Gujarat Plane Crash: ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ: ವಿಡಿಯೋ ಇಲ್ಲಿದೆ

ಅಹಮದಾಬಾದ್, ಜೂನ್ 12: ಟೇಕ್ ಆಫ್ ಆದ ಕೂಡಲೆ ಏರ್ ಇಂಡಿಯಾ ವಿಮಾನ ಪತನವಾಗಿರುವ ದುರಂತ ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ ಇಂದು(ಜೂನ್‌ 12) ನಡೆದಿದೆ. ಇಂದು ಮಧ್ಯಾಹ್ನ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ನಗರ ಪ್ರದೇಶದಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಿಂದ ದಟ್ಟ ಹೊಗೆಯ ಮೋಡ ಆವರಿಸುತ್ತಿರುವುದು ವಿಡಿಯೋದಲ್ಲಿ ಕಾಣಬಹುದು.

ಗುಜರಾತ್‌ನ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗುರುವಾರ ಹೊರಟ ಏರ್ ಇಂಡಿಯಾ ವಿಮಾನವು ಕೆಲವೇ ನಿಮಿಷಗಳಲ್ಲಿ ಪತನಗೊಂಡಿದೆ. ಲಂಡನ್‌ಗೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ 242 ಪ್ರಯಾಣಿಕರಿದ್ದರು ಎಂದು ಮೂಲಗಳು ತಿಳಿಸಿವೆ. ಅಪಘಾತದ ದೃಶ್ಯಗಳು ವಿಮಾನ ನಿಲ್ದಾಣದಲ್ಲಿ ದಟ್ಟವಾದ ಹೊಗೆ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

Thick Smoke At Plane Crash Site Near Ahmedabad Airport

ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ಈ ದುರ್ಘಟನೆಯಿಂದ ಹಲವಾರು ಸಾವುನೋವುಗಳ ಭೀತಿ ಎದುರಾಗಿದೆ. 242 ಪ್ರಯಾಣಿಕರಲ್ಲಿ ಎಷ್ಟು ಜನ ಸಾವನ್ನಪ್ಪಿದ್ದಾರೆ ಎಂಬುದರ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಅಹಮದಾಬಾದ್​ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಿಂದ ದಟ್ಟ ಹೊಗೆಯ ಮೋಡ ಆವರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಈ ವಿಮಾನ ಅಹಮದಾಬಾದ್‌ನಿಂದ ಲಂಡನ್‌ಗೆ ಹೋಗುತ್ತಿತ್ತು. ವಿಮಾನದೊಳಗಿದ್ದ ಸಿಬ್ಬಂದಿ ಮತ್ತು ಪ್ರಯಾಣಿಕರನ್ನು ರಕ್ಷಣಾ ಮತ್ತು ಸ್ಥಳಾಂತರಿಸುವ ಕಾರ್ಯಾಚರಣೆಗಳು ನಡೆಯುತ್ತಿವೆ.

ಇನ್ನೂ ಈ ವಿಮಾನವು ಅಹಮದಾಬಾದ್​ ವಿಮಾನ ನಿಲ್ದಾಣದ ಹತ್ತಿರದ ವಸತಿ ಪ್ರದೇಶದಲ್ಲಿ ಪತನಗೊಂಡಿತು. ಈ ವಿಮಾನದಲ್ಲಿ 242 ಪ್ರಯಾಣಿಕರಿದ್ದರು. ಅದು ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನವಾಗಿತ್ತು. ಈ ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಹಾಗೂ 50 ಕ್ಕೂ ಹೆಚ್ಚು ಬ್ರಿಟಿಷ್‌ ಪ್ರಜೆಗಳಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ರಕ್ಷಣಾ ಕಾರ್ಯಚಾರಣೆ ನಡೆಯುತ್ತಿತ್ತು. ಸಾವು-ನೋವುಗಳ ಬಗ್ಗೆ ಯಾವುದೇ ಅಧಿಕೃತ ವರದಿಗಳು ಬಿಡುಗಡೆಯಾಗಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+