Haryana Election Results: ಹರಿಯಾಣದಲ್ಲಿ "ದೊಡ್ಡಣ"ನಂತೆ ವರ್ತಿಸಿದ್ದ "ಕಾಂಗ್ರೆಸ್‌ಗೆ ಪಾಠ"
ಉತ್ತರ ಭಾರತದ ಸಣ್ಣ ರಾಜ್ಯಗಳ ಫಲಿತಾಂಶ ಇದೀಗ ದೇಶಾದ್ಯಂತ ಹಲವು ಕಾರಣಗಳಿಗೆ ಚರ್ಚೆಯಾಗುತ್ತಿದೆ. ಹರಿಯಾಣದಲ್ಲಿ ಕಾಂಗ್ರೆಸ್ ಏಕಾಂಕಿಯಾಗಿ ಹೋಗಿ ಸುಲಭವಾಗಿ ಗೆಲ್ಲಬಹುದಾದ ಪಂದ್ಯವನ್ನು ಸೋತಿದೆ. ಈ ಸೋಲಿಗೆ ಕಾಂಗ್ರೆಸ್ ಇಂಡಿಯಾ ಮೈತ್ರಿ ಕೂಟದ ವಿಶ್ವಸವನ್ನು ಗಳಿಸದೆ ಇರುವುದೇ ಕಾರಣ ಎಂದು ಕಾಂಗ್ರೆಸ್ ಮೈತ್ರಿಕೂಟದ ಪಕ್ಷಗಳು ಹಾಗೂ ಇಂಡಿಯಾ ಒಕ್ಕೂಟದ ನಾಯಕರು ದೂರಿದ್ದಾರೆ. ಹರಿಯಾಣದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದೇ ಅಂದಾಜಿಸಲಾಗಿತ್ತು. ಆದರೆ, ಆ ಲೆಕ್ಕಾಚಾರವೆಲ್ಲ ತಲೆಕೆಳಗಾಗಿದೆ.
ಸುಲಭವಾಗಿ ಗೆಲ್ಲಬಹುದಾದ ಪಂದ್ಯವನ್ನು ಸೋತಂತೆ ಕಾಂಗ್ರೆಸ್ ತನ್ನ ತಪ್ಪಿನಿಂದ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದೆ ಎಂದು ಹೇಳಲಾಗುತ್ತಿದೆ. ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದು ಅಂದಾಜಿಸಲಾಗಿತ್ತು. ಅಲ್ಲದೇ ಎಕ್ಸಿಟ್ ಪೋಲ್‌ಗಳು ಸಹ ಇದೇ ಭವಿಷ್ಯವನ್ನು ನುಡಿದಿದ್ದವು. ಮತ ಎಣಿಕೆಯ ಪ್ರಾರಂಭದ ಹಂತದಲ್ಲೂ ಇದೇ ಪರಿಸ್ಥಿತಿ ಇತ್ತು. ಆದರೆ, ಮಂಗಳವಾರ ಬೆಳಿಗ್ಗೆ 11 ಗಂಟೆಯ ವೇಳೆಗೆ ಚಿತ್ರಣವೇ ಬದಲಾಗಿ ಹೋಗಿತ್ತು. ಇದಕ್ಕೆ ಕಾಂಗ್ರೆಸ್‌ನ ದೊಡ್ಡಣ್ಣನ ಮನೋಭಾವನೆಯೇ ಕಾರಣ. ಹರಿಯಾಣದಲ್ಲಿ ಹಲವು ವರ್ಷಗಳಿಂದ ಬಿಜೆಪಿಗೆ ಆಡಳಿತ ವಿರೋಧಿ ಅಲೆಯಿಂದ ಆದರೆ, ಕಾಂಗ್ರೆಸ್ ಮೈತ್ರಿಕೂಟದ ಪಕ್ಷದ ನಾಯಕರು ಹಾಗೂ ಸಲಹೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ ಎನ್ನಲಾಗುತ್ತಿದೆ.

ಆಮ್ ಆದ್ಮಿ ಪಾರ್ಟಿಯಿಂದಲೂ ಪೆಟ್ಟು: ಈ ಬಾರಿ ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ಹಾಗೂ ಎನ್‌ಡಿಎ ಪಕ್ಷಗಳಿಂದ ಮಾತ್ರವಲ್ಲ. ಆಮ್ ಆದ್ಮಿ ಪಾರ್ಟಿಯಿಂದಲೂ ಹೊಡೆತ ಬಿದಿದ್ದು, ಮತಗಳು ಭಾರೀ ಪ್ರಮಾಣದಲ್ಲಿ ವಿಭಜನೆಯಾಗಿದೆ. ಆಮ್ ಆದ್ಮಿ ಪಾರ್ಟಿಯ ಮುಖ್ಯಸ್ಥ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಹಲವು ರ್‍ಯಾಲಿಗಳನ್ನು ನಡೆಸಿದ್ದರು. ಹರಿಯಾಣ ವಿಧಾನಸಭೆ ಚುನಾವಣಾ ಕಣದಲ್ಲಿ ಆಮ್ ಆದ್ಮಿ ಪಾರ್ಟಿ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳದೆ ಪ್ರತ್ಯೇಕವಾಗಿ ಸ್ಪರ್ಧೆ ಮಾಡಿದ್ದವು. ಇದರಿಂದ ಹರಿಯಾಣದಲ್ಲಿ ಮತ ವಿಭಜನೆಯಾಗಿದೆ. ಆದರೆ, ಹರಿಯಾಣದಲ್ಲಿ ಖಾತೆ ತೆರೆಯುವಲ್ಲಿ ಆಮ್ ಆದ್ಮಿ ಪಾರ್ಟಿ ವಿಫಲವಾಗಿದೆ.
ಚುನಾವಣಾ ಪೂರ್ವದಲ್ಲೇ ಮೈತ್ರಿ ಮಾಡಿಕೊಂಡಿದ್ದರೆ, ಹರಿಯಾಣದಲ್ಲಿ ಕಾಂಗ್ರೆಸ್ ಸುಲಭವಾಗಿ ಗೆಲ್ಲುತ್ತಿತ್ತು. ಮಿತ್ರ ಹಾಗೂ ಸಣ್ಣ ಪಕ್ಷಗಳನ್ನು ಕಾಂಗ್ರೆಸ್ ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಇನ್ನು ಹರಿಯಾಣದಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳಿದ್ದು, ಮ್ಯಾಜಿಕ್ ನಂಬರ್ 46 ಆಗಿದೆ. ಬಿಜೆಪಿ ಸರಳ ಬಹುಮತಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ 37 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಆದರೆ, ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಮತ ಪ್ರಮಾಣದಲ್ಲಿ ಹೆಚ್ಚು ವ್ಯತ್ಯಾಸ ಇಲ್ಲ. ಬಿಜೆಪಿ ಶೇಕಡ 39.94ರಷ್ಟು (ಮತ ಪ್ರಮಾಣ) ಹಾಗೂ ಕಾಂಗ್ರೆಸ್ 39.09ರಷ್ಟು ಮತ ಪಡೆದಿದೆ.

ನಾವಿಲ್ಲದೆ ಸರ್ಕಾರವಿಲ್ಲ ಎಂದಿದ್ದ ಎಎಪಿ: ಹರಿಯಾಣದಲ್ಲಿ ಈ ಬಾರಿ ಆಮ್ ಆದ್ಮಿ ಪಾರ್ಟಿಯ ಸಹಕಾರವಿಲ್ಲದೆ ಯಾವುದೇ ಸರ್ಕಾರ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಆಮ್ ಆದ್ಮಿ ಪಾರ್ಟಿ ಹೇಳಿತ್ತು. ಹಲವು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿ ಪೈಪೋಟಿ ನೀಡಿತ್ತು. ಆದರೆ, ಖಾತೆ ತೆರೆಯುವಲ್ಲೂ ಎಎಪಿ ವಿಫಲವಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications