ಮುಂದಿನ 6-8 ವಾರಗಳಲ್ಲಿ ಕೊರೊನಾ ಮೂರನೇ ಅಲೆ; ಏಮ್ಸ್ ಕೊಟ್ಟ ಸೂಚನೆಗಳು...
ನವದೆಹಲಿ, ಜೂನ್ 19: "ದೇಶದಲ್ಲಿ ಕೊರೊನಾ ಮೂರನೇ ಅಲೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಇನ್ನು ಮುಂದಿನ ಆರರಿಂದ ಎಂಟು ವಾರಗಳಲ್ಲೇ ಮೂರನೇ ಅಲೆ ಪ್ರಭಾವ ಕಾಣಿಸಿಕೊಳ್ಳಲಿದೆ," ಎಂದು ಏಮ್ಸ್ ಮುಖ್ಯಸ್ಥ ಡಾ. ರಣದೀಪ್ ಗುಲೇರಿಯಾ ಹೇಳಿದ್ದಾರೆ.
ಕೊರೊನಾ ಎರಡನೇ ಅಲೆ ತಗ್ಗುತ್ತಿದ್ದು, ಈಗಷ್ಟೇ ಹಲವು ರಾಜ್ಯಗಳಲ್ಲಿ ಕೊರೊನಾ ನಿರ್ಬಂಧಗಳನ್ನು ಸಡಿಲಿಸಿ ಅನ್‌ಲಾಕ್ ಮಾಡಲಾಗುತ್ತಿದೆ. ಹೀಗೆ ಸಡಿಲಿಕೆ ಮಾಡುತ್ತಿದ್ದಂತೆ ಮೂರನೇ ಅಲೆ ಕುರಿತು ಎಚ್ಚೆತ್ತುಕೊಳ್ಳಬೇಕಾಗಿದೆಯೆಂದು ಕೇಂದ್ರವೂ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದೆ. ಈ ಹಿಂದೆ ಮಾಡಿದ ತಪ್ಪನ್ನು ಪುನರಾವರ್ತನೆ ಮಾಡಬಾರದು. ಕೊರೊನಾ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಹೇಳಿದೆ. ಕೊರೊನಾ ಮೂರನೇ ಅಲೆ ಕುರಿತು ಇನ್ನಷ್ಟು ಮಾಹಿತಿಗಳನ್ನು ಗುಲೇರಿಯಾ ಹಂಚಿಕೊಂಡಿದ್ದಾರೆ. ಮುಂದೆ ಓದಿ...

ಮೂರನೇ ಅಲೆ ನಿರ್ವಹಣೆಯಲ್ಲಿ ಈಗಿರುವ ಸವಾಲೇನು?
"ತನ್ನ ಬೃಹತ್ ಜನಸಂಖ್ಯೆಗೆ ಸಂಪೂರ್ಣವಾಗಿ ಲಸಿಕೆ ನೀಡುವುದು ದೇಶದ ಮುಂದಿರುವ ಸದ್ಯದ ಸವಾಲಾಗಿದೆ. ಹೆಚ್ಚಿನ ಜನಸಂಖ್ಯೆಗೆ ವೇಗಗತಿಯಲ್ಲಿ ಲಸಿಕೆ ನೀಡಲು ಕೋವಿಶೀಲ್ಡ್ ಎರಡು ಡೋಸ್ ಲಸಿಕೆಗಳ ನಡುವಿನ ಅಂತರ ಹೆಚ್ಚಿಸಿರುವುದು ಸದ್ಯಕ್ಕೆ ಅವಶ್ಯಕವೇ ಆಗಿದೆ. ಸೋಂಕಿನಿಂದ ಹೆಚ್ಚು ಜನರನ್ನು ಕಾಪಾಡಲು ಇದು ಉತ್ತಮ ದಾರಿ," ಎಂದು ಗುಲೇರಿಯಾ ವಿವರಿಸಿದ್ದಾರೆ.

