School Holiday: ಮೂರು ದಿನ ಶಾಲೆಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆ
School Holiday: ಪ್ರಾಕೃತಿಕ ವಿಕೋಪಗಳ ಸಂದರ್ಭಗಳಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಿಸಲಾಗುತ್ತದೆ. ಹಾಗೆಯೇ ಇದೀಗ ಚಂಡಮಾರುತದ ಪರಿಚಲನೆಯಿಂದ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಈ ಭಾಗದ ಶಾಲೆಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆಯಿದೆ. ಹಾಗಾದ್ರೆ ಎಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕರ್ನಾಟಕದಲ್ಲಿ ಈಗಾಗಲೇ ವರ್ಷದ ಆರಂಭದಿಂದಲೂ ಇಲ್ಲಿವರೆಗೂ ಸರ್ಕಾರಿ ರಜೆಗಳನ್ನು ಹೊರತುಪಡಿಸಿ ಕೆಲ ಕಡೆ ಪ್ರತಿಭಟನೆ, ವಿಶೇಷ ಕಾರ್ಯಕ್ರಮಗಳ ಹಿನ್ನೆಲೆ ಸಾಲು ರಜೆಗಳನ್ನೇ ನೀಡಲಾಗಿದೆ. ಮತ್ತೊಂದೆಡೆ ಪರೀಕ್ಷೆಗಳು ಮುಗಿಯುವ ಹಂತದಲ್ಲಿದ್ದು, ಶಾಲೆಗಳಿಗೆ ಬೇಸಿಗೆ ರಜೆಗಳು ಸಿಗಲಿವೆ. ಇದರಿಂದ ಈ ಬಾರಿ ವಿದ್ಯಾರ್ಥಿಗಳಿಗೆ ರಜೆಗಳ ಹಬ್ಬದೂಟವನ್ನೇ ಬಡಿಸಿದಂತಾಗಿದೆ. ಇನ್ನೂ ಕೆಲ ರಾಜ್ಯಗಳಲ್ಲಿ ಬೇರೆಯದ್ದೇ ಕಾರಣಗಳಿಂದ ರಜೆ ಘೋಷಿಸಲಾಗಿದೆ.

ಈ ವರ್ಷದ ಆರಂಭದಿಂದಲೂ ಕರ್ನಾಟಕ ಹೊರತುಪಡಿಸಿ ಬೇರೆ ರಾಜ್ಯಗಳಲ್ಲಿ ಶಾಲೆಗಳುಗೆ ಹೆಚ್ಚು ರಜೆಗಳನ್ನು ಘೋಷಣೆ ಮಾಡಲಾಗಿದೆ. ಇನ್ನೂ ಇದೀಗ ಬಿರು ಬಿಸಿಲು ಮುಂದುವರೆದ ಕಾರಣ ಅವಧಿಗೂ ಮುನ್ನ ಬೇಸಿಗೆ ರಜೆ ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಅದರಂತೆಯೇ ಎಲ್ಲಾ ರಾಜ್ಯಗಳಲ್ಲಿ ಪೋಷಕರು ಸಹ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಯಾವಾಗ ರಜೆ ಘೋಷಣೆ ಮಾಡಲಾಗುತ್ತದೆ ಎಂದು ಕಾದು ಕುಳಿತಿದ್ದರು.
ಇದೀಗ ಪರೀಕ್ಷೆಗಳು ಕೂಡ ಮುಗಿಯುವ ಹಂತದಲ್ಲಿದ್ದು, ಇನ್ನೂ ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗುತ್ತದೆ. ಮತ್ತೊಂದೆಡೆ ಇದೀಗ ಚಂಡಮಾರುತರ ಪರಿಚಲನೆ ಹಿನ್ನೆಲೆ ತೆಲಂಗಾಣದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಆದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಭಾಗದ ಶಾಲೆಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಈಗಾಗಲೇ ನಿನ್ನೆ (ಮಾರ್ಚ್ 21) ಮಧ್ಯಾಹ್ನದಿಂದ ತೆಲಂಗಾಣದಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಸಹಿತ ಮಳೆ ಮುಂದುವರೆದಿದೆ. ಹವಾಮಾನ ಇಲಾಖೆಯು ಈಗಾಗಲೇ ಶನಿವಾರ, ಭಾನುವಾರ ಮತ್ತು ಸೋಮವಾರವೂ ಕೂಡ ಮಳೆ ಮುಂದುವರೆಯಲಿದ ಎಂದು ಮುನ್ಸೂಚನೆ ನೀಡಿದೆ.
ಈಗಾಗಲೇ ಸುರಿದ ಭಾರೀ ಮಳೆಯಿಂದ ಹಲವೆಡೆ ರಸ್ತೆಗಳ ಮೇಲೆ ಮರಗಳು ಬಿದ್ದಿವೆ. ಇನ್ನು ಇಂದು (ಮಾರ್ಚ್ 22) ಗುಡುಗು, ಮಿಂಚು ಸಹಿತ ಬಿರುಗಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಶುಕ್ರವಾರ ಸುರಿದ ಮಳೆಯಿಂದ ತೆಲಂಗಾಣದಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಇನ್ನು ಇಂದಿನಿಂದ ಸತತ ಮೂರು ದಿನ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಶಾಲೆಗಳಿಗೆ ರಜೆ ನೀಡಬೇಕೆಂದು ವಿದ್ಯಾರ್ಥಿಗಳ ಪೋಷಕರು ಮನವಿ ಮಾಡಿದ್ದಾರೆ.
ಇದೀಗ ಚಂಡಮಾರುತದ ಪರಿಚಲನೆ ಹಿನ್ನೆಲೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ಇರುವುದರಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಆತಂಕ ಪಡುವಂತಾಗಿದೆ. ಆದ್ದರಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡುವಂತೆ ಮನವಿ ಮಾಡಿದ್ದಾರೆ. ಈ ಮನವಿಯನ್ನು ಆಯಾ ಹೆಚ್ಚು ಮಳೆ ಇರುವ ಜಿಲ್ಲಾಡಳಿತಗಳು ಸ್ವೀಕರಿಸುತ್ತವೆಯೋ ಎಂದು ಕಾದುನೋಡಬೇಕಿದೆ.
ಕಳೆದ ಕೆಲವು ದಿನಗಳಿಂದ ಬಿಸಿಲಿನ ತಾಪದಿಂದ ಬಳಲುತ್ತಿದ್ದ ರಾಜ್ಯದ ಜನತೆಗೆ ನಿನ್ನೆ ಸುರಿದ ಮಳೆ ಸ್ವಲ್ಪ ನೆಮ್ಮದಿ ತಂದಿದೆ. ಇಂದು ಸಹ ಆಂಧ್ರಪ್ರದೇಶದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಭಾಗದಲ್ಲಿ ಗಂಟೆಗೆ 50 ಕಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮತ್ತೆ ಮುಂದಿನ ಎರಡು ದಿನಗಳ ನಂತರ ತಾಪಮಾನದಲ್ಲಿ ಹೆಚ್ಚಾಗುವ ಸಾಧ್ಯತೆಯಿದೆ. ಆದರೆ, ಇಂದು ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ವಿಶಾಖಪಟ್ಟಣಂ ಚಂಡಮಾರುತ ಕೇಂದ್ರ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.












Click it and Unblock the Notifications