ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತ್ರಿಪುರಾ ಸಿಎಂ ವಿಪ್ಲವ್ ಕುಮಾರ್ ಹತ್ಯೆ ಯತ್ನ: ಮೂವರ ಬಂಧನ

|
Google Oneindia Kannada News

ಅಗರ್ತಲಾ, ಆಗಸ್ಟ್ 07: ತ್ರಿಪುರಾ ಮುಖ್ಯಮಂತ್ರಿ ವಿಪ್ಲವ್ ಕುಮಾರ್ ದೇವ್ ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಭದ್ರತೆಗಾಗಿ ನಿಯೋಜಿಸಿದ್ದ ಸಿಬ್ಬಂದಿಯು ಕಾರನ್ನು ಈ ಕಾರನ್ನು ಅಡ್ಡಗಟ್ಟಲು ಯತ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ.

ಜಾರ್ಖಂಡ್ ನ್ಯಾಯಾಧೀಶರ ಸಾವು: ಅಪಘಾತವಲ್ಲ ಕೊಲೆಜಾರ್ಖಂಡ್ ನ್ಯಾಯಾಧೀಶರ ಸಾವು: ಅಪಘಾತವಲ್ಲ ಕೊಲೆ

ಮುಖ್ಯಮಂತ್ರಿ ಅವರು ತ್ರಿಪುರಾದ ಶ್ಯಾಮ್‌ಪ್ರಸಾದ್ ಮುಖರ್ಜಿ ಲೇನ್‌ನಲ್ಲಿರುವ ತಮ್ಮ ಅಧಿಕೃತ ನಿವಾಸದ ಸಮೀಪ ಗುರುವಾರ ಸಂಜೆ ವಾಯುವಿಹಾರ ಮಾಡುತ್ತಿದ್ದಾಗ, ಈ ಮೂವರು ವ್ಯಕ್ತಿಗಳು ಭದ್ರತೆಯನ್ನು ಬೇಧಿಸಿ , ಮುಖ್ಯಮಂತ್ರಿ ಅವರ ಮೇಲೆ ಕಾರು ಹತ್ತಿಸಲು ಪ್ರಯತ್ನಿಸಿದರು. ಈ ವೇಳೆ ಮುಖ್ಯಮಂತ್ರಿಯವರು ಮಿಂಚಿನ ವೇಗದಲ್ಲಿ ಪಕ್ಕಕ್ಕೆ ಜಿಗಿದರು. ಈ ಘಟನೆಯಲ್ಲಿ ಭದ್ರತಾ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Three Arrested On Charge Of Attempting To Murder Tripura CM Biplab Deb: Police

ಮುಖ್ಯಮಂತ್ರಿ ವಿಪ್ಲವ್ ಅವರ ಕೊಲೆಗೆ ಯತ್ನಿಸಿದ ಮೂವರನ್ನು ಗುರುವಾರ ತಡರಾತ್ರಿ ಕೆರ್ಚೌಮಹಾನಿಯಲ್ಲಿ ಪೊಲೀಸರು ಬಂಧಿಸಿ, ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಶುಕ್ರವಾರ ಅವರನ್ನು ಸಿಜೆಎಂ ನ್ಯಾಯಾಧೀಶ ಪಿ.ಪಿ.ಪೌಲ್ ಎದುರು ಹಾಜರುಪಡಿಸಲಾಯಿತು. ನ್ಯಾಯಾಧೀಶರು ಮೂವರನ್ನೂ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು.

ಆರೋಪಿಗಳನ್ನು ವಿಚಾರಣೆಗಾಗಿ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದೆವು, ಆದರೆ ನ್ಯಾಯಾಧೀಶರು ಆ.19ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಪೊಲೀಸರು ಅವರು ಜೈಲಿನಲ್ಲಿ ವಿಚಾರಣೆ ನಡೆಸಲಿದ್ದಾರೆ ಎಂದು ಸೂತ್ರಧಾರ್ ತಿಳಿಸಿದ್ದಾರೆ. 20ರ ವಯಸ್ಸಿನ ಆಸುಪಾಸಿನ ಈ ಮೂವರು ಯುವಕರು, ಯಾವ ಕಾರಣಕ್ಕಾಗಿ ಈ ಕೃತ್ಯ ಎಸಗಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ, ಆದರೆ ಶೀಘ್ರ ವಿಚಾರಣೆಗೆ ಒಳಪಡಿಸಲಿದ್ದು ಸತ್ಯ ಹೊರಬೀಳಲಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಜಾರ್ಖಂಡ್‌ನಲ್ಲಿ ಇತ್ತೀಚೆಗಷ್ಟೇ ನ್ಯಾಯಾಧೀಶ ಉತ್ತಮ್ ಆನಂದ್ ಅವರ ಮೇಲೆ ಆಟೋ ಹರಿಸಿ ಕೊಲೆ ಮಾಡಲಾಗಿತ್ತು. 28ರಂದು ನ್ಯಾಯಾಧೀಶ ಉತ್ತಮ್ ಆನಂದ್ ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಆಟೋವೊಂದು ಅವರಿಗೆ ಡಿಕ್ಕಿ ಹೊಡೆದಿತ್ತು.

