ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

3ನೇ ಪ್ರಕರಣ: ಕೊರೊನಾ ಲಸಿಕೆ ಹಾಕಿಸಿಕೊಂಡ ಮಹಿಳೆ ಸಾವು!

|
Google Oneindia Kannada News

ನವದೆಹಲಿ, ಜನವರಿ.31: ಕೊರೊನಾವೈರಸ್ ಲಸಿಕೆ ಹಾಕಿಸಿಕೊಂಡ ನಂತರದಲ್ಲಿ ಆರೋಗ್ಯ ಕಾರ್ಯಕರ್ತೆಯೊಬ್ಬರು ಪ್ರಾಣ ಬಿಟ್ಟಿರುವ ಘಟನೆ ತೆಲಂಗಾಣದಲ್ಲಿ ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ಲಸಿಕೆ ತೆಗೆದುಕೊಂಡ ನಂತರ ಮೃತಪಟ್ಟ ಮೂರನೇ ಪ್ರಕರಣ ಇದಾಗಿದೆ.

55 ವರ್ಷದ ಆರೋಗ್ಯ ಕಾರ್ಯಕರ್ತೆಯು ತೆಲಂಗಾಣದ ಮಂಚೇರಿಯಲ್ ಜಿಲ್ಲೆ ಕಸಿಪೇಟ್ ಗ್ರಾಮದವರು ಎಂದು ತಿಳಿದು ಬಂದಿದೆ. ಜನರಿ.16ರಂದು ಕೊವಿಡ್-19 ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ್ದರು. ಜನವರಿ.19ರಂದು ಕಸಿಪೇಟ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಕಾರ್ಯಕರ್ತೆಯು ಕೊರೊನಾವೈರಸ್ ಲಸಿಕೆಯನ್ನು ಹಾಕಿಸಿಕೊಂಡಿದ್ದರು.

ಕೊರೊನಾ ಲಸಿಕೆ ಪಡೆದ 10 ಮಂದಿ ಸಾವು,ವ್ಯತಿರಿಕ್ತ ಪರಿಣಾಮಗಳ ಬಗ್ಗೆ ಅಧ್ಯಯನಕೊರೊನಾ ಲಸಿಕೆ ಪಡೆದ 10 ಮಂದಿ ಸಾವು,ವ್ಯತಿರಿಕ್ತ ಪರಿಣಾಮಗಳ ಬಗ್ಗೆ ಅಧ್ಯಯನ

ಕೊವಿಡ್-19 ಲಸಿಕೆ ಹಾಕಿಸಿಕೊಂಡ ಮಹಿಳೆಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಜನವರಿ.29ರಂದು ಮಂಚೇರಿಯಲ್ ಜಿಲ್ಲೆಯ ಮೆಡಿಲೈಫ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರ ಸಲಹೆ ನಂತರ ಮಹಿಳೆಯನ್ನು ಹೈದ್ರಾಬಾದ್ ನಲ್ಲಿರುವ ನಿಜಾಮ್ ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆದೆ ದಾಖಲಿಸಲಾಗಿತ್ತು. ಜನವರಿ.30ರಂದು ಮಹಿಳೆ ಮೃತಪಟ್ಟಿರುವುದು ದೃಢಪಟ್ಟಿದೆ.

Third Healthcare Worker Died After Coronavirus Vaccination In Telangana

ಮಹಿಳೆ ಸಾವಿಗೆ ಕೊವಿಡ್-19 ಲಸಿಕೆ ಕಾರಣವಲ್ಲ:

ತೆಲಂಗಾಣದಲ್ಲಿ ಮೃತಪಟ್ಟ ಮೂರನೇ ಮಹಿಳೆಯ ಸಾವಿಗೂ ಕೊರೊನಾವೈರಸ್ ಲಸಿಕೆ ಕಾರಣವಲ್ಲ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸ್ಪಷ್ಟಪಡಿಸಿದೆ. ಉಸಿರಾಟ ತೊಂದರೆ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಮಹಿಳೆ ಮೃತಪಟ್ಟಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ತೆಲಂಗಾಣದ ನಿರ್ಮಲ್ ಜಿಲ್ಲೆಯಲ್ಲಿ 42 ವರ್ಷದ ವೈದ್ಯಕೀಯ ಸಿಬ್ಬಂದಿಯೊಬ್ಬರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೊನಾ ಲಸಿಕೆ ನೀಡಲಾಗಿತ್ತು. ಮಧ್ಯರಾತ್ರಿ 2.30ರ ಹೊತ್ತಿನಲ್ಲಿ ವೈದ್ಯಕೀಯ ಸಿಬ್ಬಂದಿಗೆ ಎದೆನೋವು ಕಾಣಿಸಿಕೊಂಡಿದೆ. ಬೆಳಗಿನಜಾವ 5.30ಕ್ಕೆ ಜಿಲ್ಲಾ ಆಸ್ಪತ್ರೆಗೆ ವ್ಯಕ್ತಿಯನ್ನು ಕರೆದುಕೊಂಡು ಹೋಗುವ ವೇಳೆಗೆ ಅವರು ಮೃತಪಟ್ಟಿದ್ದರು. ಅದೇ ರೀತಿ ವಾರಂಗಲ್ ನಲ್ಲಿ ಕೂಡಾ ಕೊವಿಡ್-19 ಲಸಿಕೆ ಪಡೆದ ನಂತರದಲ್ಲೇ ವೈದ್ಯಕೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದರು. ಆದರೆ ಈ ಮೂರು ಸಾವಿನ ಪ್ರಕರಣಗಳಲ್ಲಿ ಮೃತರ ಸಾವಿಗೆ ಕೊರೊನಾವೈರಸ್ ಲಸಿಕೆಯು ಕಾರಣವಲ್ಲ ಎಂಬುದನ್ನು ಸ್ಪಷ್ಟವಾಗಿ ಆರೋಗ್ಯ ಇಲಾಖೆ ಹೇಳುತ್ತಿದೆ.

English summary
Third Healthcare Worker Died After Coronavirus Vaccination In Telangana.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X