ಕೇರಳದ ಪ್ರಸಿದ್ಧ ಶ್ರೀ ಪದ್ಮನಾಭ ಸ್ವಾಮಿಯ ವಜ್ರಗಳು ನಾಪತ್ತೆ
ತಿರುವನಂತಪುರಂ, ಜುಲೈ 03 :ಕೇರಳದ ಪ್ರಸಿದ್ಧ ಶ್ರೀ ಪದ್ಮನಾಭ ಸ್ವಾಮಿ ದೇವಸ್ಥಾನದ ಸಂಪತ್ತಿನ ಬಗ್ಗೆ ಮತ್ತೊಂದು ಕುತೂಹಲಕಾರಿ ಸಂಗತಿ ಹೊರ ಬಂದಿದೆ. ಲೆಕ್ಕಪರಿಶೋಧನೆಯ ಮೇಲ್ವಿಚಾರಣೆ ನಡೆಸಿ ಸಿಎಜಿ ನೀಡಿರುವ ಇತ್ತೀಚೆಗೆ ನೀಡಿರುವ ವರದಿಯಂತೆ ಸುಮಾರು 8 ವಜ್ರಗಳು ನಾಪತ್ತೆಯಾಗಿವೆ.
ಪದ್ಮನಾಭ ಸ್ವಾಮಿಯ ತಿಲಕದ ಭಾಗವಾಗಿದ್ದ ಈ ವಜ್ರದ ಹರಳುಗಳ ಬೆಲೆ ಸುಮಾರು 21 ಲಕ್ಷ ರುಪಾಯಿ ಎಂದು ಅಂದಾಜಿಸಲಾಗಿದೆ ಎಂದು ಅಮಿಕಸ್ ಕ್ಯುರಿ ಗೋಪಾಲ್ ಸುಬ್ರಮಣಿಯಮ್ ಅವರು ಸುಪ್ರೀಂಕೋರ್ಟಿಗೆ ವರದಿ ಸಲ್ಲಿಕೆ ಮಾಡಿದ್ದಾರೆ.
ದಿನ ನಿತ್ಯ ಪೂಜೆಯಲ್ಲಿ ಎದ್ದು ಕಾಣಿಸುತ್ತಿದ್ದ ಈ ವಜ್ರಾಭರಣಗಳು ನಾಪತ್ತೆಯಾಗಿರುವ ಬಗ್ಗೆ ದೇಗುಲದ ಆಡಳಿತ ಅಧಿಕಾರಿ ಕೆಎಸ್ ಸತೀಶ್ ಅವರು ಮೇ ತಿಂಗಳಿನಲ್ಲಿ ದೂರು ನೀಡಿದ್ದರು.
ಈ ಹಿಂದೆ ಕಂಟ್ರೋಲರ್ ಆಡಿಟರ್ ಜನರಲ್ (ಸಿಎಜಿ ) ವಿನೋದ್ ರಾಯ್ ಅವರು ಸಲ್ಲಿಸಿದ್ದ ವರದಿಯಂತೆ, ಸುಮಾರು 186 ಕೋಟಿ ರು ಮೌಲ್ಯ ಹೊಂದಿರುವ 769 ಚಿನ್ನದ ಮಡಿಕೆಗಳು ನಾಪತ್ತೆಯಾಗಿವೆ.

ಸಿಎಜಿ ವರದಿಯ ಪ್ರಮುಖಾಂಶಗಳು
* ಚಿನ್ನವನ್ನು ಪರಿಶುದ್ಧಗೊಳಿಸುವ ಪ್ರಕ್ರಿಯೆಯಲ್ಲಿ ಅನುಪಾತ ಬದಲಾವಣೆಯಿಂದಾಗಿ ಸುಮಾರು 2.5 ಕೋಟಿ ರೂಪಾಯಿ ನಷ್ಟವಾಗಿದೆ.
* 14 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ನಾಪತ್ತೆಯಾಗಿದೆ.
* 14.18 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಹಾಗೂ ಬೆಳ್ಳಿಯನ್ನು ನಾಡವರಾವ್ ರಿಜಿಸ್ಟ್ರಾರ್‌ನಲ್ಲಿ ದಾಖಲಿಸದಿರುವುದು ಕಾನೂನು ಬಾಹಿರ.
* ದೇವಾಲಯ ಟ್ರಸ್ಟ್ ಕಾನೂನು ಬಾಹಿರವಾಗಿ 2.11 ಎಕರೆ ಭೂಮಿಯನ್ನು 1970ರಲ್ಲಿ ಮಾರಾಟ ಮಾಡಿದ್ದು, ಈ ಬಗ್ಗೆ ಯಾವ ದಾಖಲೆಯೂ ಲಭ್ಯವಿಲ್ಲ.