ತೀವ್ರವಾಗಿ ಗಾಯಗೊಂಡಿದ್ದ ಅವರ ಸ್ಥಳದಲ್ಲೇ ಮೃತಪಟ್ಟಿದ್ದರು. ಇದೊಂದು ಅಪಘಾತ ಎಂದು ಮೊದಲು ನಂಬಲಾಗಿತ್ತು. ಆದರೆ, ಸಿಸಿಟಿವಿ ದೃಶ್ಯಾವಳಿಯನ್ನು ನೋಡಿದಾಗ ಇದು ಪೂರ್ವನಿರ್ಧರಿತ ಕೊಲೆ ಎಂಬುದು ಖಚಿತವಾಗಿತ್ತು.

ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಘಟನೆಯ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದ್ದು, ಆಟೋ ಚಾಲಕ ಉದ್ದೇಶಪೂರ್ವಕವಾಗಿ ಉತ್ತಮ್ ಆನಂದ್ ಅವರಿಗೆ ಡಿಕ್ಕಿ ಹೊಡೆದಿದ್ದಈ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಡಿಕ್ಕಿ ಹೊಡೆದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆದರೆ ಇದರ ಮಾಲೀಕರಿಂದ ಆಟೋವನ್ನು ಕದ್ದು ತಂದು ನ್ಯಾಯಾಧೀಶರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್​ ತನಿಖೆಯಿಂದ ವಿಷಯ ಬೆಳಕಿಗೆ ಬಂದಿತ್ತು.

ನ್ಯಾಯಾಧೀಶ ಉತ್ತಮ್​ ಆನಂದ್​, ಇತ್ತೀಚೆಗೆ ಹೈಪ್ರೊಫೈಲ್ ಕೇಸ್​ವೊಂದರ ವಿಚಾರಣೆ ನಡೆಸಿದ್ದರು. ಅದರಲ್ಲಿ ಆರೋಪಿಗಳಿಗೆ ಜಾಮೀನು ನೀಡಲು ನಿರಾಕರಿಸಿದ್ದರು. ಇದೇ ಸಿಟ್ಟಿಗೆ ಹತ್ಯೆ ಮಾಡಿರಬಹುದೆಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದರು.

ಇತ್ತೀಚೆಗಷ್ಟೇ ಮಾಜಿ ಶಾಸಕರ ಆಪ್ತರಾಗಿದ್ದ ರಂಜಯ್ ಕೊಲೆ ಪ್ರಕರಣದಂತಹ ಹಲವಾರು ಪ್ರಮುಖ ಪ್ರಕರಣಗಳ ವಿಚಾರಣೆ ನಡೆಸಿದ್ದರು. ಅಲ್ಲದೇ ಆರೋಪಿಗೆ ಜಾಮೀನು ಮಂಜೂರು ಮಾಡಲು ನಿರಾಕರಿಸಿದ್ದರು. ಹೀಗಿರುವಾಗಲೇ ಈ ಘಟನೆ ಸಂಭವಿಸಿದ್ದು, ಆಟೋ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿದೆ ಎಂದು ಮೃತ ನ್ಯಾಯಾಧೀಶರ ತಂದೆ ಸದಾನಂದ್ ಪ್ರಸಾದ್ ಆರೋಪಿಸಿದ್ದರು.

ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಘಟನೆಯ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದ್ದು, ಆಟೋ ಚಾಲಕ ಉದ್ದೇಶಪೂರ್ವಕವಾಗಿ ಉತ್ತಮ್ ಆನಂದ್ ಅವರಿಗೆ ಹಿಂದಿನಿಂದ ಆಟೋ ಹರಿಸಿದಂತೆ ತೋರುತ್ತದೆ.

ಧನ್ಬಾದ್‌ನ ಸೆಷನ್ಸ್ ನ್ಯಾಯಾಧೀಶರು ಗಾಲ್ಫ್ ಮೈದಾನದ ಬಳಿಯ ನಿರ್ಜನ ರಸ್ತೆಯಲ್ಲಿ ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ನ್ಯಾಯಾಧೀಶರು ಹಿರಾಪುರದ ಜೂಡ್ ಕಾಲೋನಿಯಲ್ಲಿರುವ ತಮ್ಮ ಮನೆಯಿಂದ 500 ಮೀಟರ್‌ಗಿಂತಲೂ ಕಡಿಮೆ ದೂರದಲ್ಲಿ ಮೃತಪಟ್ಟಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕ ಹಾಗೂ ಆತನ ಜತೆಗಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ವರದಿ ಹೇಳಿದೆ.

ಇತ್ತೀಚೆಗಷ್ಟೇ ಮಾಜಿ ಶಾಸಕರ ಆಪ್ತರಾಗಿದ್ದ ರಂಜಯ್ ಕೊಲೆ ಪ್ರಕರಣದಂತಹ ಹಲವಾರು ಪ್ರಮುಖ ಪ್ರಕರಣಗಳ ವಿಚಾರಣೆ ನಡೆಸಿದ್ದರು. ಅಲ್ಲದೇ ಆರೋಪಿಗೆ ಜಾಮೀನು ಮಂಜೂರು ಮಾಡಲು ನಿರಾಕರಿಸಿದ್ದರು. ಹೀಗಿರುವಾಗಲೇ ಈ ಘಟನೆ ಸಂಭವಿಸಿದ್ದು, ಆಟೋ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿದೆ ಎಂದು ಮೃತ ನ್ಯಾಯಾಧೀಶರ ತಂದೆ ಸದಾನಂದ್ ಪ್ರಸಾದ್ ಆರೋಪಿಸಿದ್ದರು.

English summary
Three men were arrested on the charge of attempting to murder Tripura Chief Minister Biplab Kumar Deb, police said on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X