ಮುಂಬೈನ 11 ಸ್ಥಳಗಳಲ್ಲಿ ಬಾಂಬ್‌ ಇರಿಸಲಾಗಿದೆ ಎಂದು ಆರ್‌ಬಿಐಗೆ ಬೆದರಿಕೆ ಮೇಲ್‌

ಮುಂಬೈ, ಡಿಸೆಂಬರ್‌ 26: ಮುಂಬೈನ 11 ಸ್ಥಳಗಳಲ್ಲಿ 11 ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗೆ ಮಂಗಳವಾರ ಬಾಂಬ್ ಬೆದರಿಕೆ ಮೇಲ್ ಬಂದಿದೆ.

ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾರತದ ಅತಿದೊಡ್ಡ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಉಲ್ಲೇಖಿಸಿ ರಾಜೀನಾಮೆ ನೀಡಬೇಕು ಎಂದು ಮೇಲ್‌ನಲ್ಲಿ ಒತ್ತಾಯಿಸಲಾಗಿದೆ.

Threat mailed to RBI saying that bomb was planted in 11 places in Mumbai

ಆರ್‌ಬಿಐ ಕಚೇರಿಗಳು, ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ಸೇರಿದಂತೆ ಮುಂಬೈನ 11 ಸ್ಥಳಗಳಲ್ಲಿ 11 ಬಾಂಬ್‌ಗಳನ್ನು ಇಡಲಾಗಿದೆ. ಮಧ್ಯಾಹ್ನ 1:30 ಕ್ಕೆ ಸ್ಫೋಟ ನಡೆಯಲಿದೆ ಎಂದು ಮೇಲ್‌ನಲ್ಲಿ ತಿಳಿಸಲಾಗಿದೆ.

"ನಾವು ಮುಂಬೈನ ವಿವಿಧ ಸ್ಥಳಗಳಲ್ಲಿ 11 ವಿಭಿನ್ನ ಬಾಂಬ್‌ಗಳನ್ನು ಹಾಕಿದ್ದೇವೆ. ಖಾಸಗಿ ವಲಯದ ಬ್ಯಾಂಕ್‌ಗಳೊಂದಿಗೆ ಆರ್‌ಬಿಐ ಭಾರತದಲ್ಲಿ ಅತಿದೊಡ್ಡ ಹಗರಣವನ್ನು ನಡೆಸಿದೆ. ಹಗರಣದಲ್ಲಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೆಲವು ಉನ್ನತ ಹಣಕಾಸು ಅಧಿಕಾರಿಗಳು ಮತ್ತು ಭಾರತದ ಕೆಲವು ಹೆಸರಾಂತ ಮಂತ್ರಿಗಳು ಭಾಗಿಯಾಗಿದ್ದಾರೆ. ನಾವು ಅದಕ್ಕೆ ಸಾಕಷ್ಟು ಪುರಾವೆಗಳನ್ನು ಹೊಂದಿದ್ದೇವೆ "ಎಂದು ಮೇಲ್‌ನಲ್ಲಿ ತಿಳಿಸಲಾಗಿದೆ.

ಬಾಂಬ್ ಅನ್ನು ಆರ್‌ಬಿಐ ಹೊಸ ಕೇಂದ್ರ ಕಚೇರಿ ಕಟ್ಟಡ, ಎಚ್‌ಡಿಎಫ್‌ಸಿ ಹೌಸ್ ಚರ್ಚ್ ಗೇಟ್, ಐಸಿಐಸಿಐ ಬ್ಯಾಂಕ್ ಬಿಕೆಸಿ ಟವರ್ಸ್ ಈ ಮೂರು ಸ್ಥಳಗಳಲ್ಲಿ ಇರಿಸಲಾಗಿದೆ ಎಂದು ಮೇಲ್‌ನಲ್ಲಿ ತಿಳಿಸಲಾಗಿದೆ.

ಆರ್‌ಬಿಐ ಗವರ್ನರ್ ಮತ್ತು ಹಣಕಾಸು ಸಚಿವರು ಕೂಡಲೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು. ಹಗರಣದ ಸಂಪೂರ್ಣ ಮಾಹಿತಿ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಬೇಕು ಎಂದು ನಾವು ಒತ್ತಾಯಿಸುತ್ತೇವೆ. ಹಗರಣದಲ್ಲಿ ಭಾಗಿಯಾದ ಎಲ್ಲರಿಗೂ ಸರ್ಕಾರ ತಕ್ಕ ಶಿಕ್ಷೆ ನೀಡಬೇಕು ಎಂದು ನಾವು ಒತ್ತಾಯಿಸುತ್ತೇವೆ. ಮಧ್ಯಾಹ್ನ 1:30 ರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಎಲ್ಲಾ 11 ಬಾಂಬ್‌ಗಳು ಒಂದೊಂದಾಗಿ ಸ್ಫೋಟಿಸುತ್ತವೆ" ಎಂದು ಮೇಲ್‌ನಲ್ಲಿ ಬರೆಯಲಾಗಿದೆ.

ಈ ಸಂಬಂಧ ಮುಂಬೈ ಪೊಲೀಸರು ಕಾರ್ಯಾಚರಣೆಗಿಳಿದಿದ್ದು, ಎಲ್ಲಾ ಸ್ಥಳಗಳಲ್ಲಿ ಸಮಗ್ರ ಶೋಧ ನಡೆಸಿದ್ದಾರೆ. ಹುಡುಕಾಟ ನಡೆಸಿದಾಗ ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ. ಎಂಆರ್‌ಎ ಮಾರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+