• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking News: ಮುಖೇಶ್ ಅಂಬಾನಿ, ಅವರ ಪತ್ನಿ ನೀತಾ ಅಂಬಾನಿಗೆ ಬೆದರಿಕೆ ಕರೆ

|
Google Oneindia Kannada News

ಮುಂಬೈ, ಅಕ್ಟೋಬರ್‌ 5: ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಬುಧವಾರ ಅಪರಿಚಿತ ದೂರವಾಣಿ ಸಂಖ್ಯೆಯಿಂದ ಬೆದರಿಕೆ ಕರೆ ಬಂದಿದೆ. ಮುಕೇಶ್‌ ಅಂಬಾನಿ, ಅವರ ಪತ್ನಿ ನೀತಾ ಅಂಬಾನಿ ಹಾಗೂ ಅವರ ಮಕ್ಕಳಿಗೆ ಜೀವ ಬೆದರಿಕೆ ಹಾಕಲಾಗಿದೆ.

ಫೋನ್‌ನಲ್ಲಿ ಕರೆ ಮಾಡಿದವರು ರಿಲಯನ್ಸ್ ಇಂಡಸ್ಟ್ರೀಸ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ, ಅವರ ಪತ್ನಿ ನೀತಾ ಅಂಬಾನಿ ಮತ್ತು ಮಕ್ಕಳಾದ ಆಕಾಶ್ ಅಂಬಾನಿ ಮತ್ತು ಅನಂತ್ ಅಂಬಾನಿ ಅವರಿಗೆ ಜೀವ ಬೆದರಿಕೆ ಹಾಕಿದ್ದಾರೆ. ಕರೆ ಸ್ವೀಕರಿಸಿದ ನಂತರ ಪೊಲೀಸರು ಮೂಲವನ್ನು ಪತ್ತೆಹಚ್ಚಲು ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಟೈಮ್ 100 ನೆಕ್ಸ್ಟ್' ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಪುತ್ರ ಆಕಾಶ್ ಅಂಬಾನಿಟೈಮ್ 100 ನೆಕ್ಸ್ಟ್' ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಪುತ್ರ ಆಕಾಶ್ ಅಂಬಾನಿ

ಈ ಸಂಬಂಧ ಡಿಬಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶೀಘ್ರದಲ್ಲೇ ಕರೆ ಮಾಡಿದವರನ್ನು ಪತ್ತೆ ಹಚ್ಚುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ವರದಿಗಳ ಪ್ರಕಾರ, ಸರ್ ಎಚ್‌ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಲ್ಯಾಂಡ್‌ಲೈನ್ ಸಂಖ್ಯೆ 1257ಗೆ ಅಪರಿಚಿತ ಸಂಖ್ಯೆಯಿಂದ ಜೀವ ಬೆದರಿಕೆ ಕರೆ ಬಂದಿತು. ಅದರಲ್ಲಿ ಕರೆ ಮಾಡಿದವರು ಮುಖೇಶ್ ಅಂಬಾನಿ, ನೀತಾ, ಆಕಾಶ್ ಮತ್ತು ಅನಂತ್‌ಗೆ ಜೀವ ಬೆದರಿಕೆ ಹಾಕಿದ್ದಾರೆ. ಫೋನ್ ಕರೆಯಲ್ಲಿ, ಕರೆ ಮಾಡಿದವರು ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಈ ವರ್ಷದ ಆಗಸ್ಟ್ 15ರಂದು, ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಇದೇ ರೀತಿಯ ಕರೆ ಮಾಡಲಾಗಿತ್ತು ಎಂದು ವರದಿಗಳು ಆಗಿದ್ದವು. ವ್ಯಕ್ತಿಯೊಬ್ಬರು ಆಸ್ಪತ್ರೆಯ ದೂರವಾಣಿ ಸಂಖ್ಯೆಗೆ ಎಂಟು ಬೆದರಿಕೆ ಕರೆಗಳನ್ನು ಮಾಡಿದ್ದು, ಮುಖೇಶ್ ಅಂಬಾನಿ ಅವರ ಜೀವಕ್ಕೆ ಬೆದರಿಕೆ ಹಾಕಿದ್ದಾರೆ. ಕಳೆದ ವರ್ಷ ಮುಕೇಶ್ ಅಂಬಾನಿ ಅವರ ಮುಂಬೈ ಮನೆ ಆಂಟಿಲಿಯಾ ಹೊರಗೆ 20 ಸ್ಫೋಟಕ ಜೆಲಾಟಿನ್ ಸ್ಟಿಕ್‌ಗಳು ಮತ್ತು ಬೆದರಿಕೆ ಪತ್ರವನ್ನು ಹೊಂದಿರುವ ಸ್ಕಾರ್ಪಿಯೋ ಸೆಡಾನ್ ಪತ್ತೆಯಾಗಿದೆ ಎಂಬುದನ್ನು ಗಮನಿಸಬಹುದು.

ಆಂಟಿಲಿಯಾ ಅವರ ಭದ್ರತಾ ತಂಡವು ಅನುಮಾನಾಸ್ಪದ ಸ್ಕಾರ್ಪಿಯೋ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ನಂತರ, ಪೊಲೀಸ್ ತಂಡವು ಬಾಂಬ್ ವಿಲೇವಾರಿ ಸ್ಕ್ವಾಡ್‌ಗಳೊಂದಿಗೆ ತ್ವರಿತವಾಗಿ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿತ್ತು.

English summary
Reliance Foundation Hospital received a life threatening call for Mukesh Ambani, his wife Nita Ambani and their children from an unknown number on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X