ಸಿಎಜಿ ವರದಿ ತನಕ
ಕೇರಳದ ಪದ್ಮನಾಭಸ್ವಾಮಿ ದೇಗುಲದಲ್ಲಿ ಅಪಾರ ಪ್ರಮಾಣದ ನಿಧಿ ಇದೆ. ಆದರೆ, ದೇಗುಲದಲ್ಲಿ ಅನುಮಾನಾಸ್ಪದ ಚಟುವಟಿಕೆ ನಡೆಯುತ್ತಿದೆ. ಆದ್ದರಿಂದ ಈ ಕುರಿತು ಪರಿಶೀಲನೆಗೆ ಒಳಪಡಿಸಬೇಕೆಂದು ಕೋರಿ ಗೋಪಾಲ ಸುಬ್ರಮಣಿಯಮ್ ಎಂಬುವರು ಸುಪ್ರೀಂ ಕೋರ್ಟ್‌ನಲ್ಲಿ ಆಮಿಕಸ್ ಕ್ಯೂರಿ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ನಿಧಿಯ ಲೆಕ್ಕ ಪರಿಶೋಧನೆಗೊಳಪಡಿಸಲು ಸುಪ್ರೀಂ ಕೋರ್ಟ್ ತೀರ್ಮಾನಿಸಿತ್ತು.

ಲಕ್ಷಾಂತರ ಕೋಟಿ ರು. ಮೌಲ್ಯದ ನಿಧಿ
2014ರಲ್ಲಿ ಸುಪ್ರೀಂಕೋರ್ಟ್, ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ವಿನೋದ್ ರಾಯ್ ಅವರ ಮೇಲ್ವಿಚಾರಣೆಯಲ್ಲಿ ಪದ್ಮನಾಭ ದೇವಾಲಯದ ಸಂಪತ್ತಿನ ಪರಿಶೋಧನೆ ನಡೆಸುವಂತೆ ಸೂಚಿಸಿತ್ತು. ಈ ಸಮಿತಿ ನಡೆಸಿದ ಪರಿಶೀಲನೆಯಲ್ಲಿ ದೇಗುಲದಲ್ಲಿ ಲಕ್ಷಾಂತರ ಕೋಟಿ ರು. ಮೌಲ್ಯದ ನಿಧಿ ಇರುವುದು ಪತ್ತೆಯಾಗಿತ್ತು. ಈ ನಿಧಿಯ ರಕ್ಷಣೆಗಾಗಿ ರಾಜ್ಯ ಸರ್ಕಾರವು ಶಸ್ತ್ರಸಜ್ಜಿತ ಪೊಲೀಸರು, ಸಿಸಿಟಿವಿ ಕ್ಯಾಮೆರಾ ಸೇರಿದಂತೆ ಇನ್ನಷ್ಟು ಕ್ರಮಗಳನ್ನು ಕೈಗೊಂಡಿತ್ತು.

ರಾಜಕುಟುಂಬದ ಹಸ್ತಕ್ಷೇಪ
ದೇವಸ್ಥಾನ ಸಾರ್ವಜನಿಕ ಸಂಪತ್ತಾಗಿದ್ದರೂ ರಾಜ ಕುಟುಂಬ (Travancore royal family) ಇದನ್ನು ಸ್ವಂತ ಸೊತ್ತು ಎಂದೇ ಭಾವಿಸಿದೆ. ದೇವಸ್ಥಾನದ ಆಡಳಿತದಲ್ಲಿ ರಾಜಕುಟುಂಬದ ಹಸ್ತಕ್ಷೇಪವನ್ನು ತಡೆಯಬೇಕು. ಮಾಜಿ ಮಹಾಲೇಖಪಾಲರಾದ ವಿನೋದ್ ರಾಯ್ ಅವರಿಂದ ವಿಸ್ತಾರ ಆಡಿಟ್ ನಡೆಸಬೇಕು ಎಂದು 500 ಪುಟಗಳ ಸುದೀರ್ಘ ವರದಿಯಲ್ಲಿ ಅಮಿಕಸ್ ಕ್ಯೂರಿ ಗೋಪಾಲ ಸುಬ್ರಮಣ್ಯಂ ಕೋರ್ಟ್ ಗಮನ ಸೆಳೆದಿದ್ದಾರೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications