ನಿತಿನ್ ಗಡ್ಕರಿಗೆ ಬೆದರಿಕೆ ಕರೆ: ಬೆಳಗಾವಿ ಜೈಲಿನಿಂದ ಆರೋಪಿಯನ್ನು ವಶಕ್ಕೆ ಪಡೆದ ನಾಗ್ಪುರ ಪೊಲೀಸರು
ನವದೆಹಲಿ, ಮಾರ್ಚ್, 28: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಎರಡು ಬಾರಿ ಬೆದರಿಕೆ ಕರೆಗಳು ಬಂದಿದ್ದರು. ಬೆಳಗಾವಿಯ ಜೈಲಿನಿಂದ ಕೊಲೆ ಬೆದರಿಕೆ ಬಂದಿದ್ದು, ಕೊಲೆ ಪ್ರಕರಣದ ಆರೋಪಿಯನ್ನು ನಾಗ್ಪುರ ಪೊಲೀಸರು ಮಂಗಳವಾರ ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಕೊಲೆ ಆರೋಪಿಯನ್ನು ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ ಎಂದು ಗುರುತಿಸಲಾಗಿದ್ದು, ಆತನನ್ನು ಹಿಂಡಲಗಾ ಜೈಲಿನಿಂದ ಬಂಧಿಸಿ ಬೆಳಗ್ಗೆ ವಿಮಾನದಲ್ಲಿ ನಾಗ್ಪುರಕ್ಕೆ ಕರೆತರಲಾಯಿತು ಎಂದು ನಾಗ್ಪುರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೂಜಾರಿ ಪೂಜಾರಿ ವಿರುದ್ಧ ನಗರದ ಧಾಂತೋಳಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ.

ಆರೋಪಿಯನ್ನ ವಶಕ್ಕೆ ಪಡೆದ ನಾಗ್ಪುರ ಪೊಲೀಸರು
ಕೇಂದ್ರ ಸಚಿವರಿಗೆ ಬೆದರಿಕೆ ಕರೆಗಳನ್ನು ಮಾಡಿನ ಹಿಂದಿನ ಉದ್ದೇಶವನ್ನು ಅರ್ಥಮಾಡಿಕೊಳ್ಳಲು ಅವರನ್ನು ವಿಚಾರಣೆಗೆ ಒಳಪಡಿಸಲಾಗುವುಸು. ಹಾಗೆಯೇ ಪೂಜಾರಿಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ತಿಳಿಸಿದ್ದರು. ಜನವರಿ 14 ರಂದು ಈತ ನಾಗ್ಪುರ ನಗರದ ಗಡ್ಕರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಗೆ ಬೆದರಿಕೆ ಕರೆ ಮಾಡಿ 100 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದ ಎನ್ನಲಾಗಿತ್ತು.
10 ಕೋಟಿ ರೂಪಾಯಿಗೆ ಬೇಡಿಕೆ
ಅಲ್ಲದೇ ಕರೆ ಮಾಡಿದ ವ್ಯಕ್ತಿ ತಾನು ದಾವೂದ್ ಇಬ್ರಾಹಿಂ ಗ್ಯಾಂಗ್‌ನ ಸದಸ್ಯ ಎಂದು ಹೇಳಿಕೊಂಡಿದ್ದ. ಕೊನೆಗೆ 10 ಕೋಟಿ ಪಾವತಿಸದಿದ್ದರೆ ಗಡ್ಕರಿ ಅವರಿಗೆ ಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದ. ಮಾರ್ಚ್ 21ರಂದು ಕೇಂದ್ರ ಸಚಿವರ ಕಚೇರಿಗೆ ಮತ್ತೆ ಈತ ಕರೆ ಮಾಡಿದ್ದ ಎಂದು ಪೊಲೀಸ್ ತನಿಖೆ ಬಳಿಕ ಮಾಹಿತಿ ಬಹಿರಂಗಗೊಂಡಿದೆ.

