ಗಡಿ ನುಸುಳಲು ಯತ್ನಿಸಿದ ಮತ್ತೆ ಮೂವರು ಉಗ್ರರಿಗೆ ಸೇನೆ ಗುಂಡು
ಜಮ್ಮು ಮತ್ತು ಕಾಶ್ಮೀರ, ಸೆ.24: ಜಮ್ಮು ಮತ್ತು ಕಾಶ್ಮೀರ ಗಡಿ ನುಸುಳಲು ಯತ್ನಿಸಿದ್ದ ಮತ್ತೆ ಮೂವರು ಉಗ್ರರನ್ನು ಭಾರತೀಯ ಸೇನೆ ಸದೆಬಡಿದಿದೆ.
ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಉಗ್ರರ ಒಳನುಸುಳಲು ಯತ್ನಿಸುತ್ತಿದ್ದ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆ ವೇಳೆ ಮೂವರು ಉಗ್ರರನ್ನು ಭಾರತೀಯ ಸೇನೆ ಹತ್ಯೆಗೈದಿದೆ. ಕಾರ್ಯಾಚರಣೆ ವೇಳೆ ಓರ್ವ ಯೋಧ ಕೂಡ ಹುತಾತ್ಮರಾಗಿದ್ದಾರೆ.
ಗಡಿ ನಿಯಂತ್ರಣ ರೇಖೆಯ ಬಳಿಯಲ್ಲಿ ಶಂಕಿತ ಉಗ್ರರ ಅನುಮಾನಾಸ್ಪದ ರೀತಿಯ ಚಲನವಲನವನ್ನು ಕಂಡು ಗುಂಡಿನ ಕಾಳಗ ನಡೆಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಓರ್ವ ಯೋಧನು ಕೂಡ ಹುತಾತ್ಮರಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದು ಸೇನಾಧಿಕಾರಿ ತಿಳಿಸಿದ್ದಾರೆ.

ಭಾನುವಾರವಷ್ಟೇ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಸೆ.24(ಸೋಮವಾರ) ಮತ್ತೆ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ, ಈ ಕಾರ್ಯಾಚರಣೆಯಲ್ಲಿ ಇದುವರೆಗೂ ಐವರು ಉಗ್ರರನ್ನು ಬಲಿ ತೆಗೆದುಕೊಳ್ಳಲಾಗಿದೆ ಎಂದು ಸೇನಾಧಿಕಾರಿ ತಿಳಿಸಿದ್ದಾರೆ.












Click it and Unblock the Notifications