ಆತಂಕ ತಂದಿರುವ ಡೆಲ್ಟಾ ಪ್ಲಸ್ ರೂಪಾಂತರ
"ದೇಶದಲ್ಲಿ ಈಚೆಗೆ ಕೊರೊನಾ ಸೋಂಕಿನ ಹಲವು ರೂಪಾಂತರಗಳು ಸೃಷ್ಟಿಯಾಗುತ್ತಿವೆ. ಹೊಸದಾಗಿ ಡೆಲ್ಟಾ ಪ್ಲಸ್ ರೂಪಾಂತರ ಸೃಷ್ಟಿಯಾಗಿದೆ. ಈ ಎಲ್ಲಾ ರೂಪಾಂತರಗಳ ವಿರುದ್ಧ ಹೋರಾಡಲು ಇನ್ನಷ್ಟು ಸಿದ್ಧತೆ ಮಾಡಿಕೊಳ್ಳಬೇಕಿದೆ. ಈ ಡೆಲ್ಟಾ ಪ್ಲಸ್ ರೂಪಾಂತರ ಮತ್ತೆ ಆತಂಕ ಸೃಷ್ಟಿಸಿದೆ. ಅನ್‌ಲಾಕ್‌ನತ್ತ ಹಲವು ರಾಜ್ಯಗಳು ಸಾಗುತ್ತಿರುವ ಈ ಹೊತ್ತಿನಲ್ಲಿ ಈ ರೂಪಾಂತರ ಭಯಕ್ಕೆ ಕಾರಣವಾಗಿದೆ. ಇಂಥ ಸಮಯದಲ್ಲಿ ಅನ್‌ಲಾಕ್ ಆಯಿತೆಂದು ಜನರು ಕೊರೊನಾ ನಿಯಮಗಳನ್ನು ಉಲ್ಲಂಘಿಸಿದರೆ ಪರಿಸ್ಥಿತಿ ಕಠಿಣವಾಗಲಿದೆ," ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮುಂದಿನ 6-8 ವಾರಗಳಲ್ಲಿ ಕೊರೊನಾ ಮೂರನೇ ಅಲೆ
ಕೊರೊನಾ ಮೂರನೇ ಅಲೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಇನ್ನು ಮುಂದಿನ 6-8 ವಾರಗಳಲ್ಲಿ ಕೊರೊನಾ ಮೂರನೇ ಅಲೆ ಆರಂಭವಾಗಬಹುದು. ಆದರೆ ಆಗಲೇ ಜನರು ಒಂದು ಕಡೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಲು ಆರಂಭಿಸಿದ್ದಾರೆ. ಹೀಗಾದರೆ ಮತ್ತೆ ದೇಶದಲ್ಲಿ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತದೆ. ನಾವು ಹೇಗೆ ಕೊರೊನಾ ನಿಯಮಗಳನ್ನು ಪಾಲಿಸುತ್ತೇವೆ ಎಂಬುದರ ಮೇಲೆ ಕೊರೊನಾ ಮೂರನೇ ಅಲೆ ಪರಿಣಾಮ ಅವಲಂಬಿತವಾಗಿದೆ ಎಂದು ಗುಲೇರಿಯಾ ಎಚ್ಚರಿಕೆ ನೀಡಿದ್ದಾರೆ.

ಮೂರು ತಿಂಗಳ ಕಾಲ ಮೂರನೇ ಅಲೆ ಪ್ರಭಾವ
"ಹಲವು ಅಂಶಗಳನ್ನು ಆಧರಿಸಿ ಕೊರೊನಾ ಮೂರನೇ ಅಲೆ ಮೂರು ತಿಂಗಳು ಇರಬಹುದು ಎಂದು ಅಂದಾಜಿಸಲಾಗಿದೆ. ಕೊರೊನಾ ನಿಯಮಗಳ ಪಾಲನೆಯೊಂದಿಗೆ ಹಲವು ವಿಷಯಗಳತ್ತ ಗಮನ ನೀಡುವುದು ಅವಶ್ಯಕವಾಗಿದೆ. ಹಾಟ್‌ಸ್ಪಾಟ್‌ಗಳಲ್ಲಿ ಎಚ್ಚರಿಕೆ ವಹಿಸಲೇಬೇಕಿದೆ. 5% ಗಿಂತ ಹೆಚ್ಚಿನ ಮಟ್ಟದಲ್ಲಿ ಪಾಸಿಟಿವಿಟಿ ದರ ಕಂಡುಬಂದರೆ ಮಿನಿ ಲಾಕ್‌ಡೌನ್ ಮಾಡುವ ಆಲೋಚನೆಯಿದೆ. ಈ ಸಮಯದಲ್ಲಿ ಹೆಚ್ಚಿನ ಮಟ್ಟದಲ್ಲಿ ಲಸಿಕೆ ನೀಡುವ ಪ್ರಯತ್ನವನ್ನು ಕೇಂದ್ರ ಸರ್ಕಾರ ಮಾಡುವುದು," ಎಂದು ಭರವಸೆ ನೀಡಿದರು.
-
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ












Click it and Unblock the Notifications