇರಳದಲ್ಲಿ ಅಕ್ಟೋಬರ್ 11ರಿಂದ ಭಾರೀ ಮಳೆಯಾಗುವ ಸೂಚನೆ ನೀಡಲಾಗಿದ್ದು, ತಿರುವನಂತಪುರಂ, ಕೊಲ್ಲಂ, ಅಲಪುಜ, ಕೊಟ್ಟಾಯಂ, ಎರ್ನಾಕುಲಂ ಹಾಗೂ ಇಡುಕ್ಕಿಯಲ್ಲಿ ಅಕ್ಟೋಬರ್ 11ರಿಂದ 13ರವರೆಗೆ ಅಧಿಕ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
-
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ












Click it and Unblock the Notifications