ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಮಿತ್ ಶಾ, ಯೋಗಿ ಆದಿತ್ಯನಾಥ್ ಮೇಲೆ ಬಾಂಬ್ ದಾಳಿ ಬೆದರಿಕೆ!

|
Google Oneindia Kannada News

ನವದೆಹಲಿ, ಏಪ್ರಿಲ್ 06: ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆಗೈಯ್ಯುವುದಾಗಿ ಕೇಂದ್ರ ಮೀಸಲು ಪೊಲೀಸ್ ಪಡೆಗೆ ಈ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದೆ.

ಆತ್ಮಾಹುತಿ ಬಾಂಬ್ ದಾಳಿ ಮೂಲಕ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಗೃಹ ಸಚಿವ ಅಮಿತ್ ಶಾ ಹತ್ಯೆ ಮಾಡುವುದಾಗಿ ಮುಂಬೈನ ಸಿಆರ್ ಪಿಎಫ್ ಪ್ರಧಾನ ಕಚೇರಿಗೆ ಈ-ಮೇಲ್ ಸಂದೇಶ ರವಾನಿಸಿರುವ ವಿಷಯ ಇತ್ತೀಚಿನ ವರದಿಗಳಿಂದ ಬೆಳಕಿಗೆ ಬಂದಿದೆ.

ನಕ್ಸಲ್ ದಾಳಿ ನಡೆದ ಸ್ಥಳಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿನಕ್ಸಲ್ ದಾಳಿ ನಡೆದ ಸ್ಥಳಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿ

ಕಳೆದ ಕೆಲವು ದಿನಗಳ ಹಿಂದೆ ಮುಂಬೈನಲ್ಲಿರುವ ಕೇಂದ್ರ ಮೀಸಲು ಪೊಲೀಸ್ ಪಡೆಯ ಪ್ರಧಾನ ಕಚೇರಿಗೆ ಬೆದರಿಕೆ ಸಂದೇಶ ರವಾನಿಸಲಾಗಿತ್ತು. ಧಾರ್ಮಿಕ ಕೇಂದ್ರ ಮತ್ತು ಪ್ರಮುಖ ನಗರಗಳಲ್ಲಿ ಆತ್ಮಾಹುತಿ ದಾಳಿ ನಡೆಸುವುದಾಗಿ ಬೆದರಿಕೆ ಹಾಕಲಾಗಿತ್ತು ಎಂದು ತಿಳಿದು ಬಂದಿದೆ.

Threatening To ‘Kill’ Amit Shah and UP CM Yogi Adityanath By 11 suicide bombers

11 ಆತ್ಮಾಹುತಿ ಬಾಂಬ್ ದಾಳಿಕೋರರ ಬಗ್ಗೆ ಎಚ್ಚರಿಕೆ:

ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹತ್ಯೆಗೆ 11 ಮಂದಿ ಆತ್ಮಾಹುತಿ ಬಾಂಬ್ ದಾಳಿಕೋರರನನ್ನು ಸಜ್ಜುಗೊಳಿಸಲಾಗಿದೆ ಎಂದು ಬೆದರಿಕೆ ಪತ್ರದಲ್ಲಿ ಎಚ್ಚರಿಕೆ ನೀಡಲಾಗಿದೆ. ಕಳೆದ ವರ್ಷ ರಾಷ್ಟ್ರೀಯ ತನಿಖಾ ತಂಡ(ಎನ್ಐಎ)ದ ಪ್ರಧಾನ ಕಚೇರಿಗೆ ಇದೇ ರೀತಿ ಬೆದರಿಕೆ ಸಂದೇಶವನ್ನು ಕಳುಹಿಸಲಾಗಿತ್ತು. ಅಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಲಾಗಿತ್ತು.

English summary
Threatening To ‘Kill’ Amit Shah and UP CM Yogi Adityanath By 11 suicide bombers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X