Get Updates
Get notified of breaking news, exclusive insights, and must-see stories!

Jammu & Kashmir: ಇಬ್ಬರು ಭಯೋತ್ಪಾದಕರ ಹತ್ಯೆ; ಮೂವರು ಪೊಲೀಸ್ ಸಿಬ್ಬಂದಿ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಮ್ಮೆ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ಗುರುವಾರ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭಯೋತ್ಪಾದಕರ ಜೊತೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಬ್ಬರು ಭಯೋತ್ಪಾದಕರು ಸಹ ಗುಂಡೇಟಿಗೆ ಬಲಿಯಾಗಿದ್ದು, ಮೂರರಿಂದ ನಾಲ್ಕು ಭಯೋತ್ಪಾದಕರು ಅಡಗಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಗುಂಡಿನ ಚಕಮಕಿಯಲ್ಲಿ ಐವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಸೇನೆ, ರಾಷ್ಟ್ರೀಯ ಭದ್ರತಾ ಪಡೆ, ಗಡಿ ಭದ್ರತಾ ಪಡೆ, ಪೊಲೀಸರು, ವಿಶೇಷ ಕಾರ್ಯಾಚರಣೆ ಗುಂಪು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆಯ ತಂಡಗಳು ಕಳೆದ ನಾಲ್ಕು ದಿನಗಳಿಂದ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದವು.

three officers killed two terrorists shot jammu and kashmir

ಭಾನುವಾರ ಈ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಸ್ಥಳೀಯ ನಿವಾಸಿಯೊಬ್ಬರು ಮಂಗಳವಾದ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕಥುವಾದಲ್ಲಿನ ರಾಜ್‌ಬಾಗ್ ಪೊಲೀಸ್ ಠಾಣೆ ವ್ಯಾಪ್ತಿಯ ಜುಥಾನಾ ಅರಣ್ಯ ಪ್ರದೇಶದಲ್ಲಿ ಉಗ್ರರೊಂದಿಗೆ ಮುಖಾಮುಖಿಯಾಗಿದೆ ಎಂದು ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಐಎಎನ್‌ಎಸ್‌ಗೆ ತಿಳಿಸಿದ್ದಾರೆ, ಆದರೆ ಭಾನುವಾರ ಯಾವುದೇ ಗುಂಡಿನ ಚಕಮಕಿ ನಡೆದಿರಲಿಲ್ಲ.

ಹೆಲಿಕಾಪ್ಟರ್‌ಗಳು, ಡ್ರೋನ್‌ಗಳು, ಗುಂಡು ನಿರೋಧಕ ವಾಹನಗಳು ಮತ್ತು ಸ್ನಿಫರ್ ನಾಯಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದವು. ಭದ್ರತಾ ಪಡೆಗಳು ಹಲವಾರು ಜನರನ್ನು ಪ್ರಶ್ನಿಸಿ ಮೂವರು ಶಂಕಿತರನ್ನು ಬಂಧಿಸಿವೆ. ಮಂಗಳವಾರ, ಭದ್ರತಾ ಪಡೆಗಳು ಎರಡು ಗ್ರೆನೇಡ್‌ಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದವು.

ಸನ್ಯಾಲ್ ಕಾಡುಗಳಲ್ಲಿ ದೊಡ್ಡ ಪ್ರಮಾಣದ ಮದ್ದು ಗುಂಡುಗಳು ಮತ್ತು ಇತರ ಸಾಮಗ್ರಿಗಳ ನಡುವೆ ಕಂಡುಬಂದ ಟ್ರ್ಯಾಕ್‌ಸೂಟ್‌ಗಳು ಕಳೆದ ವರ್ಷ ಜೂನ್ ಮತ್ತು ಆಗಸ್ಟ್‌ನಲ್ಲಿ ಅಸ್ಸಾರ್ ಕಾಡುಗಳು ಮತ್ತು ದೋಡಾದಲ್ಲಿ ಕೊಲ್ಲಲ್ಪಟ್ಟ ನಾಲ್ವರು ಜೈಶ್-ಎ-ಮುಹಮ್ಮದ್ (ಜೆಇಎಂ) ಉಗ್ರರು ಧರಿಸಿದ್ದ ಬಟ್ಟೆಯನ್ನೇ ಹೋಲುತ್ತವೆ ಎಂದು ವರದಿಯಾಗಿದೆ.

ಭಾನುವಾರ ಗುಂಡಿನ ಚಕಮಕಿ

ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ನಳಿನ್ ಪ್ರಭಾತ್ ನೇತೃತ್ವದಲ್ಲಿ ಭಾನುವಾರ ಸಂಜೆ ಹಿರಾನಗರ ವಲಯದಲ್ಲಿ ಕಾರ್ಯಾಚರಣೆ ಪ್ರಾರಂಭಿಸಲಾಗಿತ್ತು. ಪಾಕಿಸ್ತಾನದ ಗಡಿಯಿಂದ ಸುಮಾರು 5 ಕಿ.ಮೀ ದೂರದಲ್ಲಿರುವ ಸನ್ಯಾಲ್ ಗ್ರಾಮದ ನರ್ಸರಿಯ ಆವರಣದ ಒಳಗೆ ಭಯೋತ್ಪಾದಕರು ಅಡಗಿರುವ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪಿಗೆ ಗುಪ್ತಚರ ಮಾಹಿತಿ ಸಿಕ್ಕಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಡಗಿ ಕುಳಿತಿದ್ದ ಭಯೋತ್ಪಾದಕರು ಮೊದಲು ಗುಂಡು ಹಾರಿಸಿದ್ದು ಬಳಿಕ ಗುಂಡಿನ ಚಕಮಕಿ ಆರಂಭವಾಗಿದೆ. ಅರ್ಧಗಂಟೆಗೂ ಹೆಚ್ಚಿನ ಸಮಯ ಗುಂಡಿನ ಚಕಮಕಿ ನಡೆದಿದ್ದು ಇಬ್ಬರು ಭಯೋತ್ಪಾದರನ್ನು ಹೊಡೆದುರುಳಿಸಲಾಗಿದೆ. ಶನಿವಾರ ಭಯೋತ್ಪಾದಕರು ಅಕ್ರಮವಾಗಿ ನುಸುಳಿದ್ದಾರೆ ಎಂದು ಹೇಳಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+