ಬೆದರಿಕೆ ಕರೆಗಳ ನಂತರ ನಾಗ್ಪುರ ಸಂಸದರ ಮನೆ ಮತ್ತು ಕಚೇರಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೊಲೆ ಪ್ರಕರಣದಲ್ಲಿ ಪೂಜಾರಿಗೆ ಮರಣದಂಡನೆ ವಿಧಿಸಲಾಗಿದ್ದು, ಈತ ವಿಚಾರಣೆ ವೇಳೆ ಬೆದರಿಕೆ ಕರೆಗಳಲ್ಲಿ ನಾನು ಭಾಗಿಯಾಗಿಲ್ಲ ಎಂದು ಹೇಳಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಿತಿನ್ ಗಡ್ಕರಿಯವರಿಗೆ ಈ ಹಿಂದೆ ಕೊಲೆ ಬೆದರಿಕೆ ಬಂದಿತ್ತು. ಇತ್ತೀಚೆಗಷ್ಟೇ ಮತ್ತೊಮ್ಮೆ ಬೆದರಿಕೆ ಕರೆ ಬಂದಿದ್ದು, ಮನೆ ಮತ್ತು ಕಚೇರಿಯನ್ನು ಸ್ಫೋಟ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಯುವತಿಯ ನಂಬರ್‌ನಿಂದ ಕರೆ ಮಾಡಿದ ವ್ಯಕ್ತಿ ತನ್ನ ಹೆಸರು ಜಯೇಶ್ ಪೂಜಾರಿ ಎಂದು ಪರಿಚಯಿಸಿಕೊಂಡಿದ್ದಾನೆ ಅಂತಾ ಪೊಲೀಸರು ತಿಳಿಸಿದ್ದರು.
ಈ ಹಿಂದೆ ಕರೆ ಮಾಡಿದಾಗ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು 100 ಕೋಟಿ ರೂಪಾಯಿ ನೀಡಬೇಕೆಂದು ಬೆದರಿಕೆ ಹಾಕಿದ್ದರು. ಆದರೆ ಈ ಬಾರಿ 10 ಕೋಟಿ ರೂಪಾಯಿ ನೀಡಬೇಕು ಎಂದು ಬೆದರಿಕೆ ಒಡ್ಡಿದ್ದು, ಈ ಕುರಿತು ಪಶ್ಚಿಮ ನಾಗ್ಪುರದ ಖಮ್ಲಾದಲ್ಲಿರುವ ನಿತಿನ್ ಗಡ್ಕರಿ ಅವರ ಕಚೇರಿ ದೂರು ದಾಖಲಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಕರಣ ದಾಖಲಿಸಿಕೊಂಡ ನಾಗ್ಪುರ ಪೊಲೀಸರು ತನಿಖೆ ಮುಂದುವರೆಸಿದ್ದರು.
ಪೊಲೀಸರ ನೀಡಿದ ಮಾಹಿತಿಯ ಪ್ರಕಾರ, ನಿತಿನ್ ಗಡ್ಕರಿಯವರ ಖಮ್ಲಾ ಕಚೇರಿಗೆ ಫೋನ್ ಕರೆ ಬಂದಿತ್ತು. ಕರೆ ಮಾಡಿದವರು ಮನೆ ಮತ್ತು ಕಚೇರಿಯನ್ನು ಸ್ಫೋಟಿಸುವುದಾಗಿ ಬೆದರಿಕೆಯೊಡ್ಡಿದ್ದರು. ಈ ಕರೆಗೆ ಬಳಸಲಾದ ಸಂಖ್ಯೆ ಬೆಂಗಳೂರಿನ ಯುವತಿಗೆ ಸಂಬಂಧಿಸಿದ್ದು ಎನ್ನಲಾಗಿತ್ತು. ಈ ಯುವತಿಯು ಈವೆಂಟ್ ಮ್ಯಾನೇಜ್ಮೆಂಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಈಕೆಯ ಸ್ನೇಹಿತ ಜೈಲಿನಲ್ಲಿದ್ದಾನೆ ಎಂದು ತಿಳಿಸಿದ್ದರು. ಹಾಗೆಯೇ ಫೋನ್ ನಂಬರ್ ಜಾಲ ಹಿಡಿದ ನಾಗ್ಪುರ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದರು.
ನಮಗೆ ಎರಡು ಬೆದರಿಕೆ ಕರೆಗಳು ಬಂದಿವೆ. ಬೆದರಿಕೆ ಕರೆ ಬಂದ ತಕ್ಷಣ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ ಎಂದು ಖಮ್ಲಾ ಕಚೇರಿಯ ಹೆಚ್ಚುವರಿ ಖಾಸಗಿ ಕಾರ್ಯದರ್ಶಿ ತಿಳಿಸಿದ್ದರು.












Click it and Unblock the Notifications