ಪಾಕ್ ಉಗ್ರರ ದಾಳಿಗೆ ಮೂವರು ಭಾರತೀಯ ಸೈನಿಕರು ಹುತಾತ್ಮ

ಜಮ್ಮು, ಫೆಬ್ರವರಿ 04 : ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಗಡಿ ನಿಯಂತ್ರಣಾ ರೇಖೆಯ ಬಗ್ಗೆ ಪಾಕಿಸ್ತಾನಿ ಉಗ್ರರು ನಡೆಸಿದ ಅಪ್ರಚೋದಿತ ದಾಳಿಯಲ್ಲಿ ಭಾರತದ ಮೂವರು ಸೈನಿಕರು ಭಾನುವಾರ ಹುತಾತ್ಮರಾಗಿದ್ದಾರೆ, ಇಬ್ಬರು ಗಾಯಗೊಂಡಿದ್ದಾರೆ.

ಯುದ್ಧ ವಿರಾಮ ಉಲ್ಲಂಘನೆ ಮಾಡಿದ ಪಾಕಿಸ್ತಾನಿ ಉಗ್ರರು ಭಾರತದ ಮಿಲಿಟರಿ ನೆಲೆ ಮತ್ತು ಪೂಂಛ್ ಮತ್ತು ರಾಜೌರಿ ಜಿಲ್ಲೆಯ ಗ್ರಾಮದಲ್ಲಿ ಸೇನೆಯ ಮೇಲೆ ಗುಂಡಿನ ದಾಳಿ ನಡೆಸಿದರು. ಭಾರತದ ಸೈನಿಕರು ಕೂಡ ಪ್ರತಿದಾಳಿ ನಡೆಸುತ್ತಿದ್ದಾರೆ.

ರಾಜೌರಿ ಜಿಲ್ಲೆಯ ಭಿಂಬರ್ ಗಾಲಿ ಸೆಕ್ಟರ್ ನಲ್ಲಿ ಭಾನುವಾರ ಸಂಜೆ ಗುಂಡಿನ ಚಕಮಕಿ ನಡೆದಿದ್ದು, ಸೇನೆ ಕೂಡ ಪ್ರತಿದಾಳಿ ನಡೆಸಿದೆ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಉಗ್ರರ ದಾಳಿಯಲ್ಲಿ 15 ವರ್ಷದ ಶಹನಾಜ್ ಬಾನೋ ಮತ್ತು ಯಾಸಿನ್ ಆರಿಫ್ ಎಂಬಿಬ್ಬರು ಗಾಯಗೊಂಡಿದ್ದಾರೆ.

Three Indian jawans martyred in attack by Pakistan

ಗಡಿ ನಿಯಂತ್ರಣಾ ರೇಖೆ ಮತ್ತು ಜಮ್ಮು ಬಳಿಯ ಅಂತಾರಾಷ್ಟ್ರೀಯ ಗಡಿಯ ಬಳಿ ಪಾಕಿಸ್ತಾನಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಈ ವರ್ಷ 9 ಭಾರತೀಯ ಭದ್ರತಾ ಸಿಬ್ಬಂದಿಗಳು ಸೇರಿದಂತೆ 17 ಜನರು ಹತರಾಗಿದ್ದು, 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. (ಪಿಟಿಐ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+